Blackmail Case: ಬೆಂಗಳೂರಲ್ಲಿ ಖಾಸಗಿ ವಿಡಿಯೋ ತೋರಿಸಿ ಮಹಿಳೆಗೆ ಬ್ಲ್ಯಾಕ್ಮೇಲ್; ಲಿವ್ ಇನ್ ಸಂಗಾತಿ ಅರೆಸ್ಟ್
Blackmail Case: ಪತಿಯಿಂದ ಬೇರ್ಪಟ್ಟ ಮಹಿಳೆಯೊಬ್ಬರು ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದರು. ಅವರ ಜತೆ ಸಹ ಜೀವನ ನಡೆಸುತ್ತೊದ್ದ ವ್ಯಕ್ತಿ, ಖಾಸಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಹೀಗಾಗಿ ಮಹಿಳೆ ದೂರು ದಾಖಲಿಸಿದ್ದಾರೆ.


ಬೆಂಗಳೂರು: ಖಾಸಗಿ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್ಮೇಲ್ (Blackmail Case) ಮಾಡುತ್ತಿದ್ದಾರೆ ಎಂದು ಆರೋಪಿಸಿ 30 ವರ್ಷದ ಮಹಿಳೆಯೊಬ್ಬರು ತನ್ನ ಲಿವ್-ಇನ್ ಸಂಗಾತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ವಿವಾಹಿತ ಮಹಿಳೆಯಾಗಿರುವ ಸಂತ್ರಸ್ತೆ, ಕೌಟುಂಬಿಕ ಹಿಂಸಾಚಾರದ ಹಿನ್ನೆಲೆಯಲ್ಲಿ ಪತಿಯಿಂದ ಬೇರ್ಪಟ್ಟಿದ್ದು, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದರು. ನಂತರ, ಆಕೆ ಆರೋಪಿಯನ್ನು ಭೇಟಿಯಾಗಿದ್ದು, ತಾನು ಕೆಲಸ ಪಡೆಯಲು ಸಹಾಯ ಮಾಡಿದ್ದರಿಂದ ಆತನೊಂದಿಗೆ ಆತ್ಮೀಯವಾಗಿದ್ದಳು.
ವಿವಾಹಿತನಾಗಿರುವ ಆರೋಪಿ, ತನ್ನ ಪತಿಗೆ ವಿಚ್ಛೇದನ ನೀಡುವಂತೆ ಮಹಿಳೆಯ ಮನವೊಲಿಸಿ, ಕಾಡುಗೋಡಿಯ ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ಬಾಡಿಗೆ ಮನೆಯಲ್ಲಿ ಕಳೆದ ಆರು ವರ್ಷಗಳಿಂದ ಲಿವ್-ಇನ್ ಸಂಗಾತಿಯಾಗಿ ಸಂತ್ರಸ್ತೆಯ ಜತೆ ವಾಸಿಸಲು ಪ್ರಾರಂಭಿಸಿದನು. ನಂತರ ಆಕೆಯ ಗಮನಕ್ಕೆ ಬಾರದೆ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
2023ರಲ್ಲಿ ಆರೋಪಿಯಿಂದ ಮಹಿಳೆ ತಪ್ಪಿಸಿಕೊಂಡು ಕೋಲಾರ ಜಿಲ್ಲೆಯ ಪೋಷಕರ ಮನೆಗೆ ಹೋಗಿದ್ದಾರೆ. ನಂತರ ಆರೋಪಿಯು ಆಕೆಯ ತಾಯಿಗೆ ಹಣಕ್ಕಾಗಿ ತೊಂದರೆ ನೀಡಲು ಪ್ರಾರಂಭಿಸಿದ್ದಾನೆ. ಹಣ ನೀಡದಿದ್ದರೆ ಮಹಿಳೆಯ ಖಾಸಗಿ ವಿಡಿಯೋಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ. ಆರೋಪಿ ಕಾಡುಗೋಡಿಯಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದು, ಆತನನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಸುದ್ದಿಯನ್ನೂ ಓದಿ | ಕಾಮುಕನಿಗೆ ತಕ್ಕ ಶಿಕ್ಷೆ; ಅತ್ಯಾಚಾರ ಎಸಗಲು ಬಂದ ವ್ಯಕ್ತಿಯ ಖಾಸಗಿ ಅಂಗವನ್ನೇ ಕತ್ತರಿಸಿದ ಮಹಿಳೆ