ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು!

Nelamangala News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಘೋರ ಘಟನೆ ನಡೆದಿದೆ. ಶಾಲಾ ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ನಾಲ್ಕು ವರ್ಷದ ಬಾಲಕಿ ಬಸ್‌ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ತಾಯಿಯ ಕಣ್ಣೆದುರೇ ನಡೆದ ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಕಿಶೋರ್ ಹಾಗೂ ಮಧುಸ್ಮಿತಾ ದಂಪತಿಯ 2ನೇ ಮಗು ತನುಷಾ ಮೃತ ಬಾಲಕಿ. ಮೊದಲ ಮಗಳು ಹನಿಕಾಳನ್ನು ಶಾಲಾ ವಾಹನದಿಂದ ಕರೆ ತರಲು ಮಧುಸ್ಮಿತಾ ತನುಷಾರನ್ನು ಕೂಡ ಜೊತೆಗೆ ಕರೆತಂದಿದ್ದರು. ಆದರೆ ಹನಿಕಾಳನ್ನು ಕರೆತರುವಷ್ಟರಲ್ಲೇ ಅಲ್ಲೇ ಆಡುತ್ತಿದ್ದ ತನುಷಾ ಮೇಲೆ ಬಸ್ ಹರಿದಿದೆ. ಗಂಭೀರವಾಗಿ ಗಾಯಗೊಂಡ ತನುಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬಾಲಕಿ ಬಸ್ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಅಪಘಾತದ ಬಳಿಕ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ರೈಫಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್‌ ಆತ್ಮಹತ್ಯೆ!

ಕಲಬುರಗಿ: ನಗರದ ಜಗತ್ ವೃತ್ತದ ಬಳಿ ಪೊಲೀಸ್ ವಾಹನದಲ್ಲೇ ಸಿಎಆರ್ ಕಾನ್‌ಸ್ಟೇಬಲ್‌ವೊಬ್ಬರು ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. ಇವರು ಕಲಬುರಗಿ ಸಿಎಆರ್ ವಿಭಾಗದಲ್ಲಿ ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮುಖ್ಯಮಂತ್ರಿ ನಗರ ಪ್ರವಾಸದಲ್ಲಿದ್ದ ಹಿನ್ನೆಲೆಯಲ್ಲಿ ಇತರ ಪೊಲೀಸ್ ಸಿಬಂದಿಯೊಂದಿಗೆ ಶಿವಕುಮಾರ್ ಕೂಡ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಕರ್ತವ್ಯದ ವೇಳೆ ಪೊಲೀಸ್ ವಾಹನದಲ್ಲಿದ್ದ 303 ರೈಫಲ್‌ನಿಂದ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಿವಕುಮಾ‌ರ್ ಅವರನ್ನು ಸುಮಾರು ಮೂರು ತಿಂಗಳ ಹಿಂದೆ ಬೆಂಗಳೂರಿನಿಂದ ಕಲಬುರಗಿಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ನಗರ ಸಶಸ್ತ್ರ ಮೀಸಲು ಪಡೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಶಿವಕುಮಾರ್, ಅದರ ಮರುದಿನವೇ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳಲ್ಲಿ ನೋವುಂಟು ಮಾಡಿದೆ.

ಉಗ್ರ ಸಂಘಟನೆಗಳ ಜತೆ ನಂಟು; ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ

ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.