ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು ವಿವಿಯಲ್ಲಿ 46 ಉತ್ತರ ಪತ್ರಿಕೆ ನಾಪತ್ತೆ: ಕಳೆದ ಒಂದು ವರ್ಷದಿಂದ ಫಲಿತಾಂಶಕ್ಕಾಗಿ ಕಾಯುತ್ತಿರುವ ಬಿಕಾಂ ವಿದ್ಯಾರ್ಥಿಗಳಿಗೆ ಆತಂಕ

ಜ್ಞಾನಭಾರತಿ ಆವರಣದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳು ಆಧುನಿಕ ಬ್ಯಾಂಕಿಂಗ್ ವಿಷಯಕ್ಕೆ ಬರೆದಿದ್ದ 46 ಉತ್ತರ ಪತ್ರಿಕೆಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಏಪ್ರಿಲ್ 2025ರಲ್ಲಿ ಪರೀಕ್ಷೆ ಬರೆದಿದ್ದು, ಇಂದಿಗೂ ಫಲಿತಾಂಶ ಕ್ಕಾಗಿ ಕಾಯುತ್ತಿದ್ದಾರೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾ ಮತ್ತು ಮೌಲ್ಯಮಾಪನ ವ್ಯವಸ್ಥೆಯ ನಿರ್ವಹಣೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ರಾಮನಗರದ ಸರಕಾರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ 46 ಉತ್ತರ ಪತ್ರಿಕೆಗಳು ವಿಶ್ವವಿದ್ಯಾಲಯದಲ್ಲಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಪರೀಕ್ಷೆ ಬರೆದು ಒಂದು ವರ್ಷಕ್ಕೂ ಹೆಚ್ಚು ಕಾಲ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಮತ್ತಷ್ಟು ಆತಂಕ ಎದುರಾಗಿದೆ.

ಜ್ಞಾನಭಾರತಿ ಆವರಣದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳು ಆಧುನಿಕ ಬ್ಯಾಂಕಿಂಗ್ ವಿಷಯಕ್ಕೆ ಬರೆದಿದ್ದ 46 ಉತ್ತರ ಪತ್ರಿಕೆಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಏಪ್ರಿಲ್ 2025ರಲ್ಲಿ ಪರೀಕ್ಷೆ ಬರೆದಿದ್ದು, ಇಂದಿಗೂ ಫತಾಂಶಕ್ಕಾಗಿ ಕಾಯುತ್ತಿದ್ದಾರೆ. ಪರೀಕ್ಷೆಯ ಬಳಿಕ ಉತ್ತರ ಪತ್ರಿಕೆಗಳನ್ನು ಸಂಗ್ರಹಿಸಿ, ಸಾಗಣೆ, ವಿಂಗಡಣೆ ಹಾಗೂ ಮೌಲ್ಯ ಮಾಪನಕ್ಕೆ ಒಳಪಡಿಸುವ ಪ್ರಕ್ರಿಯೆ ನಡೆಯುತ್ತದೆ. ಈ ಎಲ್ಲ ಹಂತಗಳಲ್ಲಿ ಭದ್ರತಾ ಕ್ರಮಗಳಿದ್ದರೂ 46 ಉತ್ತರ ಪತ್ರಿ ಕೆಗಳು ನಾಪತ್ತೆ ಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: Bengaluru North University: ಮಾದಕ ವ್ಯಸನಕ್ಕೆ ಬಲಿಯಾಗದೆ ಯುವಶಕ್ತಿ ದೇಶದ ನಿರ್ಮಾಣಕ್ಕೆ ಬಳಕೆಯಾಗಲಿ: ಪ್ರೊ.ಬಿ.ಕೆ.ರವಿ

ಫಲಿತಾಂಶ ಯಾವಾಗ?: ಒಂದು ವರ್ಷಕ್ಕೂ ಹೆಚ್ಚು ಕಾಲ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಗಳೇ ಲಭ್ಯವಿಲ್ಲ ಎಂಬ ಮಾಹಿತಿ ಮತ್ತಷ್ಟು ಆತಂಕ ಮೂಡಿಸಿದೆ. ಉತ್ತರ ಪತ್ರಿಕೆಗಳು ಪತ್ತೆಯಾಗದಿದ್ದರೆ ವಿದ್ಯಾರ್ಥಿಗಳ ಫಲಿತಾಂಶ ಯಾವ ಆಧಾರದ ಮೇಲೆ ಪ್ರಕಟಿಸಲಾಗುತ್ತದೆ ಎಂಬ ಪ್ರಶ್ನೆಯೂ ಎದುರಾಗಿದೆ. ಉತ್ತರ ಪತ್ರಿಕೆಗಳು ಮೌಲ್ಯಮಾಪನಕ್ಕೆ ತೆರಳಿದ ಬಳಿಕ ನಾಪತ್ತೆಯಾಗಿವೆಯೇ, ಸಾಗಣೆ ಹಂತದ ಸಮಸ್ಯೆಯಾಗಿದೆಯೇ ಅಥವಾ ವಿಶ್ವವಿದ್ಯಾ ಲಯದ ಬೇರೆ ಹಂತದಲ್ಲಿ ಲೋಪವಾಗಿ ದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹೊಣೆಗಾರಿಕೆ ಯಾರದ್ದು ಎಂಬ ಪ್ರಶ್ನೆ ಉದ್ಭವ

ಉತ್ತರ ಪತ್ರಿಕೆಗಳ ನಿರ್ವಹಣೆಯಲ್ಲಿ ಲೋಪವಾಗಿದ್ದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಹೊಣೆಗಾರಿಕೆಯನ್ನು ನಿಗದಿಪಡಿಸಲಾಗುತ್ತದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಸಂಬಂಧಿಸಿದ ದಾಖಲೆ ಗಳಾದ ಉತ್ತರ ಪತ್ರಿಕೆಗಳ ಗೌಪ್ಯತೆ ಮತ್ತು ಸುರಕ್ಷತೆ ಯಾವ ಹಂತದಲ್ಲಿ ನಿರ್ಲಕ್ಷಿಸಲಾಗಿದೆ ಎಂಬುದನ್ನು ವಿಶ್ವವಿದ್ಯಾಲಯ ಸ್ಪಷ್ಟಪಡಿಸಬೇಕಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಕರಣ ಗಂಭೀರವಾಗಿ ಪರಿಗಣಿಸಿ, ನಾಪತ್ತೆ ಯಾಗಿರುವ ಉತ್ತರ ಪತ್ರಿಕೆಗಳ ಕುರಿತು ಸಮಗ್ರ ತನಿಖೆ ನಡೆಸಿ, ಫಲಿತಾಂಶ ಪ್ರಕಟಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳ ಒತ್ತಾಯವಾಗಿದೆ.