ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಎಂಬಿಬಿಎಸ್‌ ಸೀಟ್‌ ಕೊಡಿಸೋದಾಗಿ ಯುವತಿಗೆ 25 ಲಕ್ಷ ವಂಚನೆ: ನಾಲ್ವರ ವಿರುದ್ಧ ಎಫ್‌ಐಆರ್‌

ಬೆಂಗಳೂರಿನಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಕಿಮ್ಸ್ ಕಾಲೇಜಿನಲ್ಲಿ ಎಂಬಿಬಿಎಸ್‌ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮೋಸ ಹೋಗಿರುವುದು ಗೊತ್ತಾದ ಬಳಿಕ ಯುವತಿ ಸದ್ಯ ಪೊಲೀಸರ ಮೊರೆ ಹೋಗಿದ್ದಾಳೆ. ಈ ಸಂಬಂಧ ಕೇಸ್‌ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಎಂಬಿಬಿಎಸ್‌ ಸೀಟ್ (MBBS Seat) ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಬರೋಬ್ಬರಿ 25 ಲಕ್ಷ ರೂ. ಹಣವನ್ನು ವಂಚಿಸಿರುವುದು (fraud Case) ಬೆಂಗಳೂರಿನಲ್ಲಿ ನಡೆದಿದೆ. ಆಯೇಷಾ ಖಥುಮ್​ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು, ಕಿಮ್ಸ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಬಿಎನ್‌ಎಸ್‌ 318(4), 318(2) ಸೇರಿ ಒಟ್ಟು 8 ಸೆಕ್ಷನ್​​ಗಳ ಅಡಿ ಕೇಸ್‌ ದಾಖಲಾಗಿದೆ.

ದೂರಿನಲ್ಲಿ ಏನಿದೆ?

ವಂಚನೆ ಬಗ್ಗೆ ಆಯೇಷಾ ಖಥುಮ್​ ಅವರ ತಂದೆ ಲಾಲ್ ಬಾಬು ಅವರು ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದ್ವಿತೀಯ ಪಿಯುಸಿ ಮತ್ತು ಎನ್ಎ‌ಲ್‌ಟಿ ಪರೀಕ್ಷೆಗಳನ್ನು ಬರೆದಿದ್ದ ಯುವತಿ ಎಂಬಿಬಿಎಸ್‌ ಸೇರುವ ಬಗ್ಗೆ ಯೋಚಿಸಿ, ಒಳ್ಳೆಯ ಕಾಲೇಜಿನಲ್ಲಿ ಸೀಟ್​​ಗಾಗಿ ಪ್ರಯತ್ನಿಸುತ್ತಿದ್ದಳು. ಈ ನಡುವೆ ಪರಿಚಯದ ಸೈಯದ್‌ ತಬ್ರೇಜ್ ಮೂಲಕ ಶಂಶೇರ್ ಬೇಗ್ ಎಂಬಾತನ ಪರಿಚಯವಾಗಿತ್ತು. ಈತ ತನಗೆ ಕಿಮ್ಸ್‌ ಮೆಡಿಕಲ್ ಕಾಲೇಜಿನ ಪ್ರೆಸಿಡೆಂಟ್ ಪರಿಚಯವಿರುವುದಾಗಿ ಹೇಳಿ ಡಾ. ಶರತ್ ಕೆ.ಪಿ. ಎಂಬುವವರನ್ನು ಪರಿಚಯಿಸಿದ್ದ. ಅದರಂತೆ ಬನಶಂಕರಿ 2ನೇ ಹಂತದಲ್ಲಿನ ಕಿಮ್ಸ್‌ ಮೆಡಿಕಲ್ ಕಾಲೇಜಿನಲ್ಲಿ ಶರತ್​​ನ ಭೇಟಿಯಾಗಿದ್ದರು. ಈ ವೇಳೆ ಇದೇ ಕಾಲೇಜಿನಲ್ಲಿ ಆಯೇಷಾ ಖಥುಮ್​​ಗೆ ಸೀಟ್​​ ಕೊಡಿಸೋದಾಗಿ ನಂಬಿಸಿ ಶೈಕ್ಷಣಿಕ ದಾಖಲೆಗಳನ್ನು ಪಡೆಯಲಾಗಿತ್ತು ಎನ್ನಲಾಗಿದೆ.

