Vijayalakshmi Darshan: ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಮೆಂಟ್; ದೂರು ದಾಖಲು
Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಮಾಡಲಾಗಿದೆ. ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಕಿಡಿಗೇಡಿಗಳು ಹೇಗೆ ಅಸಭ್ಯ ಸಂದೇಶಗಳನ್ನು ರವಾನಿಸಿದ್ದರೋ ಅದೇ ರೀತಿ ವಿಜಯಲಕ್ಷ್ಮಿ ಅವರಿಗೂ ಅಸಭ್ಯವಾಗಿ, ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆ.

-

ಬೆಂಗಳೂರು: ನಟಿ ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರ ಬಗ್ಗೆ ಅಸಭ್ಯ ಕಮೆಂಟ್ ಮಾಡಲಾಗಿದ್ದು, ಈ ಸಂಬಂಧ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಹಾಕಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.
ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸುದ್ದಿಗಾರರ ಜತೆ ಮಾತನಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಮಾಡಲಾಗಿದೆ. ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಕಿಡಿಗೇಡಿಗಳು ಹೇಗೆ ಅಸಭ್ಯ ಸಂದೇಶಗಳನ್ನು ರವಾನಿಸಿದ್ದರೋ ಅದೇ ರೀತಿ ವಿಜಯಲಕ್ಷ್ಮಿ ಅವರಿಗೂ ಅಸಭ್ಯವಾಗಿ, ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಮಾಜಿ ಸಂಸದೆ ರಮ್ಯಾ, ವಿಜಯಲಕ್ಷ್ಮಿ ದರ್ಶನ್ ಅಂತ ಅಲ್ಲ, ಯಾವುದೇ ಹೆಣ್ಣು ಮಕ್ಕಳ ಬಗ್ಗೆ ಅಸಭ್ಯವಾಗಿ ಕಮೆಂಟ್ ಮಾಡಿದರೆ, ಅವಹೇಳನ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವಹೇಳನ ಮಾಡಿದರೆ ಜೈಲುಶಿಕ್ಷೆ ಜೊತೆಗೆ ದಂಡವನ್ನೂ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿಯನ್ನೂ ಓದಿ | Soujanya Case: ಚಿನ್ನಯ್ಯನ ವಿರುದ್ಧ ದೂರು ನೀಡಲು SIT ಕಚೇರಿಗೆ ಬಂದ ಸೌಜನ್ಯಾ ತಾಯಿ!