ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದತ್ತಪೀಠದಲ್ಲಿ ಮಾಂಸಾಹಾರ ಸೇವನೆ ಆರೋಪ; ಹಿಂದೂ ಸಂಘಟನೆಗಳಿಂದ ಆಕ್ರೋಶ

ವಿವಾದಿತ ದತ್ತಪೀಠದಲ್ಲಿ ಮತ್ತೆ ಮಾಂಸಾಹಾರ ಸೇವನೆ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ಹಿಂದೂ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದತ್ತಪೀಠದ ಯಾಗಶಾಲೆ ಸಮೀಪದಲ್ಲೇ ಕೆಲವರು ಮಾಂಸಾಹಾರ ಸೇವನೆ ನಡೆಸಿರುವುದಾಗಿ ಹಿಂದೂ ಸಂಘಟನೆ ಮುಖಂಡ ರಘು ಸಕಲೇಶಪುರ ಆರೋಪಿಸಿದ್ದಾರೆ.

ಸಂಗ್ರಹ ಚಿತ್ರ

ಚಿಕ್ಕಮಗಳೂರು: ವಿವಾದಿತ ದತ್ತಪೀಠದಲ್ಲಿ (Datta Peetha) ಮತ್ತೆ ಮಾಂಸಾಹಾರ ಸೇವನೆ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ಹಿಂದೂ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ (Hindu) ಹಾಗೂ ಮುಸ್ಲಿಂ ಸಮುದಾಯಗಳ ಧಾರ್ಮಿಕ ಭಾವೈಕ್ಯತೆಯ ಕ್ಷೇತ್ರವೆಂದು ಗುರುತಿಸಲ್ಪಟ್ಟಿರುವ ದತ್ತಪೀಠದ ಹಕ್ಕುದಾರಿಕೆ ವಿಚಾರವಾಗಿ ಎರಡೂ ಸಮುದಾಯಗಳು ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿರುವ ನಡುವೆಯೇ ಈ ಆರೋಪ ಹೊಸ ವಿವಾದಕ್ಕೆ ಕಾರಣವಾಗಿದೆ.

ದತ್ತಪೀಠದ ಯಾಗಶಾಲೆ ಸಮೀಪದಲ್ಲೇ ಕೆಲವರು ಮಾಂಸಾಹಾರ ಸೇವನೆ ನಡೆಸಿರುವುದಾಗಿ ಹಿಂದೂ ಸಂಘಟನೆ ಮುಖಂಡ ರಘು ಸಕಲೇಶಪುರ ಆರೋಪಿಸಿದ್ದಾರೆ. ದತ್ತಪೀಠದ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧವಿದ್ದರೂ ನಿಯಮ ಉಲ್ಲಂಘನೆ ನಡೆದಿದ್ದು, ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ವೈಫಲ್ಯವೇ ಕಾರಣ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಣ್ಣಿಮೆ ಪೂಜೆಗೆ ತೆರಳಿದ್ದ ವೇಳೆ ಈ ಘಟನೆ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣದ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಡಳಿತ ಅಥವಾ ಸಂಬಂಧಿತ ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಈ ವರೆಗೆ ನೀಡಿಲ್ಲ.

ಕಳೆದ ವರ್ಷ ನವೆಂಬರ್‌ನಲ್ಲಿ ಈ ರೀತಿಯ ಘಟನೆ ನಡೆದಿತ್ತು. ನಿಷೇಧಿತ ಹೋಮ ಮಂಟಪದ ಪಕ್ಕದಲ್ಲೇ ಮುಸ್ಲಿಂ ಕುಟುಂಬ ಮಾಂಸಾಹಾರ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಜಿಲ್ಲಾಡಳಿತ ಈ ವಿವಾದಿತ ಪ್ರದೇಶದ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆಗೆ ಪೂರ್ವದಲ್ಲೇ ನಿಷೇಧ ಹೇರಿದೆ. ಆದರೂ ಅದನ್ನು ಕೆಲವರು ಗಾಳಿಗೆ ತೂರಿದ್ದಾರೆ ಎಂದು ಹೇಳಲಾಗುತ್ತಿದೆ.

ಕಲಬುರಗಿಯನ್ನು ಪಾಕಿಸ್ತಾನ ಮಾಡಲು ಹೊರಟಿದೆ ಸರ್ಕಾರ: ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ FIR

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ಹಲವು ಬಾರಿ ಕೇಳಿ ಬಂದಿತ್ತು. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಾಗಿದ್ದು, ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. 2022 ರಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರ ನಮ್ಮದು ಎಂದು ಎರಡೂ ಧರ್ಮದವರ ಮಧ್ಯೆ ವಿವಾದ ಸೃಷ್ಟಿಯಾಗಿತ್ತು.

Vishakha Bhat Heggar

View all posts by this author