ಬೆಂಗಳೂರು, ಆ.17: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಸ್ಮೃತಿ ಅಕಾಡೆಮಿ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day 2026) ಸಡಗರದಿಂದ ಆಚರಿಸಲಾಯಿತು. ಬೆಳಗ್ಗೆ ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಬಳಿಕ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮೃತಿ ಅಕಾಡೆಮಿ ಸ್ಕೂಲ್‌ನ ಸಹ ಸಂಸ್ಥಾಪಕ ರವಿ ರಾಮಚಂದ್ರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಶಾಲಾ ಪ್ರಾಂಶುಪಾಲರಾದ ಡಾ. ಅಮುದಾ ಸಿ ಮುನಿರಾಜು ಸ್ವಾತಂತ್ರ್ಯೋತ್ಸವದ ಇತಿಹಾಸ ಮತ್ತು ಮಹತ್ವದ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.