ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru News: ಚಪ್ಪಲಿ, ಶೂ ಹಾಕುವ ಮುನ್ನ ಎಚ್ಚರ; ಕ್ರಾಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ಹಾವು ಕಚ್ಚಿ ವ್ಯಕ್ತಿ ಸಾವು!

Snake Bite: ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ನಡೆದಿದೆ. ಕ್ರಾಕ್ಸ್ ಚಪ್ಪಲಿಯಲ್ಲಿ ಕೊಳಕು ಮಂಡಲ ಹಾವು ಅಡಗಿರುವುದನ್ನು ಗಮನಿಸದೆ ಹಾಕಿಕೊಂಡಿದ್ದರಿಂದ ದುರಂತ ನಡೆದಿದೆ. ಮಲಗಿದ್ದ ಹಾಸಿಗೆಯ ಮೇಲೆಯೇ ಅಸ್ವಸ್ಥ ಸ್ಥಿತಿಯಲ್ಲಿ ವ್ಯಕ್ತಿ ಬಿದ್ದಿದ್ದಾಗ ಹಾವು ಕಚ್ಚಿರುವ ವಿಷಯ ಬೆಳಕಿಗೆ ಬಂದಿದೆ.

ಕ್ರಾಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ಹಾವು ಕಚ್ಚಿ ವ್ಯಕ್ತಿ ಸಾವು!

-

Prabhakara R Prabhakara R Aug 30, 2025 10:49 PM

ಬೆಂಗಳೂರು: ಮನೆಯಿಂದ ಹೊರ ಹೋಗುವಾಗ ಚಪ್ಪಲಿ, ಶೂ ಹಾಕುವ ಮುನ್ನ ಎಚ್ಚರ ವಹಿಸಬೇಕಿದೆ. ಯಾಕೆಂದರೆ, ಕ್ರಾಕ್ಸ್​​ ಚಪ್ಪಲಿಯೊಳಗೆ ಸೇರಿಕೊಂಡಿದ್ದ ಕೊಳಕು ಮಂಡಲ ಹಾವು ಕಚ್ಚಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ (Bengaluru News) ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ನಡೆದಿದೆ. ಮಂಜು ಪ್ರಕಾಶ್(41) ಮೃತ ದುರ್ವೈವಿ. ಪ್ರಕಾಶ್ ಅಪಘಾತದಲ್ಲಿ ಕಾಲಿನ ಸ್ಪರ್ಶಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ದುರಂತ ಸಂಭವಿಸಿದೆ.

ಮಂಜು ಪ್ರಕಾಶ್ ಶನಿವಾರ ಬೆಳಗ್ಗೆ ಮನೆಯ ಹೊರಗೆ ಹೋಗಲು ಸಿದ್ಧವಾಗುತ್ತಿದ್ದರು. ಸಾಮಾನ್ಯವಾಗಿ ಬಳಸುವ ಕ್ರಾಕ್ಸ್ ಚಪ್ಪಲಿ ಮನೆಯ ಅಂಗಳದಲ್ಲೇ ಇಟ್ಟುಕೊಂಡಿದ್ದರು. ಆದರೆ ಕೊಳಕು ಮಂಡಲ ಹಾವು ಚಪ್ಪಲಿಯೊಳಗೆ ಅಡಗಿಕೊಂಡಿತ್ತು. ಅದನ್ನು ಗಮನಿಸದ ಮಂಜು ಪ್ರಕಾಶ್, ಚಪ್ಪಲಿಯನ್ನು ಧರಿಸಿ ಹೊರಗೆ ಹೋಗಿದ್ದಾರೆ. ಕೆಲವು ಸಮಯದ ನಂತರ ಅವರು ವಾಪಸ್ ಮನೆಗೆ ಮರಳಿ ಬಂದು ಮಲಗಿದ್ದರು. ಆಗಲೇ ಚಪ್ಪಲಿಯೊಳಗೆ ಅಡಗಿದ್ದ ಹಾವು ಕಚ್ಚಿದ ಪರಿಣಾಮ ಅವರ ದೇಹದಲ್ಲಿ ವಿಷ ಏರಿದ್ದು, ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.

ಇನ್ನು ನೆರೆಮನೆಯ ನಿವಾಸಿಯೊಬ್ಬರು ಚಪ್ಪಲಿಯನ್ನು ಗಮನಿಸಿದಾಗ, ಅದರೊಳಗೆ ಹಾವು ಸತ್ತಿರುವುದು ಕಂಡು ಬೆಚ್ಚಿಬಿದ್ದಿದ್ದು, ಕೂಡಲೇ ಅವರು ಮಂಜು ಮನೆಯವರಿಗೆ ತಿಳಿಸಿದ್ದಾರೆ. ಆದರೆ ಆ ವೇಳೆಗೆ ಮಂಜು ಪ್ರಕಾಶ್ ಮಲಗಿದ್ದ ಹಾಸಿಗೆಯ ಮೇಲೆಯೇ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದರು. ಮನೆಯವರು ಬಂದು ನೋಡಿದಾಗ ಅದಾಗಲೇ ಅವರ ಮಂಜು ಅವರ ಸಾವನ್ನಪ್ಪಿದ್ದರು.

ಈ ಸುದ್ದಿಯನ್ನೂ ಓದಿ | Viral News: ಊಟ ತಿಂಡಿ ಬೇಡ ಇಂಜಿನ್‌ ಆಯಿಲ್‌ ಸಾಕು; 28 ವರ್ಷಗಳಿಂದ ಇದನ್ನೇ ಕುಡಿದು ಬದುಕುತ್ತಿರುವ ವ್ಯಕ್ತಿ

ಮೃತ ಮಂಜು ಪ್ರಕಾಶ್ ಅವರು ಕಳೆದ ಕೆಲವು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ತಮ್ಮ ಕಾಲಿನ ಸ್ಪರ್ಶಶಕ್ತಿಯನ್ನು ಕಳೆದುಕೊಂಡಿದ್ದರು. ಹಾವು ಸಹ ಅದೇ ಕಾಲಿಗೆ ಕಚ್ಚಿರುವುದರಿಂದ ಅವರಿಗೆ ಯಾವುದೇ ಗೊತ್ತಾಗಿಲ್ಲ. ಕೊನೆಗೆ ಮನೆಗೆ ಬಂದು ಮಲಗಿದ್ದಾಗ ದೇಹದಲ್ಲಿ ವಿಷ ಹರಡಿದೆ.