ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru News: ಮಕ್ಕಳಾಗಲಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪತ್ನಿ!

ಬೆಂಗಳೂರಿನ ಕೆಂಪೇಗೌಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ನಡೆದಿದೆ. ಮೃತ ವ್ಯಕ್ತಿಯ ಪತ್ನಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಕೇಸ್‌ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಕ್ಕಳಾಗಲಿಲ್ಲ ಎಂದು ಹೀಯಾಳಿ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪತಿಯನ್ನು ಪತ್ನಿ ಕೊಂದಿದ್ದಾಳೆ ಎನ್ನಲಾಗಿದೆ.

ಬೆಂಗಳೂರು: ಮಕ್ಕಳಾಗಲಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಈ ಘಟನೆ ನಡೆದಿದೆ. ರಾಜಶೇಖರ್ (44) ಕೊಲೆಯಾದ ಪತಿ. ಮಾಲಾಶ್ರೀ ಕೊಲೆ ಮಾಡಿದ ಪತ್ನಿ.

ರಾಜಶೇಖರ್ ಬ್ಯಾಂಕ್ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಕ್ಕಳಾಗದ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ರಾತ್ರಿಯಾದರೇ ಸಾಕು ಕುಡಿದು ಬರುತ್ತಿದ್ದ ರಾಜಶೇಖರ್‌, ಮಕ್ಕಳಾಗಲಿಲ್ಲ ಎಂದು ಹೀಯಾಳಿಸಿ ಪತ್ನಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ಗಲಾಟೆ ವಿಕೋಪಕ್ಕೆ ತಿರುಗಿದ್ದು ಪತ್ನಿ ಮಾಲಾಶ್ರೀ ಚಾಕುವಿನಿಂದ ಇರಿದು ಪತಿ ರಾಜಶೇಖರ್‌ನನ್ನು ಹತ್ಯೆಗೈದಿದ್ದಾಳೆ. ಈ ಕುರಿತು ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.