ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ನಟ ದರ್ಶನ್‌ಗೆ ಗಲ್ಲು ಶಿಕ್ಷೆ ಆಗಲೇಬೇಕು; ಕೋರ್ಟ್‌ಗೆ ಅಪರಿಚಿತ ವ್ಯಕ್ತಿ ಅರ್ಜಿ!

Renukaswamy murder case: ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನಲ್ಲಿ ಬುಧವಾರ ನಡೆಯುತ್ತಿದ್ದಾಗ, ಮಧ್ಯ ಪ್ರವೇಶಿಸಿದ ಅಪರಿಚಿತ ವ್ಯಕ್ತಿ, ದರ್ಶನ್ ಸೇರಿ ಪ್ರಕರಣದಲ್ಲಿ ಭಾಗಿಯಾಗಿರುವ 17 ಜನರಿಗೂ ಮರಣದಂಡನೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ, ಅರ್ಜಿಯನ್ನು ನ್ಯಾಯಾಧೀಶರಿಗೆ ನೀಡಲು ಪ್ರಯತ್ನಿಸಿದ್ದಾನೆ.

ದರ್ಶನ್‌ಗೆ ಗಲ್ಲು ಶಿಕ್ಷೆ ಆಗಲೇಬೇಕು; ಕೋರ್ಟ್‌ಗೆ ಅಪರಿಚಿತನಿಂದ ಅರ್ಜಿ!

-

Prabhakara R Prabhakara R Sep 3, 2025 7:27 PM

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ (Actor Darshan) ಮತ್ತು ಇತರ 16 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಪರಿಚಿತ ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾದ ಘಟನೆ ಬುಧವಾರ ನಡೆದಿದೆ. ಆದರೆ, ನ್ಯಾಯಾಧೀಶರು ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನಲ್ಲಿ ಬುಧವಾರ ನಡೆಯುತ್ತಿದ್ದಾಗ, ಮಧ್ಯ ಪ್ರವೇಶಿಸಿದ ಅಪರಿಚಿತ ವ್ಯಕ್ತಿ, ದರ್ಶನ್ ಸೇರಿ ಪ್ರಕರಣದಲ್ಲಿ ಭಾಗಿಯಾಗಿರುವ 17 ಜನರಿಗೂ ಮರಣದಂಡನೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ, ಅರ್ಜಿಯನ್ನು ನ್ಯಾಯಾಧೀಶರಿಗೆ ನೀಡಲು ಪ್ರಯತ್ನಿಸಿದ್ದಾನೆ.

ಈ ಅನಿರೀಕ್ಷಿತ ಬೆಳವಣಿಗೆಯಿಂದ ಗೊಂದಲಕ್ಕೊಳಗಾದ ನ್ಯಾಯಾಧೀಶರು, 'ಯಾರು ನೀನು?' ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಆ ವ್ಯಕ್ತಿ, 'ನಾನು ರವಿ ಬೆಳಗೆರೆ ಕಡೆಯವನು' ಎಂದು ಹೇಳಿದ್ದಾರೆ. ಈ ಉತ್ತರದಿಂದ ನ್ಯಾಯಾಧೀಶರು, 'ಯಾರ್ಯಾರೋ ನೀಡುವ ಅರ್ಜಿಯನ್ನು ಪಡೆಯಲು ಸಾಧ್ಯವಿಲ್ಲ' ಎಂದು ಹೇಳಿ ಆ ವ್ಯಕ್ತಿಯ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ನ್ಯಾಯಾಲಯದ ಈ ನಿರ್ಧಾರದ ನಂತರ ಆ ವ್ಯಕ್ತಿ ಕೋರ್ಟ್ ಹಾಲ್‌ನಿಂದ ಹೊರಗೆ ಹೋದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ನಿಯಮದ ಪ್ರಕಾರವೇ ನಡೆಸಬೇಕು ಮತ್ತು ಹೊರಗಿನ ವ್ಯಕ್ತಿಗಳ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಕೋರಿ ಅರ್ಜಿ; ಸೆ. 9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಹಾಗೂ ