ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕನ್ನಡಿಗನಿಗೆ ಒಲಿದ ಪಟ್ಟ: ಬಿಜೆಪಿಯ ಹೊಸ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಪ್ರೊ. ಎಂ. ನಾಗರಾಜ್ ನೇಮಕ

ಕೇಂದ್ರ ಬಿಜೆಪಿಯಲ್ಲಿ ಮೇಜರ್‌ ಸರ್ಜರಿ ನಡೆದಿದ್ದು, ಅಧ್ಯಕ್ಷ ನಿತಿನ್‌ ನಬಿನ್‌ ನೇತೃತ್ವದ ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ. ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಹುದ್ದೆಗಳಿಗೆ ಹಲವು ಪ್ರಮುಖ ನಾಯಕರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ಉಪಾಧ್ಯಕ್ಷರ ಪಟ್ಟಿಯಲ್ಲಿ ಶಿಕ್ಷಣ ತಜ್ಞ, ಒಬಿಸಿ ನಾಯಕ ಮತ್ತು ಬಿಜೆಪಿ ಹಿರಿಯ ಮುಖಂಡರಾದ ಕರ್ನಾಟಕದ ಪ್ರೊ. ಎಂ. ನಾಗರಾಜ ಅವರಿಗೆ ಸ್ಥಾನ ನೀಡಲಾಗಿದೆ.

ಬಿಜೆಪಿಯ ಹೊಸ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಪ್ರೊ. ಎಂ. ನಾಗರಾಜ್ ನೇಮಕ

ನವದೆಹಲಿ: ಕೇಂದ್ರ ಬಿಜೆಪಿಯಲ್ಲಿ ಮೇಜರ್‌ (BJP) ಸರ್ಜರಿ ನಡೆದಿದ್ದು, ಅಧ್ಯಕ್ಷ ನಿತಿನ್‌ ನಬಿನ್‌ ನೇತೃತ್ವದ ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ. ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಹುದ್ದೆಗಳಿಗೆ ಹಲವು ಪ್ರಮುಖ ನಾಯಕರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ಉಪಾಧ್ಯಕ್ಷರ ಪಟ್ಟಿಯಲ್ಲಿ ಶಿಕ್ಷಣ ತಜ್ಞ, ಒಬಿಸಿ ನಾಯಕ ಮತ್ತು ಬಿಜೆಪಿ ಹಿರಿಯ ಮುಖಂಡರಾದ ಕರ್ನಾಟಕದ ಪ್ರೊ. ಎಂ. ನಾಗರಾಜ ( Prof. (Dr.) M. Nagaraja) ಅವರಿಗೆ ಸ್ಥಾನ ನೀಡಲಾಗಿದ್ದು, ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಜವಾಬ್ದಾರಿಯನ್ನು ಮುಂದುವರಿಸಿದ್ದಾರೆ. ಈ ಮೂಲಕ ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ.

ಪ್ರೊ. ಎಂ. ನಾಗರಾಜ ಅವರು ಪ್ರಸ್ತುತ ಸಂಸತ್ತಿನಲ್ಲಿ (ರಾಜ್ಯಸಭೆ) ಕರ್ನಾಟಕದಿಂದ ಬಿಜೆಪಿಯನ್ನು ಪ್ರತಿನಿಧಿಸುತ್ತಿರುವ ಕುರುಬ ಸಮುದಾಯದ ಏಕೈಕ ಸದಸ್ಯರಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದು, ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿ ದಿನಗಳಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾಗಿ ಸಕ್ರಿಯರಾಗಿದ್ದರು.

ರಾಜಕೀಯಕ್ಕೆ ನೇರ ಪ್ರವೇಶಕ್ಕೂ ಮುನ್ನ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ (KPSC) ಸದಸ್ಯರಾಗಿ ಆಡಳಿತಾತ್ಮಕ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಅನುಭವ ಇವರಿಗಿದೆ. ಆರ್‌ಎಸ್‌ಎಸ್‌ ಜೊತೆಗಿನ ನಂಟಿನಿಂದಾಗಿ ಬಿಜೆಪಿ ಸೇರ್ಪಡೆಗೊಂಡರು. ಕರ್ನಾಟಕ ಬಿಜೆಪಿ ಘಟಕದಲ್ಲಿ ದೀರ್ಘಕಾಲ ತೆರೆಮರೆಯಲ್ಲಿ ಕೆಲಸ ಮಾಡಿದ ಇವರು, ನಂತರ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ನೇಮಕಗೊಂಡು ಪಕ್ಷದ ಸಾಂಸ್ಥಿಕ ಬಲವರ್ಧನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ 'ಭವನ ನಿರ್ಮಾಣ ಸಮಿತಿ'ಯ ಕರ್ನಾಟಕ ರಾಜ್ಯ ಸಂಚಾಲಕರಾಗಿ ಕೆಲಸ ಮಾಡುವ ಮೂಲಕ ಹೈಕಮಾಂಡ್ ನಾಯಕರ ವಿಶ್ವಾಸ ಗಳಿಸಿದರು.

BJP-JDS Padayatra: ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ; ಆ ಹುಡುಗನ ರಾಜಕೀಯ ಭವಿಷ್ಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದ ಸಿಎಂ

ದೆಹಲಿ ಮಟ್ಟಕ್ಕೆ ದಿಢೀರ್ ಪ್ರವೇಶ

ಜೂನ್ 2026ರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅವಧಿ ಮುಗಿದಾಗ ಕುರುಬ ಸಮುದಾಯ ಸಾಮಾನ್ಯ ಹಾಗೂ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಪ್ರೊ. ನಾಗರಾಜ್ ಅವರಿಗೆ ಅಚ್ಚರಿಯ ರೀತಿಯಲ್ಲಿ ರಾಜ್ಯಸಭಾ ಟಿಕೆಟ್ ನೀಡಿತು. ಇವರು ಅವಿರೋಧವಾಗಿ ಆಯ್ಕೆಯಾಗಿ ನೇರವಾಗಿ ಸಂಸತ್ ಪ್ರವೇಶಿಸಿದರು. ಇದೀಗ ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳ ಮರುಸಂಘಟನೆಯಲ್ಲಿ ಇವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Vishakha Bhat Heggar

View all posts by this author