ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Dasara Holidays 2026: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಈ ಬಾರಿ 19 ದಿನ ದಸರಾ ರಜೆ!

ಶಿಕ್ಷಣ ಇಲಾಖೆಯ ಆದೇಶವು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅನುಸರಿಸುವ ಖಾಸಗಿ ಶಾಲೆಗಳಿಗೆ ಅನ್ವಯವಾಗಲಿದೆ. ​ದಸರಾ ಹಬ್ಬದ 19 ದಿನಗಳ ಸುದೀರ್ಘ ವಿರಾಮದ ನಂತರ, ಅಕ್ಟೋಬರ್ 22ರ ಗುರುವಾರದಿಂದ ರಾಜ್ಯಾದ್ಯಂತ ಶಾಲೆಗಳು ಪುನರಾರಂಭಗೊಳ್ಳಲಿವೆ.

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮುಂಬರುವ ದಸರಾ ಹಬ್ಬದ ಪ್ರಯುಕ್ತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 19 ದಿನಗಳ ಕಾಲ ಸುದೀರ್ಘ ಮಧ್ಯಂತರ ರಜೆ (Dasara Holidays 2026) ಘೋಷಿಸಲಾಗಿದೆ.

​ಇಲಾಖೆ ಪ್ರಕಟಿಸಿರುವ ಅಧಿಕೃತ ದಿನಾಂಕಗಳ ಪ್ರಕಾರ, ಅಕ್ಟೋಬರ್ 3ರಿಂದ ದಸರಾ ರಜೆಗಳು ಆರಂಭವಾಗಲಿವೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ನಿಮಿತ್ತ ಸಾರ್ವತ್ರಿಕ ರಜೆ ಇರಲಿದ್ದು, ಅದರ ಮರುದಿನದಿಂದಲೇ ಸಾಲು ಸಾಲು ರಜೆಗಳು ದೊರೆಯಲಿವೆ. ಅಕ್ಟೋಬರ್ 21ರ ವಿಜಯದಶಮಿ ಹಬ್ಬದವರೆಗೂ ವಿದ್ಯಾರ್ಥಿಗಳಿಗೆ ರಜೆ ಸಿಗಲಿದೆ.

​ಈ ಪ್ರಕಟಣೆಯು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅನುಸರಿಸುವ ಖಾಸಗಿ ಶಾಲೆಗಳಿಗೆ ಅನ್ವಯವಾಗಲಿದೆ. ಆದರೆ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಮಂಡಳಿಯ ಕೆಲವು ಸ್ವತಂತ್ರ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಆಡಳಿತ ಮಂಡಳಿಯ ನಿಯಮಾವಳಿಗಳಿಗೆ ಅನುಗುಣವಾಗಿ 10ರಿಂದ 15 ದಿನಗಳ ರಜೆಯನ್ನು ನಿಗದಿಪಡಿಸುವ ಸಾಧ್ಯತೆಯಿದೆ.

ಮೈಸೂರು ದಸರಾದಲ್ಲಿ ತುಮಕೂರು ಜಿಲ್ಲೆಯ ಸ್ತಬ್ಧಚಿತ್ರ ತಿರಸ್ಕಾರಕ್ಕೆ ಖಂಡನೆ

​ದಸರಾ ಹಬ್ಬದ 19 ದಿನಗಳ ಸುದೀರ್ಘ ವಿರಾಮದ ನಂತರ, ಅಕ್ಟೋಬರ್ 22ರ ಗುರುವಾರದಿಂದ ರಾಜ್ಯಾದ್ಯಂತ ಶಾಲೆಗಳು ಪುನರಾರಂಭಗೊಳ್ಳಲಿವೆ. ಅಂದಿನಿಂದಲೇ ಪ್ರಸ್ತುತ ಶೈಕ್ಷಣಿಕ ಸಾಲಿನ ದ್ವಿತೀಯ ಅರ್ಧವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳು ಅಧಿಕೃತವಾಗಿ ಚಾಲನೆ ಪಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.