Bengaluru News: ಬೆಂಗಳೂರಲ್ಲಿ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಯುವತಿ ಸಾವು
Young Woman Died: ಬೆಂಗಳೂರಿನ ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ನೋಡಲು ಯುವತಿ ತೆರಳಿದ್ದರು. ನಂತರ ಸ್ನೇಹಿತೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ ಮತ್ತೊಬ್ಬ ಸವಾರ ಕೂಡ ಗಾಯಗೊಂಡಿದ್ದಾರೆ.

-

ಬೆಂಗಳೂರು: ನಗರದಲ್ಲಿ ಬೃಹತ್ ಮರದ ಕೊಂಬೆ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ (Bengaluru News) ನಡೆದಿದೆ. ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆಯ ಬಳಿ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಆರ್‌ಟಿ ನಗರದ ಕೀರ್ತನಾ (23) ಮೃತ ವಿದ್ಯಾರ್ಥಿ.
ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ನೋಡಲು ಕೀರ್ತನಾ ತೆರಳಿದ್ದರು. ಸ್ನೇಹಿತೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರ ಭಾಸ್ಕರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮರ ಬಿದ್ದ ತಕ್ಷಣ ಕೊಂಬೆಗಳನ್ನು ತೆರವು ಮಾಡಿ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಯುವತಿ ಮೃತಪಟ್ಟ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಪೊಷಕರು ದೌಡಾಯಿಸಿದ್ದಾರೆ. ಈ ವೇಳೆ ಅವರ ಆಕ್ರಂದನ ಮುಗಿಲು ಮುಟ್ಟಿದೆ.