Road Accident: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕ ಸಾವು
Road Accident: ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಬಳಿ ಅಪಘಾತ ನಡೆದಿದೆ. ತಂದೆ ಜತೆಗೆ ದ್ವಿಚಕ್ರ ವಾಹನದಲ್ಲಿ ಬಾಲಕ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ದೇವಸ್ಥಾನದ ಪೂಜಾರಿ ದಿಲೀಪ್ ಕುಮಾರ್ ಪುತ್ರ ಶಬರೀಶ್(10) ಮೃತ ಬಾಲಕ. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಬೆಂಗಳೂರು: ನಗರದಲ್ಲಿ ಮತ್ತೊಬ್ಬರನ್ನು ಬಿಎಂಟಿಸಿ ಬಸ್ ಬಲಿ ಪಡೆದಿದೆ. ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Road Accident) ನಗರದ ಕೆ.ಆರ್. ಮಾರ್ಕೆಟ್ ಬಳಿ ನಡೆದಿದೆ. ತಂದೆ ಜತೆಗೆ ದ್ವಿಚಕ್ರ ವಾಹನದಲ್ಲಿ ಬಾಲಕ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ದೇವಸ್ಥಾನದ ಪೂಜಾರಿ ದಿಲೀಪ್ ಕುಮಾರ್ ಪುತ್ರ ಶಬರೀಶ್(10) ಮೃತ ಬಾಲಕ.
ಜಿ.ಎಂ. ಪಾಳ್ಯದ ನಿವಾಸಿಯಾಗಿರುವ ಪೂಜಾರಿ ದಿಲೀಪ್ ಕುಮಾರ್ ಜತೆಗೆ ಪುತ್ರ ಶಬರೀಶ್ ತೆರಳುತ್ತಿದ್ದರು. ಮಗನ ಜತೆಗೆ ಕೆ.ಆರ್.ಮಾರ್ಕೆಟ್‌ಗೆ ದಿಲೀಪ್ ಕುಮಾರ್ ತೆರಳಿದ್ದರು. ಈ ವೇಳೆ ಬಸ್ಸಿಗೆ ಬಿಎಂಟಿಸಿ ಬಸ್ ಟಚ್ ಆಗಿದೆ. ಈ ಸಂದರ್ಭದಲ್ಲಿ ಪುತ್ರ ಶಬರೀಶ್ ಕೆಳಗೆ ಬಿದ್ದಿದ್ದಾನೆ. ಅವರ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಕಾರು ಡಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಸಾವು
ಬಾಗಲಕೋಟೆ: ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಹುಬ್ಬಳ್ಳಿ -ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ. ಕಾರು ಓವರ್ ಟೇಕ್ ಮಾಡಲು ಹೋದ ವೇಳೆ ಅಪಘಾತ ನಡೆದಿದೆ. ಮೃತ ವ್ಯಕ್ತಿಯನ್ನು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಸಾಗರ ತೆಕ್ಕೆನ್ನವರ (62) ಎಂದು ಗುರತಿಸಲಾಗಿದೆ.
ಅಪಘಾತದಲ್ಲಿ ಬಸ್ ಮುಂದಿನ ಗಾಜು ಜಖಂ ಆಗಿದ್ದು, ಕಾರು ನುಜ್ಜುಗುಜ್ಜಾಗಿದೆ. ಇನ್ನು ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ | Sameer MD: ಸತತ 5 ಗಂಟೆ ಯೂಟ್ಯೂಬರ್ ಸಮೀರ್ ವಿಚಾರಣೆ; ನಾಳೆಯೂ ಹಾಜರಾಗಲು ಪೊಲೀಸರ ಸೂಚನೆ