ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

2nd Ayurveda World Summit: ಬೆಂಗಳೂರಿನಲ್ಲಿ ಡಿ.25ರಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ; ರಥಯಾತ್ರೆಗೆ ಚಾಲನೆ

ಡಿಸೆಂಬರ್ 25 ರಿಂದ ಡಿಸೆಂಬರ್ 28 ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಆಯುರ್ವೇದ ಸಮ್ಮೇಳನದ ಜನಜಾಗೃತಿಗಾಗಿ ಏಳು ರಾಜ್ಯಗಳಲ್ಲಿ ಸಂಚರಿಸುವ ರಥಯಾತ್ರೆಗೆ ಮಲ್ಲೇಶ್ವರದ ಶ್ರೀ ಸಿದ್ಧಿವಿನಾಯಕ ದೇವರ ಸನ್ನಿಧಿಯಲ್ಲಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ಬೆಂಗಳೂರಿನಲ್ಲಿ ಆಯುರ್ವೇದ ಸಮ್ಮೇಳನದ ಜಾಗೃತಿ ರಥಯಾತ್ರೆಗೆ ಚಾಲನೆ.

ಬೆಂಗಳೂರು, ನ.28: ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ ಡಿಸೆಂಬರ್ 28 ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಆಯುರ್ವೇದ ಸಮ್ಮೇಳನದ (2nd Ayurveda World Summit) ಜನಜಾಗೃತಿಗಾಗಿ ಏಳು ರಾಜ್ಯಗಳಲ್ಲಿ ಸಂಚರಿಸುವ ರಥಯಾತ್ರೆಗೆ ಚಾಲನೆ ನೀಡಲಾಯಿತು.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್, ರಾಜಾಜಿನಗರದ ಶಾಸಕ ಸುರೇಶ್ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ, ಭಾರತೀಯ ಕೇಂದ್ರ ವೈದ್ಯಕೀಯ ಮಂಡಳಿಯ ಡಾ. ಜಯಪ್ರಕಾಶ್ ನಾರಾಯಣ್ ಹಾಗೂ ಸಮ್ಮೇಳನದ ರುವಾರಿಗಳಾದ ಹಿರಿಯ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆ ಹಾಗೂ ಇತರರು ಮಲ್ಲೇಶ್ವರದ ಶ್ರೀ ಸಿದ್ಧಿವಿನಾಯಕ ದೇವರ ಸನ್ನಿಧಿಯಲ್ಲಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿದರು.

Ayurveda World Summit

ದ್ವಿತೀಯ ವಿಶ್ವ ಆಯುರ್ವೇದ ಸಮ್ಮೇಳನ ಹಾಗೂ ಆಯುರ್ವೇದ ಪದ್ಧತಿಯ ಕುರಿತಾಗಿ ಈ ರಥವು ಜನಜಾಗೃತಿಯನ್ನು ಮೂಡಿಸಲಿದ್ದು, ಕರ್ನಾಟಕದ ಎಲ್ಲಾ ಆಯುರ್ವೇದ ಕಾಲೇಜುಗಳು ಹಾಗೂ ಗೋವಾ, ಕೇರಳ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡು 30ಕ್ಕೂ ಅಧಿಕ ಆಯುರ್ವೇದ ಕಾಲೇಜು ಸೇರಿದಂತೆ ಒಟ್ಟು 137 ಆಯುರ್ವೇದ ವಿದ್ಯಾಲಯಗಳನ್ನು ಒಟ್ಟು ಎರಡು ರಥಗಳು ಸಂಚರಿಸಲಿವೆ.‌

ಉಬುಂಟು ಸಂಸ್ಥಾಪಕಿ ಕೆ. ರತ್ನಪ್ರಭಾಗೆ ಜಾಗತಿಕ ನಾಯಕತ್ವ ಗೌರವ

ಧನ್ವಂತರಿ ಜ್ಯೋತಿಯಿಂದ ಸಮ್ಮೇಳನದ ಉದ್ಘಾಟನೆ

ದಕ್ಷಿಣ ಭಾರತದ 7 ರಾಜ್ಯಗಳನ್ನು ಸಂಚರಿಸಲಿರುವ 2 ರಥಗಳು ಎಲ್ಲೆಡೆ ಧನ್ವಂತರಿ ಜ್ಯೋತಿಯನ್ನು ಹೊತ್ತು ಸಾಗಲಿವೆ. ಆನಂತರ ಅದೇ ಧನ್ವಂತರಿ ಜ್ಯೋತಿಯ ಮೂಲಕ ವಿಶ್ವ ಸಮ್ಮೇಳನದ ಭವ್ಯ ಉದ್ಘಾಟನೆ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.