ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Murder: ಬೆಂಗಳೂರಿನಲ್ಲಿ ಪ್ರೇಯಸಿಯನ್ನು ಲಾಡ್ಜ್‌ಗೆ ಕರೆದು ಇರಿದು ಕೊಂದ ಯುವಕ!

ಕೇರಳದ ಅಡೂರು ಮೂಲದ ಗಂಗಾ ಮತ್ತು ಗೋಕುಲ್‌ ಕೃಷ್ಣ ಇಬ್ಬರೂ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರು ಉದ್ಯೋಗ ಹುಡುಕುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ನಡುವೆ ಲಾಡ್ಜ್‌ನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು, ಪ್ರೇಯಸಿಯನ್ನು ಯುವಕ ಕೊಲೆ ಮಾಡಿದ್ದಾನೆ.

ಬೆಂಗಳೂರಿನಲ್ಲಿ ಪ್ರೇಯಸಿಯನ್ನು ಲಾಡ್ಜ್‌ಗೆ ಕರೆದು ಇರಿದು ಕೊಂದ ಯುವಕ!

-

Prabhakara R
Prabhakara R Nov 27, 2026 5:24 PM

ಬೆಂಗಳೂರು: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ (Bengaluru Murder) ನಗರದ ಕಾಟನ್‌ಪೇಟೆಯ ಮಸ್ತಾನ್‌ ದರ್ಗಾ ಬಳಿಯ ರಿಜೆನ್ಸಿ ಇನ್‌ ಲಾಡ್ಜ್‌ನಲ್ಲಿ ನಡೆದಿದೆ. ಗಂಗಾ ಕೊಲೆಯಾದ ವಿದ್ಯಾರ್ಥಿನಿ. ಆಕೆಯ ಪ್ರಿಯಕರ ಗೋಕುಲ್‌ ಕೃಷ್ಣ ಕೊಲೆ ಆರೋಪಿಯಾಗಿದ್ದಾನೆ.

ಕೇರಳದ ಅಡೂರು ಮೂಲದ ಗಂಗಾ ಮತ್ತು ಗೋಕುಲ್‌ ಕೃಷ್ಣ ಇಬ್ಬರೂ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಆದರೆ, ಇತ್ತೀಚೆಗೆ ಗಂಗಾ, ಗೋಕುಲ್‌ ಕೃಷ್ಣನನ್ನು ನಿರ್ಲಕ್ಷಿಸುತ್ತಿದ್ದಳು. ಇದೇ ವಿಚಾರವಾಗಿ ಮಾತುಕತೆ ನಡೆಸಲು ಇಬ್ಬರೂ ಕಾಟನ್‌ಪೇಟೆಯ ಲಾಡ್ಜ್‌ಗೆ ಬಂದಿದ್ದರು. ನಿನ್ನೆ ಬೆಳಗ್ಗೆ ಸುಮಾರು 10 ಗಂಟೆಗೆ ಲಾಡ್ಜ್‌ಗೆ ಬಂದಿದ್ದ ಇಬ್ಬರು, ಇಂದು ಬೆಳಗ್ಗೆ 10 ಗಂಟೆಗೆ ಚೆಕ್‌ಔಟ್‌ ಆಗಬೇಕಿತ್ತು. ಈ ಮಧ್ಯೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಗೋಕುಲ್‌ ಕೃಷ್ಣ, ಗಂಗಾಳಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಇಬ್ಬರೂ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಗಂಗಾ ಬೇರೊಬ್ಬ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಗೋಕುಲ್‌ಗೆ ಇತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಗುರುವಾರ ರಾತ್ರಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ. ಉದ್ಯೋಗ ಹುಡುಕುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ ಇವರು ಗುರುವಾರ ಕಾಟನ್‌ಪೇಟೆಯ ಲಾಡ್ಜ್‌ನಲ್ಲಿ ಕೊಠಡಿ ಬಾಡಿಗೆಗೆ ಪಡೆದು ಉಳಿದುಕೊಂಡಿದ್ದರು. ಆದರೆ ಉದ್ಯೋಗದ ನಿರೀಕ್ಷೆಯಲ್ಲಿ ಬೆಂಗಳೂರಿಗೆ ಬಂದಿದ್ದ ಯುವತಿಯ ಬದುಕು ದುರಂತದಲ್ಲಿ ಅಂತ್ಯಗೊಂಡಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಾಟನ್‌ಪೇಟೆ ಪೊಲೀಸರು ಆರೋಪಿ ಗೋಕುಲ್‌ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.