ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ (Namma metro) ವ್ಯಕ್ತಿಯೊಬ್ಬ ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತನೆ ತೋರಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ತೆರಳುವಾಗ ಈ ಘಟನೆ ನಡೆದಿದೆ. ಈ ಬಗ್ಗೆ ಭದ್ರತಾ ಸಿಬ್ಬಂದಿಗೆ ಯುವತಿ ಹೇಳಿದ್ದು, ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ, ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಬೆಳಗಾವಿ ಮೂಲದ ಮುತ್ತಪ್ಪ(45) ಅನುಚಿತವಾಗಿ ನಡೆದುಕೊಂಡ ವ್ಯಕ್ತಿ. ಈತ ಖಾಸಗಿ ಕಂಪನಿಯಲ್ಲಿ ಹೌಸ್‌ಕೀಪರ್ ಆಗಿದ್ದಾನೆ. ಉಪ್ಪಾರಪೇಟೆ ಠಾಣೆಯಲ್ಲಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆಯ ಬಗ್ಗೆ ಯುವತಿ ವಿಡಿಯೋ ಹಂಚಿಕೊಂಡಿದ್ದು, ತನ್ನ ಜತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿಯ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಆ ವ್ಯಕ್ತಿಯ ವಯಸ್ಸು ಹಾಗೂ ಕುಡಿದ ಮತ್ತಿನಲ್ಲಿದ್ದ ಕಾರಣ ಆತನನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾಳೆ.
ಹನಿಮೂನ್ ಅರ್ಧಕ್ಕೇ ಮೊಟಕು, ನವವಿವಾಹಿತೆ ಆತ್ಮಹತ್ಯೆ!
ಮುತ್ತಪ್ಪ ದುರ್ವರ್ತನೆ ಬಗ್ಗೆ ಮೊದಲಿಗೆ ಮೆಟ್ರೋ ಸೆಕ್ಯೂರಿಟಿ ಸಿಬ್ಬಂದಿಗೆ ಯುವತಿ ಹೇಳಿದ್ದಾಳೆ. ಈ ವೇಳೆ ಆತನನ್ನು ಸಿಬ್ಬಂದಿ ತರಾಟೆಗೆ ತೆಗೆದುಕೊಂಡು, ನಿಮ್ಮ ವಯಸ್ಸು ನೋಡಿದರೆ 60 ದಾಟಿದಂತೆ ಕಾಣುತ್ತದೆ, ನೀವು ಈ ರೀತಿ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಮುತ್ತಪ್ಪ ಕ್ಷಮಿಸಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.
ಮದುವೆಯಾಗು ಎಂದಿದ್ದಕ್ಕೆ ಸ್ಟಾಫ್ ನರ್ಸ್ ಕೊಲೆಗೈದ ಪ್ರಿಯಕರ!
ಬೆಂಗಳೂರು: ಮನೆಯಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. ಬಾಡಿಗೆ ಮನೆಯಲ್ಲಿ ನರ್ಸ್ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಮದುವೆಯಾಗದೆ ಒಂಟಿಯಾಗಿದ್ದ 39 ವರ್ಷದ ಮಮತಾ, ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕುಮಾರಸ್ವಾಮಿ ಲೇಔಟ್‌ನಲ್ಲಿ ತಮ್ಮ ಸ್ನೇಹಿತೆಯೊಂದಿಗೆ ಬಾಡಿಗೆ ಮನೆ ಮಾಡಿಕೊಂಡಿದ್ದರು. ಡಿಸೆಂಬರ್ 24ರಂದು ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಆ ದಿನ ರಾತ್ರಿ ಮಮತಾ ಒಬ್ಬರೇ ಮನೆಯಲ್ಲಿದ್ದರು. ಇದೇ ಸಮಯಕ್ಕೆ ಕಾದು ಕುಳಿತಿದ್ದ ಆರೋಪಿ ಸುಧಾಕರ್, ರಾತ್ರೋ ರಾತ್ರಿ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ಡಿಸೆಂಬರ್ 25ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ. ಹತ್ಯೆಯ ಮಾಹಿತಿ ದೊರಕುತ್ತಿದ್ದಂತೆ, ಕುಮಾರಸ್ವಾಮಿ ಲೇಔಟ್‌ನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು
ಸುಧಾಕರ್ ಮತ್ತು ಮಮತಾ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಮಮತಾ ತನಗಿಂತ ವಯಸ್ಸಿನಲ್ಲಿ ಹಿರಿಯವಳೆಂದು ತಿಳಿಯದ ಸುಧಾಕರ್ ಪ್ರೀತಿಯಲ್ಲಿ ಬಿದ್ದಿದ್ದ. ಆದರೆ ಸುಧಾಕರ್‌ಗೆ ಇತ್ತೀಚೆಗೆ ಕುಟುಂಬಸ್ಥರು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದರು. ಈ ವಿಷಯ ತಿಳಿದ ಮಮತಾ, ಕೋಪಗೊಂಡು ತನ್ನನ್ನೇ ಮದುವೆಯಾಗಬೇಕು ಎಂದು ಒತ್ತಾಯಿಸಿದ್ದರು. ಅಷ್ಟೇ ಅಲ್ಲದೇ ತನ್ನನ್ನು ಬಿಟ್ಟು ಬೇರೆ ಮದುವೆಯಾದರೆ ತಾನು ಆತ್ಮಹತ್ಯೆ ಮಾಡಿಕೊಂಡು ಸುಧಾಕರ್ ಹಾಗೂ ಅವರ ಕುಟುಂಬವನ್ನು ಸಂಕಷ್ಟಕ್ಕೆ ಒಳಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಈ ಒತ್ತಡದಿಂದ ಆತಂಕಕ್ಕೊಳಗಾದ ಸುಧಾಕರ್, ಮಮತಾಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದ. ಡಿಸೆಂಬರ್ 24ರಂದು ಮಮತಾ ಒಬ್ಬರೇ ಇದ್ದ ಸಂದರ್ಭ ಮನೆಗೆ ತೆರಳಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.