5th State Finance Commission: 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆಗೆ ಸಚಿವ ಸಂಪುಟ ಅನುಮೋದನೆ
5th State Finance Commission: ಮಂಡ್ಯದಲ್ಲಿ ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿಶ್ವವಿದ್ಯಾಲಯ ಸ್ಥಾಪನೆ, 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆ ಸೇರಿ ಪ್ರಮುಖ ನಿರ್ಣಯಗಳನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ (Cabinet Meeting) ನಡೆದಿದ್ದು, ಈ ವೇಳೆ ಸುಮಾರು 35 ವಿಷಯಗಳ (5th State Finance Commission) ಕುರಿತು ಚರ್ಚಿಸಿದ್ದೇವೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್. ಕೆ. ಪಾಟೀಲ್ ತಿಳಿಸಿದರು.
ಸಂಪುಟ ಸಭೆಯ ನಂತರ ಮಾತನಾಡಿದ ಅವರು, ಮಂಡ್ಯದಲ್ಲಿ ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಅಲ್ಲದೇ 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆಗೆ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | KAS Prelims: ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯ ಕೀ ಉತ್ತರ ಪ್ರಕಟ
ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ; ಈ ಬಾರಿಯ ಫ್ಲವರ್ ಶೋ ವಾಲ್ಮೀಕಿಗೆ ಅರ್ಪಣೆ
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ 217ನೇ ಫಲ ಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು. ಈ ಬಾರಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಆಯೋಜಿಸಿದ್ದು, ಇಂದಿನಿಂದ ಜ.27ರವರೆಗೆ ಒಟ್ಟು 12 ದಿನ ಫ್ಲವರ್ ಶೋ ನಡೆಯಲಿದೆ.
ಫಲಪುಷ್ಪ ಪ್ರದರ್ಶನ ಉದ್ಘಾಟನೆ ವೇಳೆ ತೋಟಗಾರಿಕಾ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಜಗದ್ಗುರು ವಚನಾನಂದ ಸ್ವಾಮೀಜಿ, ಜಗದ್ಗುರು ಶ್ರೀ ಬಸವ ಮಾಚಿದೇವ ಸ್ವಾಮೀಜಿ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ
ಈ ಬಾರಿ ಸುಮಾರು 2.75 ಕೋಟಿ ರೂ.ಗಳ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 217 ನೇ ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 30 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಲಾಗಿದೆ.
ಪ್ರವೇಶ ಶುಲ್ಕ ಎಷ್ಟು?
ಜ.27ರವರೆಗೆ ಬೆಳಗ್ಗೆ 6ಗಂಟೆಯಿಂದ ಸಂಜೆ 6.30ರವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಬಹುದಾಗಿದೆ. ಪ್ರವೇಶ ಶುಲ್ಕ ವಯಸ್ಕರಿಗೆ 80 ರೂ. (ರಜೆ ದಿನಗಳಲ್ಲಿ 100 ರೂ.), ಮಕ್ಕಳಿಗೆ 30 ರೂ. ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿರುತ್ತದೆ.
ಸುಮಾರು 10 ಲಕ್ಷ ಮಂದಿ ಆಗಮಿಸುವ ನಿರೀಕ್ಷೆ
ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಬೆಂಗಳೂರು ಸಂಚಾರ ಪೊಲೀಸರು ವಾಹನ ನಿಲುಗಡೆಗೆ ಸ್ಥಳಗಳನ್ನು ನಿಗದಿಪಡಿಸಿದ್ದಾರೆ. ಫ್ಲವರ್ ಶೋ ವೀಕ್ಷಣೆಗೆ 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇದ್ದು, ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರ ಮಾರ್ಗಸೂಚಿ ಪ್ರಕಾರ, ಸಾರ್ವಜನಿಕರ ದ್ವಿಚಕ್ರ ವಾಹನಗಳ ನಿಲುಗಡೆಗೆ ಡಾ.ಮರಿಗೌಡ ರಸ್ತೆ, ಅಲ್ ಅಮೀನ್ ಕಾಲೇಜ್ ಆವರಣದಲ್ಲಿ ಅವಕಾಶ ನೀಡಲಾಗಿದೆ. ಕೆ.ಹೆಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಬಳಿ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ.
ಡಾ.ಮರಿಗೌಡ ರಸ್ತೆ-ಹಾಪ್ ಕಾಮ್ಸ್ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ. ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ಕಾರುಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ ಎಂದು ಸಂಚಾರ ಪೊಲೀಸರ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ನೋ ಪಾರ್ಕಿಂಗ್?
ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿ, ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿ, ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದ ವರೆಗೆ ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12 ನೇ ಕ್ರಾಸ್ ವರೆಗೆ, ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್ ನಿಂದ ಪೋಸ್ಟ್ ಆಫೀಸ್ ರಸ್ತೆಯ ಎರಡೂ ಬದಿ ಹಾಗೂ ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ನಿಷೇಧ ಹೇರಲಾಗಿದೆ.
ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ, ಆರ್.ವಿ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್ ವರೆಗೆ, ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ ವಾಹನ ನಿಲುಗಡೆ ನಿಷೇಧ ಹೇರಲಾಗಿದೆ.
ಫಲಪುಷ್ಪ ಪ್ರದರ್ಶನ ಜನವರಿ 16 ರಿಂದ 27ರವರೆಗೆ 12 ದಿನಗಳ ಕಾಲ ನಡೆಯಲಿದ್ದು, ಇಷ್ಟೂ ದಿನಗಳ ವರೆಗೆ ಸಂಚಾರ, ವಾಹನ ನಿಲುಗಡೆ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.