ನಂತರ ಹೋಟೆಲ್​​ ಒಂದರಲ್ಲಿ ಭೇಟಿಯಾಗಿದ್ದ ಆರೋಪಿಗಳು, ಡೊನೇಶನ್​​ ಆಗಿ 25 ಲಕ್ಷ ಹಣ ಕೊಟ್ಟರೆ ಸೀಟ್​​ ಪಕ್ಕಾ ಎಂದಿದ್ದರು. ಇವರ ಮಾತು ನಂಬಿ ಯುವತಿ ಕಡೆಯವರು ಹಂತ ಹಂತವಾಗಿ ಯುಪಿಐ, ಚೆಕ್​​ ರೂಪದಲ್ಲಿ 10 ಲಕ್ಷ ರೂ. ಹಣ ನೀಡಿದ್ದಾರೆ. ಬಳಿಕ ಆರೋಪಿಗಳ ಡಿಮ್ಯಾಂಡ್​​ ಹಿನ್ನೆಲೆ ಉಳಿದ 15 ಲಕ್ಷವನ್ನು ನಗದು ರೂಪದಲ್ಲಿ ನೀಡಲಾಗಿದೆ. ಪೂರ್ತಿ ಹಣ ಕೈಸೇರಿದ ಮೇಲೆ ಆರೋಪಿಗಳು ತಮ್ಮ ಅಸಲಿ ರೂಪ ತೋರಿಸಿದ್ದು, ಮೆಡಿಕಲ್ ಸೀಟ್ ಕೊಡಿಸದೇ ವಂಚಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಡಾ. ಕೆ.ಪಿ ಶರತ್ ಎಂಬ ವ್ಯಕ್ತಿ ಕಿಮ್ಸ್​​ ಕಾಲೇಜಿನ ಪ್ರೆಸಿಡೆಂಟ್​​ ಅಲ್ಲ ಎಂಬ ವಿಚಾರ ಬಯಲಾಗಿದೆ. ಅಂತಿಮವಾಗಿ ತಾನು ಮೋಸ ಹೋಗಿದ್ದೇನೆ ಎಂಬುವುದು ಗೊತ್ತಾದ ಮೇಲೆ ಯುವತಿ ಕಡೆಯವರು ಪೊಲೀಸರ ಮೊರೆ ಹೋಗಿದ್ದಾರೆ.

ಬೆಂಗಳೂರಿನಲ್ಲಿ ಇವಿ ಸ್ಕೂಟರ್ ಶೋ ರೂಮ್‌ನಿಂದ 35 ಕೋಟಿ ರೂ. ವಂಚನೆ

ಪರೀಕ್ಷೆಗೆ ಹೆದರಿ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿ ತನಿಷ್ಕ ಮತ್ತು ಪ್ರಥಮ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿ ತೇಜಸ್ವಿನಿ ನಾಪತ್ತೆಯಾಗಿದ್ದಾರೆ. ಇವರು ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಮನೆ ಬಿಟ್ಟು ಹೋದರೇ ಎನ್ನುವ ಅನುಮಾನ ಶುರುವಾಗಿದೆ.

ಒಂದು ತಿಂಗಳಿನಿಂದ ಪೊಲೀಸರು ಮತ್ತು ಪೋಷಕರು ಹುಡುಕಾಡುತ್ತಿದ್ದಾರೆ. ಮನೆಯಲ್ಲಿಯೇ ಇಬ್ಬರು ಯುವತಿಯರು ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದಾರೆ. ಎಟಿಎಂ ಸೇರಿದಂತೆ ಏನನ್ನೂ ಕೂಡ ಇವರು ಕೊಂಡುಹೋಗಿಲ್ಲ. ಆಧಾರ್ ಕಾರ್ಡ್ ಹಾಗೂ ಕಾಲೇಜು ಬ್ಯಾಗು ಜೊತೆ ಇಬ್ಬರೂ ನಾಪತ್ತೆಯಾಗಿದ್ದಾರೆ.

ಜನವರಿ 31ರಂದು ಇಬ್ಬರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ. ಈ ಬಗ್ಗೆ ಕೂಡಲೇ ಪೋಷಕರು ವಿಚಾರಣೆಗೆ ದೂರು ನೀಡಿದ್ದಾರೆ. ಕಳೆದ ವರ್ಷ ಪರೀಕ್ಷೆ ತಪ್ಪಿಸಿಕೊಳ್ಳಲು ಒಬ್ಬಳು ಯುವತಿ ಕೈ ಕುಯ್ದುಕೊಂಡಿದ್ದಳು. ಈ ವರ್ಷ ಪರೀಕ್ಷೆ ಸಮೀಪಿಸುತ್ತಿದ್ದಂತೆ ಕಿರಿಯ ವಿಧ್ಯಾರ್ಥಿನಿ ಜೊತೆಗೆ ಕಾಣೆಯಾಗಿದ್ದಾರೆ.