ಇನ್ನೂ 23 ತಾಲೂಕು ಬರ ಪಟ್ಟಿಗೆ: ಬರ ಬಾಧೆ: 2ನೇ ಪಟ್ಟಿಯಲ್ಲಿ 23 ತಾಲೂಕು ಸೇರ್ಪಡೆ
ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದ ಮುಂಗಾರು ಮಳೆ ಬಾರದೇ ಇರುವುದರಿಂದ ರಾಜ್ಯ ಸರಕಾರ 2ನೇ ಹಂತದ ಬರ ತಾಲೂಕುಗಳ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಹಂತದಲ್ಲಿ 17 ಜಿಲ್ಲೆಗಳ 23 ತಾಲೂಕುಗಳು ಸೇರಿವೆ. ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಸೃಷ್ಟಿಯಾಗಿದ್ದು, ಈಗಾಗಲೇ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ರಾಜ್ಯ ಸರಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿತ್ತು.
-
ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದ ಮುಂಗಾರು ಮಳೆ ಬಾರದೇ ಇರುವುದರಿಂದ ರಾಜ್ಯ ಸರಕಾರ 2ನೇ ಹಂತದ ಬರ ತಾಲೂಕುಗಳ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಹಂತದಲ್ಲಿ 17 ಜಿಲ್ಲೆಗಳ 23 ತಾಲೂಕುಗಳು ಸೇರಿವೆ. ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಸೃಷ್ಟಿಯಾಗಿದ್ದು, ಈಗಾಗಲೇ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ರಾಜ್ಯ ಸರಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿತ್ತು.
ಗುರುವಾರ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಒಟ್ಟಾರೆ 124 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ 139 ತಾಲೂಕುಗಳಲ್ಲಿ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು. ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ನೈಸರ್ಗಿಕ ವಿಕೋಪಗಳ ಸಂಪುಟ ಉಪಸಮಿತಿ ಸಭೆಯಲ್ಲಿ ನೀಡಿದ ನಿರ್ದೇಶನದಂತೆ, 24 ತಾಲೂಕುಗಳ 214 ಹಳ್ಳಿಗಳಲ್ಲಿ ಮೊಬೈಲ್ ಆಪ್ ಮೂಲಕ ‘ಗ್ರೌಂಡ್ ಟ್ರೂಥಿಂಗ್’ ನಡೆಸಲಾಗಿತ್ತು.
ಎಲ್ಲೆಲ್ಲಿ ತೀವ್ರ ಬರಸ್ಥಿತಿ?
ತುಮಕೂರು ಜಿಲ್ಲೆಯ ತಿಪಟೂರು, ಕೊಪ್ಪಳ ಜಿಲ್ಲೆಯ ಕಾರಟಗಿ, ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು ಮತ್ತು ಸಿರಿವಾರ; ಕಲಬುರಗಿ ಜಿಲ್ಲೆಯ ಅಫಜಲಪುರ, ಆಳಂದ, ಚಿತ್ತಾಪುರ, ಕಲಬುರಗಿ, ಯಡ್ರಾಮಿ ಮತ್ತು ಶಹಾಬಾದ್; ಬೀದರ್ ಜಿಲ್ಲೆಯ ಭಾಲ್ಕಿ; ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಬಬಲೇಶ್ವರ ಮತ್ತು ತಿಕೋಟ; ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ; ಧಾರವಾಡ ಜಿಲ್ಲೆಯ ಹುಬ್ಬಳ್ಳಿ, ನವಲಗುಂದ, ಹುಬ್ಬಳ್ಳಿ ನಗರ ಮತ್ತು ಅಣ್ಣಿಗೇರಿ; ಚಿಕ್ಕಮಗಳೂರು ಜಿಲ್ಲೆಯ ಕಡೂರು. ಸಾಧಾರಣ ಬರಪೀಡಿತ ತಾಲೂಕುಗಳಾಗಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ಮತ್ತು ವೀರಾಜಪೇಟೆ.