ಬೆಂಗಳೂರು: ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಕಳೆದ ನಾಲ್ಕು ವರ್ಷಗಳ ಪ್ರಯತ್ನದ ಫಲವಾಗಿ ರಾಜ್ಯದ ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಶೇ.2ರಷ್ಟು ಮೀಸಲಾತಿ, ಅರಣ್ಯ ಮತ್ತು ಪೊಲೀಸ್ ಇಲಾಖೆಗಳಲ್ಲಿ ಶೇ.3ರಷ್ಟು ಮೀಸಲಾತಿ ಆದೇಶವನ್ನು ಸರಕಾರ ಸೋಮವಾರ ಪ್ರಕಟಿಸಿದೆ.
ಇದನ್ನೂ ಓದಿ: LIC All-India Sports : ಬೆಂಗಳೂರಿನಲ್ಲಿ ಎಲ್‌ಐಸಿ ಅಖಿಲ ಭಾರತ ಕ್ರೀಡಾಕೂಟಕ್ಕೆ ಚಾಲನೆ
ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಹುದ್ದೆಗಳ ಸೇವೆಗಳಲ್ಲಿನ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ನೀಡಲು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮಗಳು-2026ಕ್ಕೆ ಸಂಪುಟ ಸಭೆ ಅನುಮೋದನೆ ನೀಡಲಾಗಿತ್ತು. ಇದೀಗ ಮೀಸಲಾತಿ ಆದೇಶವನ್ನು ಸರಕಾರ ಪ್ರಕಟಿ ಸಿದೆ. ಇದರಿಂದ ರಾಜ್ಯದ ಕ್ರೀಡಾಪಟುಗಳು ಕೆಒಎ ಕಾರ್ಯಕ್ಕೆ ಧನ್ಯವಾದ ಅರ್ಪಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಸರಕಾರದ ಆದೇಶವನ್ನು ಫಿಬಾ ಅಧ್ಯಕ್ಷರು, ಕೆಒಎ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ. ಗೋವಿಂದರಾಜ್ ಸ್ವಾಗತಿಸಿದ್ದಾರೆ.
![]()
ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನ ಮೊತ್ತ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿ ಮರುಪರಿಶೀಲಿಸಲಾಗುತ್ತಿದ್ದು, ಈ ಕುರಿತು ಈಗಾಗಲೇ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗಿದೆ. ಕ್ರೀಡಾಪಟುಗಳಿಗೆ ಎಷ್ಟು ಬಹುಮಾನ ಮೊತ್ತ ನೀಡಬೇಕು ಎಂಬುದನ್ನು ಘೋಷಿಸಲಾಗುವುದು.
- ಡಾ.ಜಿ.ಪರಮೇಶ್ವರ, ಉಪಮುಖ್ಯಮಂತ್ರಿ