ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು (star tortoises) ಡಿಆರ್‌ಐ ಅಧಿಕಾರಿಗಳು ನಗರದ ಗಾಂಧಿನಗರದಲ್ಲಿ ವಶಕ್ಕೆ ಪಡೆದಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.
ಹತ್ತು ಸಾವಿರಕ್ಕೆ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸಿದ್ದು, ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಓರ್ವ ವ್ಯಕ್ತಿ ಕಲಾಸಿಪಾಳ್ಯದಿಂದ ನಕ್ಷತ್ರ ಆಮೆಗಳನ್ನು ತಂದುಕೊಟ್ಟಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ನಕ್ಷತ್ರ ಆಮೆಗಳನ್ನು ಇಟ್ಟುಕೊಂಡರೆ ಅದೃಷ್ಟ ಬರುತ್ತದೆ ಎಂದು ಆರೋಪಿಗಳು ನಂಬಿಸುತ್ತಿದ್ದರು. ಮಾರಾಟಕ್ಕೆ ಯತ್ನಿಸಿದ ವೇಳೆ ಆಮೆಗಳನ್ನು ಜಪ್ತಿ ಮಾಡಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಮಹಿಳೆ ಅನುಮಾನಾಸ್ಪದ ಸಾವು
ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಚೊಕ್ಕಹಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕು ಇನಮಿಂಚೇನಹಳ್ಳಿಯ ನಿವಾಸಿ ಚೈತ್ರಾ ಮೃತ ಮಹಿಳೆ. ಚೈತ್ರಾ 7-8 ವರ್ಷಗಳ ಹಿಂದೆ ಗಂಡನನ್ನ ಬಿಟ್ಟು ಬೇರೆ ಮನೆಯಲ್ಲಿ ವಾಸವಾಗಿದ್ದರು. 10 ಹಾಗೂ 12 ವರ್ಷದ ಮಕ್ಕಳೊಂದಿಗೆ ಚೈತ್ರಾ ಬೇರೆ ವಾಸವಾಗಿದ್ದರು.
ಕೋಲಾರ ಮೂಲದ ಪ್ರಿಯಕರ ಶಬ್ಬೀರ್ ಎಂಬಾತನ ವಿರುದ್ಧ ಹಲ್ಲೆ, ಕೊಲೆ ಆರೋಪ ಕೇಳಿಬಂದಿದೆ. ಚೈತ್ರಾಳನ್ನ ಪಕ್ಕದ ಮನೆಯವರ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಿ ಶಬ್ಬೀರ್ ಎಸ್ಕೇಪ್ ಆಗಿದ್ದಾನೆ. ಚೈತ್ರಾಳ ಮೊಬೈಲ್ ತೆಗೆದುಕೊಂಡು ಪ್ರಿಯಕರ ಶಬ್ಬೀರ್ ಪರಾರಿಯಾಗಿದ್ದಾನೆ. ನಂದಿಗಿರಿಧಾಮ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.