Bengaluru Horror: ಬೆಂಗಳೂರಿನಲ್ಲಿ ಹಾಡಹಗಲೇ ಪರೀಕ್ಷೆ ಬರೆದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ; ಬೆಚ್ಚಿಬಿದ್ದ ರಾಜ್ಯ
ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ಗುರುವಾರ (ಅ. 16) ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಯಾಮಿನಿ ಪ್ರಿಯಾ (22) ಎಂದು ಗುರುತಿಸಲಾಗಿದೆ. ಭಗ್ನ ಪ್ರೇಮಿ ವಿಘ್ನೇಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ -

ಬೆಂಗಳೂರು, ಅ. 16: ಹಾಡಹಗಲೇ ಬೆಂಗಳೂರಿನಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ (ಅ. 16) ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ (Bengaluru Horror). ಮೃತ ವಿದ್ಯಾರ್ಥಿನಿಯನ್ನು ಯಾಮಿನಿ ಪ್ರಿಯಾ (22) ಎಂದು ಗುರುತಿಸಲಾಗಿದೆ. ಭಗ್ನ ಪ್ರೇಮಿ ವಿಘ್ನೇಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ವಿಘ್ನೇಶ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ವಿಘ್ನೇಶ್ ಹಲವು ಸಮಯಗಳಿಂದ ಪ್ರೀತಿಸುವಂತೆ ಯಾಮಿನಿ ಪ್ರಿಯಾ ಹಿಂದೆಯೇ ಓಡಾಡುತ್ತಿದ್ದ. ಆದರೆ ಪ್ರಿಯಾ ಒಪ್ಪದಿರುವುದೇ ಕೊಲೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.
ಈ ಸುದ್ದಿಯನ್ನೂ ಓದಿ: Kalaburagi crime news: ತಿಪ್ಪೆಗುಂಡಿಯಲ್ಲಿ ಆಸ್ಫೋಟ, ಪಿಸ್ತೂಲ್, ಗುಂಡುಗಳು ಪತ್ತೆ
ಪರೀಕ್ಷೆ ಮುಗಿಸಿ ಬರುವಾಗ ಎರಗಿದ ಹಂತಕ
ಬಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾ ಪರೀಕ್ಷೆ ಮುಗಿಸಿ ಮಧ್ಯಾಹ್ನ ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿದೆ. ಪ್ರಿಯಾ ಏಕಾಂಗಿಯಾಗಿ ಮನೆಗೆ ತೆರಳುತ್ತಿರುವುದನ್ನು ಗಮನಿಸಿದ ವಿಘ್ನೇಶ್ ಹಿಂದಿನಿಂದ ಬೈಕ್‌ನಲ್ಲಿ ಬಂದು ಕತ್ತು ಕೊಯ್ದು ಪರಾರಿಯಾಗಿದ್ದಾನೆ ಎಂದು ತನಿಖೆ ಕೈಗೆತ್ತಿಕೊಂಡಿರುವ ಸ್ಥಳಕ್ಕೆ ಶ್ರೀರಾಮಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಯಾಮಿನಿ ಪ್ರಿಯಾ ತಂದೆ ಗೋಪಾಲ್ ಈ ಬಗ್ಗೆ ಮಾತನಾಡಿ, ʼʼವಿಘ್ನೇಶ್ ಹಲವು ತಿಂಗಳಿನಿಂದ ನನ್ನ ಮಗಳಿಗೆ ಹಿಂಸೆ ಕೊಡುತ್ತಿದ್ದ. ಹಿಂಬಾಲಿಸಿಕೊಂಡು ಬಂದು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಬಗ್ಗೆ ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದೆವು. ಈ ಸಂಬಂಧ 6 ತಿಂಗಳ ಹಿಂದೆ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡಿದ್ದರು. ಈಗ ಕಾಟ ಕೊಡುತ್ತಿದ್ದಾನಾ ಎಂದು ಕೆಲವು ದಿನಗಳ ಹಿಂದೆ ಕೇಳಿದ್ದೆ. ಇಲ್ಲ ಎಂದಿದ್ದಳು. ಆದರೆ ಈಗ ಕೊಲೆ ಮಾಡಿದ್ದಾನೆʼʼ ಎಂದು ನೋವು ತೋಡಿಕೊಂಡಿದ್ದಾರೆ.
ಗೆಳತಿಗೆ ಮೆಸೇಜ್ ಮಾಡಿದ್ದನ್ನು ಆಕ್ಷೇಪಿಸಿದವನಿಗೆ ಇರಿದ ಪಾತಕಿ
ಬೆಂಗಳೂರಿನಲ್ಲಿ ಯುವತಿಗೆ ಮೆಸೇಜ್ ಮಾಡಿದ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಚಾಕುವಿನಿಂದ ಒಬ್ಬನಿಗೆ ಇರಿದ ಘಟನೆ ನಡೆದಿದೆ. ಆರ್‌ಟಿ ನಗರದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಯುವತಿಯೊಬ್ಬಳಿಗೆ ಪ್ರಭು ಎನ್ನುವ ಸೀನಿಯರ್ ವಿದ್ಯಾರ್ಥಿ ನಿರಂತರವಾಗಿ ಮೆಸೇಜ್ ಮಾಡಿ ಕಾಟ ಕೊಡುತ್ತಿದ್ದ. ಇದನ್ನು ಪ್ರಶ್ನಿಸಿದ ಯುವತಿಯ ಕ್ಲಾಸ್‌ಮೇಟ್ ಗೆಳೆಯ ಇರಿತಕ್ಕೆ ಒಳಗಾಗಿದ್ದಾನೆ.
ಯುವತಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮೆಸೇಜ್ ಮಾಡಿದ್ದನ್ನು ಆಕೆಯ ಸ್ನೇಹಿತ ಪ್ರಶ್ನಿಸಿದ್ದು, ಇವರಿಬ್ಬರೂ ಒಂದೇ ಕ್ಲಾಸ್‌ನಲ್ಲಿ ಕಲಿಯುತ್ತಿದ್ದಾರೆ. ಇದೇ ಸಿಟ್ಟನ್ನು ಇಟ್ಟುಕೊಂಡ ಆರೋಪಿ ಪ್ರಭು ತನ್ನ ಗೆಳೆಯನ ಜತೆ ಬೈಕ್‌ನಲ್ಲಿ ಬಂದು ಚಾಕುವಿನಿಂದ ಇರಿದು ಪರಾರಿ ಆಗಿದ್ದಾನೆ. ಈ ಬಗ್ಗೆ ಆರ್‌ಟಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.