ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru News: ಫಿಟ್ನೆಸ್​ ಸೆಂಟರ್​ನ 3ನೇ ಮಹಡಿಯಿಂದ ಬಿದ್ದು ಯುವತಿ ಸಾವು

Bengaluru News: ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಘಟನೆ ನಡೆದಿದೆ. ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ಕಳೆದ 8 ತಿಂಗಳಿನಿಂದ ರಿಸೆಪ್ಷನಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಿಟ್ನೆಸ್​ ಸೆಂಟರ್​ನ 3ನೇ ಮಹಡಿಯಿಂದ ಬಿದ್ದು ಯುವತಿ ಸಾವು

Prabhakara R Prabhakara R Aug 5, 2025 8:57 PM

ನೆಲಮಂಗಲ: ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ನಡೆದಿದೆ. ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿ. ಈಕೆ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ಕಳೆದ 8 ತಿಂಗಳಿನಿಂದ ರಿಸೆಪ್ಷನಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದಳು.

ಇದ್ದಕ್ಕಿದ್ದಂತೆ ಮೂರನೇ ಮಹಡಿಯಲ್ಲಿದ್ದ ಫಿಟ್ನೆಸ್ ಸೆಂಟರ್‌ ಮೇಲಿನಿಂದ ಬಿದ್ದು ರಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್‌- ಕ್ಯಾಂಟರ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು (Chikkamagaluru News) ಜಿಲ್ಲೆಯಲ್ಲಿ ಭೀಕರವಾದ ಅಪಘಾತ (Road Accident) ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಗೇಟ್ ಬಳಿ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವಪುರದಲ್ಲಿ ನಿದ್ದೆಯ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿಯಿಂದ ಕ್ಯಾಂಟರ್ ವಾಹನ ಮೈಸೂರಿಗೆ ತೆರಳುತ್ತಿತ್ತು. ಕೆಎಸ್ಆರ್ಟಿಸಿ ಬಸ್ಸು ಕಡೂರಿನಿಂದ ಹೂವಿನಹಡಗಲಿಗೆ ತೆರಳುತ್ತಿತ್ತು. ಮೃತಪಟ್ಟ ಇಬ್ಬರೂ ಹುಬ್ಬಳ್ಳಿ ಮೂಲದ ಚಾಲಕ ಹಾಗೂ ಕ್ಲೀನರ್ ಎಂದು ತಿಳಿದುಬಂದಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ ದಾಖಲಾಗಿದೆ.

ರಸ್ತೆ ಬದಿಯ ಗುಂಡಿಗೆ ಬಿದ್ದು ಇಬ್ಬರು ಬೈಕ್ ವಾಹನ ಸವಾರರ ದುರ್ಮರಣ

ಚಿಂತಾಮಣಿ: ದ್ಚಿಚಕ್ರವಾಹನ ರಸ್ತೆಯ ಬದಿಯ ಗುಂಡಿಗೆ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೆಂಚಾರ್ಹಳ್ಳಿ ಸರ್ಕಾರಿ ಪ್ರೌಢಶಾಲೆ ಬಳಿ ಭಾನುವಾರ ರಾತ್ರಿ ನಡೆದಿದೆ. ಚಿಂತಾಮಣಿ ತಾಲೂಕು ಪಲಿಗಡ್ಡ ಗ್ರಾಮದ ನಿವಾಸಿ ಹಾಗೂ ಹಾಲಿ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿ ವಾಸವಾಗಿರುವ ಪ್ರಭಾಕರ ಆಚಾರಿ ಹಾಗೂ ಪಲ್ಲಿಗಡ್ಡ ಗ್ರಾಮದ ವೆಂಕಟರವಣಪ್ಪ ಮೃತರು.

ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಚೇಳೂರು ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದ ವೇಳೆ ದ್ವಿಚಕ್ರವಾಹನ ಚಾಲಕನ ಹಿಡಿತ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು, ತಂದನಂತೆ ರಸ್ತೆಬದಿಯಲ್ಲಿನ ಗುಂಡಿಗೆ ವಾಹನ ಸಮೇತ ಬಿದ್ದು, ಸಾವನ್ನಪ್ಪಿದ್ದಾರೆ ತಿಳಿದು ಬಂದಿದೆ. ಇನ್ನು ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶಿಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ದ್ವಿಚಕ್ರ ವಾಹನ ಅಪಘಾತ,ಸ್ಥಳದಲ್ಲೇ ಇಬ್ಬರು ಸಾವು