ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

77ನೇ ಗಣರಾಜ್ಯೋತ್ಸವ; ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಬಿಗಿ ಭದ್ರತೆ, ಹಲವೆಡೆ ಸಂಚಾರ ನಿರ್ಬಂಧ

77th Republic Day: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗಾಗಿ ಮಾಣಿಕ್‌ ಷಾ ಪರೇಡ್ ಮೈದಾನವು ಸಂಪೂರ್ಣವಾಗಿ ಸಿದ್ಧಗೊಂಡಿದ್ದು, ರಾಜ್ಯಪಾಲರು ಬೆಳ್ಳಿಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ.

ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಬಿಗಿ ಭದ್ರತೆ, ಹಲವೆಡೆ ಸಂಚಾರ ನಿರ್ಬಂಧ

ಸಂಗ್ರಹ ಚಿತ್ರ -

Vishakha Bhat
Vishakha Bhat Jan 26, 2026 8:47 AM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗಾಗಿ ಮಾಣಿಕ್‌ ಶಾ ಪರೇಡ್ (Manik Shah Parade Ground) ಮೈದಾನವು ಸಂಪೂರ್ಣವಾಗಿ ಸಿದ್ಧಗೊಂಡಿದ್ದು, ರಾಜ್ಯಪಾಲರು ಬೆಳ್ಳಿಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಣೆಕ್ ಶಾ ಪರೇಡ್ ಮೈದಾನದ ಸುತ್ತಲೂ 100ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಒದಗಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೆಚ್ಚಿನ ಭದ್ರತೆಗಾಗಿ 10 ಕೆಎಸ್‌ಆರ್‌ಪಿ ತುಕಡಿಗಳು, ಅಗ್ನಿಶಾಮಕ ವಾಹನಗಳು ಮತ್ತು ಕ್ಷಿಪ್ರ ಕಾರ್ಯಾಚರಣೆ ತಂಡಗಳನ್ನು ಸಹ ಸ್ಥಳದಲ್ಲಿ ನಿಯೋಜಿಸಲಾಗಿದೆ. ಮೈದಾನದ ಸುತ್ತಮುತ್ತ 100ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಪ್ರತಿ ಕ್ಷಣದ ಸಂಚಲನವನ್ನು ನಿಗಾ ಇಡಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಇದ್ದುಕೊಂಡು ಸಂಚಾರ ಡೈವರ್ಷನ್ ಮಾಡುವ ಕೆಲಸವನ್ನು ನಿರ್ವಹಿಸುತ್ತಾರೆ.

ಬೆಳಗ್ಗೆ 8.30ರಿಂದ 10.30 ರವರೆಗೆ ಮಾಣೆಕ್‌ ಶಾ ಮೈದಾನದ ಸುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನ ಕಲ್ಪಿಸಲಾಗಿದೆ. ಕಬ್ಬನ್‌ ರಸ್ತೆ, ಕಾಮರಾಜ ರಸ್ತೆ, ಬಿಆರ್‌ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರಿ ಪೊಲೀಸರಿಂದ ಸೂಚಿಸಿದ್ದಾರೆ. ಇನ್ಫೆಂಟ್ರಿ ರಸ್ತೆಯಿಂದ ಮಣಿಪಾಲ್‌ ಸೆಂಟರ್‌ ಕಡೆಗೆ ಸಂಚರಿಸುವ ವಾಹನಗಳು, ಸಫೀನಾ ಪ್ಲಾಜಾದಲ್ಲಿ ಎಡತಿರುವು ಪಡೆದು, ಮೈನ್‌ಗಾರ್ಡ್‌ ರಸ್ತೆ, ಆಲೀಸ್‌ ಸರ್ಕಲ್, ಡಿಸ್ಸೆನ್ಸರಿ ರಸ್ತೆ, ಕಾಮರಾಜ ರಸ್ತೆ, ಡಿಕನ್ಸನ್‌ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು, ಕಬ್ಬನ್‌ ರಸ್ತೆಯ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬೇಕು.

77th Republic Day: ಗಣರಾಜ್ಯೋತ್ಸವಕ್ಕೆ ಸಿದ್ಧವಾದ ಕರ್ತವ್ಯಪಥ; ದೆಹಲಿಯಾದ್ಯಂತ ಕಟ್ಟೆಚ್ಚರ, ಮಿಲಿಟರಿ ಶಕ್ತಿ ಅನಾವರಣ

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.