ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು

Techie Dies in Bengaluru: ಬೆಂಗಳೂರು ನಗರದ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು, ಮಂಗಳೂರಿನ ಕಾವೂರು ಮೂಲದ ಮಹಿಳಾ ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ. ಇವರು ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರಿನಲ್ಲಿ ಮನೆಗೆ ಬೆಂಕಿ; ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು

ಮೃತ ಟೆಕ್ಕಿ ಶರ್ಮಿಳಾ. -

Prabhakara R
Prabhakara R Jan 5, 2026 5:50 PM

ಬೆಂಗಳೂರು: ಮನೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು, ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರು ಗಟ್ಟಿ ಟೆಕ್ಕಿ ಮಹಿಳೆ ಮೃತಪಟ್ಟಿರುವ ಘಟನೆ ನಗರದ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಕಾವೂರು ಮೂಲದ ಶರ್ಮಿಳಾ (34) ಎಂಬುವರು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ.

ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್‌ ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದರು. ತಮ್ಮ ಮನೆ ಸಮೀಪದ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಹಿನ್ನೆಲೆ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಒಬ್ಬರೇ ಇದ್ದರು. ರಾತ್ರಿ 11 ಗಂಟೆ ಸುಮಾರಿಗೆ ಮನೆಯ ಕೋಣೆಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದೆ. ಆಗ ಪಕ್ಕದ ಕೋಣೆಯಲ್ಲಿದ್ದ ಶರ್ಮಿಳಾ ಕೂಡಲೇ ಆ ಕೋಣೆ ಕಡೆ ಬರಲು ಮುಂದಾಗಿದ್ದಾರೆ. ಇದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಹೀಗಾಗಿ ಕತ್ತಲೆಯಲ್ಲಿ ಕಿಟಕಿ ಹಾಗೂ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ. ಮನೆಯ ತುಂಬೆಲ್ಲ ದಟ್ಟವಾದ ಹೊಗೆ ಆವರಿಸಿದ್ದ ಪರಿಣಾಮ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಒಂದು ವರ್ಷದ ಹಿಂದೆ ಕೆಲಸ ಅರಸಿಕೊಂಡು ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದರು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.

ಮಹಿಳೆಯನ್ನು ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ; ಪತಿ, ಮಗನ ಮೇಲೂ ಹಲ್ಲೆ

ತಾಯಿ ಮತ್ತು 3 ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆ

ಮಂಗಳೂರು: ತಾಯಿ ಮತ್ತು ಮೂರು ವರ್ಷದ ಮಗು, ಮನೆ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನ್ವಿ (3) ಮೃತರು ಎಂದು ಗುರುತಿಸಲಾಗಿದೆ.

ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದರು. ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ.

ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದವರಾದ ಮಧುಶ್ರೀ ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ರಂಜಿತಾ ಕುಟುಂಬಕ್ಕೆ 50 ಲಕ್ಷ ಪರಿಹಾರ, 2 ಎಕರೆ ಜಮೀನು ಕೊಡಿ: ವಿಜಯೇಂದ್ರ

ಮಧುಶ್ರೀ ಅವರು ಕೆರೆಗೆ ಹಾರುವ ಮೊದಲು ಮಗುವಿನೊಂದಿಗೆ ಸಾಯಲು ನಿರ್ಧರಿಸಿ ತನ್ನ ಸೊಂಟಕ್ಕೆ ಮಗುವನ್ನು ಬಟ್ಟೆಯಿಂದ ಕಟ್ಟಿಕೊಂಡು ಕೆರೆಗೆ ಹಾರಿದ್ದಾರೆ. ಕೆರೆಯಲ್ಲಿ ಮೃತದೇಹ ಪತ್ತೆಯಾದಾಗ ಮಗು ತಾಯಿಯನ್ನು ಅಪ್ಪಿಕೊಂಡ ರೀತಿಯಲ್ಲೇ ಪತ್ತೆಯಾಗಿದೆ. ಮಗಳ ಸಾವಿನಲ್ಲಿ ಅನುಮಾನ ಇದೆ ಎಂದು ಮಧುಶ್ರೀ ತಾಯಿ ರತ್ನಾವತಿ ದೂರು ನೀಡಿದ್ದಾರೆ. ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಆತ್ಮಹತ್ಯೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.