ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ 800 ಕೆಜಿ ಜಿಲೆಟಿನ್ ಸೀಜ್; ಕಲ್ಲು ಸ್ಫೋಟಕ್ಕೆ ಅಕ್ರಮವಾಗಿ ಬಳಕೆ ಆರೋಪ

Bengaluru News: ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 800 ಕೆಜಿ ಜಿಲೆಟಿನ್​​ನನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 800 ಕೆಜಿ ಜಿಲೆಟಿನ್​​ನನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ (Gelatin) ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ. ಭೋಗನಹಳ್ಳಿಯಲ್ಲಿ ಆದರ್ಶ ಕಂಪನಿಯಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯ ವೇಳೆ ದೊಡ್ಡ ಕಲ್ಲಿನ ಬಂಡೆಗಳು ಪತ್ತೆಯಾಗಿವೆ.

ಆದರ್ಶ್ ಡೆವಲಪರ್ಸ್​​ನಿಂದ ಕಾಮಗಾರಿ ನಡೆದಿದ್ದು, ದೊಡ್ಡ‌ ದೊಡ್ಡ ಎಂಎನ್​ಸಿ‌ ಕಂಪನಿಗಳನ್ನು ಡೆವಲಪರ್ಸ್​ ನಿರ್ಮಾಣ ಮಾಡುತ್ತಿದ್ದಾರೆ. ಯಾವುದೇ ಪರವಾನಗಿ ಪಡೆಯದೇ ಜಿಲೆಟಿನ್ ಸ್ಫೋಟ ಮಾಡ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸೂಕ್ತ ಮಾಹಿತಿ ಆಧರಿಸಿ ಬೆಳ್ಳಂದೂರು ಪೊಲೀಸರು ದಾಳಿ ನಡೆಸಿದ್ದಾರೆ. ಕಟ್ಟಡ ಕಾಮಗಾರಿ ನಡೆಯುತ್ತಿರುವ ಪ್ರದೇಶದ ಸಮೀಪವೇ ಶಾಲೆಯೂ ಇದೆ.

ರಾತ್ರಿ 12 ಗಂಟೆಯ ಬಳಿಕ ಬ್ಲಾಸ್ಟಿಂಗ್ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಶಾಲೆಯ ಸಮೀಪವೇ ಸ್ಫೋಟಕ ವಸ್ತುಗಳನ್ನು ಬಳಸುತ್ತಿರುವುದರಿಂದ ಮಕ್ಕಳ ಸುರಕ್ಷತೆ ಬಗ್ಗೆ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ದೂರಿನಲ್ಲೇನಿದೆ?

ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ, ಸತೀಶ್ ನಾಯಕ್ ಎಂಬವರು ಅರ್ಥ್‌ವರ್ಕ್ ಕೆಲಸ ಮಾಡುತ್ತಿದ್ದು, 2025ರ ಡಿಸೆಂಬರ್‌ನಲ್ಲಿ ಶ್ರೀನಿವಾಸ ಅರ್ಥ್ ಮೂವರ್ಸ್‌ನ ಮಾಲೀಕ ಅರುಣ್ ಕುಮಾರ್ ತಮ್ಮನ್ನು ಭೋಗನಹಳ್ಳಿಯ ವಿವಿಧ ಸರ್ವೆ ನಂಬರ್‌ಗಳಲ್ಲಿ ಅರ್ಥ್‌ವರ್ಕ್ ಮಾಡಲು ಸಂಪರ್ಕಿಸಿದ್ದರು ಎಂದು ತಿಳಿಸಿದ್ದಾರೆ. ಕಾಮಗಾರಿ ವೇಳೆ ದೊಡ್ಡ ಕಲ್ಲುಗಳು ಪತ್ತೆಯಾಗಿದ್ದು, ಅವುಗಳನ್ನು ತೆರವುಗೊಳಿಸಲು ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಬಳಸುವಂತೆ ತಮ್ಮ ಮೇಲೆ ಒತ್ತಡ ಹೇರಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದಕ್ಕೆ ತಾವು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೆಲಸದಿಂದ ದೂರವಿಟ್ಟು, ಹಣ ನೀಡದೆ ಪ್ರಾಣ ಬೆದರಿಕೆ ಹಾಕಲಾಗಿದೆ ಎಂದೂ ಉಲ್ಲೇಖಿಸಲಾಗಿದೆ.

Vishakha Bhat Heggar

View all posts by this author