ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಕಿ ಅವಘಡ: ಪಿಜಿಯಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, ವಿಡಿಯೋ ನೋಡಿ

Bengaluru Fire Accident: ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಯಾನರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ದುರಂತವೊಂದು ತಪ್ಪಿದೆ. ಗೋದಾಮಿಗೆ ಹತ್ತಿಕೊಂಡು ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೂ ವ್ಯಾಪಿಸಲು ಶುರುವಾಗಿತ್ತು.

ಸಂಗ್ರಹ ಚಿತ್ರ

ಬೆಂಗಳೂರು: ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಯಾನರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, (Fire Accident) ಭಾರೀ ದುರಂತವೊಂದು ತಪ್ಪಿದೆ. ಗೋದಾಮಿಗೆ ಹತ್ತಿಕೊಂಡು ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೂ ವ್ಯಾಪಿಸಲು ಶುರುವಾಗಿತ್ತು. ಸುಮಾರು 50 ಯುವತಿಯರು ಅಪಾಯದಿಂದ ಪಾರಾಗಿದ್ದು ಇದೀಗ ದೃಶ್ಯ ವೈರಲ್‌ ಆಗುತ್ತಿದೆ. ಯುವತಿಯರು ಪಿಜಿಯಿಂದ ಹಾರಿದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೊನ್ನೆ ರಾತ್ರಿ ಎಲ್ಇಡಿ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಂಗಡಿ ಪಕ್ಕದಲ್ಲಿ ಒಂದು ಪಿಜಿಗು ಬೆಂಕಿ ವ್ಯಾಪಿಸಿತ್ತು. ನೋಡುತ್ತಿದ್ದಂತೆ ಪಿಜಿಗು ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡಿತ್ತು . ಪಿಜಿ ಕಟ್ಟಡದಿಂದ ಜಿಗಿದು ಯುವತಿಯರು ಪ್ರಾಣ ಉಳಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ ಕಟ್ಟಡದಿಂದ ಹೊರಬರುವುದು ಕಾಣಿಸುತ್ತದೆ. ಕೂಗಾಟ ಕಂಡು ಸ್ಥಳೀಯರು ಸ್ಥಳಕ್ಕೆ ಬಂದು ಕೆಲವರನ್ನ ರಕ್ಷಣೆ ಮಾಡಿದ್ದಾರೆ.

ವಿಡಿಯೋ ನೋಡಿ



ರೂಮ್ ಗಳಂತೆ ಮಾಡಿ ಯುವತಿಯರಿಗೆ ಬಾಡಿಗೆಗೆ ನೀಡಲಾಗಿತ್ತು. ಎಲ್ಲಾ ಯುವತಿಯರು ಜಾರ್ಖಂಡ್ ಮತ್ತು ಓರಿಸ್ಸಾ ಮೂಲದವರಾಗಿದ್ದಾರೆ. ಅಗ್ನಿಅವಘಡ ಹಿನ್ನಲೆ ಮಾಲೀಕರು ಪಿಜಿಗೆ ಬೀಗ ಹಾಕಿದ್ದು, ಎಲ್ಲಾ ಯುವತಿಯರನ್ನ ಬೇರೆ ಕಡೆ ಶಿಫ್ಟ್ ಮಾಡಲಾಗಿದೆ. ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದಲ್ಲಿರುವ ಖಾದರ್ ಕಮರ್ಷಿಯಲ್ ಕಟ್ಟಡವೊಂದರ ಅಂಗಡಿವೊಂದರಲ್ಲಿ ಭಾನುವಾರ ಸಂಜೆ ವೇಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಲಿಗೆ ಸಿಲುಕಿ ಇಡೀ ಕಟ್ಟಡವೇ ಬೆಂಕಿಗಾಹುತಿಯಾಗಿದೆ. ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಟ್ಟಡಕ್ಕೆ ಅವರಿಸಿದ್ದ ಪರಿಣಾಮ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ.

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ಎಚ್‌ಪಿಸಿಎಲ್‌ ಸಂಸ್ಕರಣಾಗಾರದಲ್ಲಿ ಭಾರೀ ಬೆಂಕಿ ಅವಘಡ

ಭಾನುವಾರ ಸಂಜೆ 5.20 ರ ವೇಳೆಗೆ ಕಟ್ಟಡದ ನೆಲ ಮಹಡಿಯಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಕಟ್ಟಡದಲ್ಲಿದ್ದ ಮೊಬೈಲ್ ಶಾಪ್ ಹಾಗೂ ಹಾರ್ಡ್‌ವೇರ್‌ ಅಂಗಡಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿ ಅಂಗಡಿಗಳಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಎದ್ದಿದ್ದು, ಬೆಂಕಿಯನ್ನು ಹಾರಿಸುವುದಕ್ಕೆ ಅಗ್ನಿಶಾಮಕ ದಳ ಹರಸಾಹಸ ಪಟ್ಟಿದೆ. ಅವಘಡದಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿವೆ.

Vishakha Bhat Heggar

View all posts by this author