ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Bangalore News: ಬಜೆಟ್ ನಲ್ಲಿ ಕೈದಾಳ ಸಮಗ್ರ ಅಭಿವೃದ್ಧಿಗೆ ಪ್ಯಾಕೇಜ್ ಘೋಷಿಸುವಂತೆ ಗೃಹ ಸಚಿವರಿಗೆ ಮನವಿ

2025 – 26ನೇ ಸಾಲಿನ ಬಜೆಟ್ ನಲ್ಲಿ ಪ್ಯಾಕೇಜ್ ಘೋಷಿಸುವಂತೆ ವಿಶ್ವಕರ್ಮ ಸಮುದಾಯ ಸಂಘಟನೆಗಳ ಪ್ರತಿನಿಧಿಗಳು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರ ಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯಮಟ್ಟದ ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ರಾದ ಸಹಕಾರ ರತ್ನ ಡಾ.ಬಿ.ಎಂ.ಉಮೇಶ್ ಕುಮಾರ್ ನೇತೃತ್ವದಲ್ಲಿ ಈ ಮನವಿ ಸಲ್ಲಿಸಲಾಯಿತು

ಬಜೆಟ್ ನಲ್ಲಿ ಕೈದಾಳ ಸಮಗ್ರ ಅಭಿವೃದ್ಧಿಗೆ ಪ್ಯಾಕೇಜ್

Profile Ashok Nayak Feb 25, 2025 9:25 PM

ಬೆಂಗಳೂರು: ತುಮಕೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕೈದಾಳದಲ್ಲಿ ಅಮರಶಿಲ್ಪಿ ಜಕಣಾಚಾರಿ ಸ್ಮಾರಕ ಶಿಲ್ಪಕಲಾ ತರಬೇತಿ ಕೇಂದ್ರ ಹಾಗೂ ಹಿರಿಯ ಚಿತ್ರ ಕಲಾ ಶಿಕ್ಷಕ ಡಾ. ಎಚ್. ಎಂ. ಗಂಗಾಧರಯ್ಯ ಆರ್ಟ್ ಥೀಮ್ ಪಾರ್ಕ್ ಸ್ಥಾಪಿಸುವುದು ಸೇರಿದಂತೆ ಕೈದಾಳ ವನ್ನು ಸಮಗ್ರ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು 2025 – 26ನೇ ಸಾಲಿನ ಬಜೆಟ್ ನಲ್ಲಿ ಪ್ಯಾಕೇಜ್ ಘೋಷಿಸುವಂತೆ ವಿಶ್ವಕರ್ಮ ಸಮುದಾಯ ಸಂಘಟನೆಗಳ ಪ್ರತಿನಿಧಿಗಳು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯಮಟ್ಟದ ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ರಾದ ಸಹಕಾರ ರತ್ನ ಡಾ.ಬಿ.ಎಂ.ಉಮೇಶ್ ಕುಮಾರ್ ನೇತೃತ್ವದಲ್ಲಿ ಈ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: Bangalore News: "ಕಜಾರಿಯಾ ಎಟರ್ನಿಟಿ ಮತ್ತು ಕೆರೊವಿಟ್ ಎಕ್ಸ್‌ಪೀರಿಯೆನ್ಸ್ ಸೆಂಟರ್ ಬೆಂಗಳೂರಿನಲ್ಲಿ ಆರಂಭ

ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಗೃಹ ಸಚಿವರು, ಈ ಸಂಬಂಧ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬಜೆಟ್ಟಿನಲ್ಲಿ ಸೇರ್ಪಡೆಗೊಳಿಸಲು ಕ್ರಮ ವಹಿಸುವುದಾಗಿ ತಿಳಿಸಿದರು.

ಈ ವೇಳೆ ವಿಶ್ವಕರ್ಮ ಒಕ್ಕೂಟದ ರಾಜ್ಯಾಧ್ಯಕ್ಷ ವಿಜಯಕುಮಾರ್ ಪತ್ತಾರ್, ಜಿಲ್ಲಾ ವಿಶ್ವ ಕರ್ಮ ಅಭಿವೃದ್ಧಿ ನಿಗಮದ ಜಿಲ್ಲಾ ನಿರ್ದೇಶಕ ಟಿ. ಸಿ. ಡಮರುಗೇಶ್, ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗೋವರ್ಧನ ಆಚಾರ್, ನಿರ್ದೇಶಕ ಎಸ್. ಹರೀಶ್ ಆಚಾರ್ಯ ಹಾಗೂ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಟಿ. ಎ. ರವಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.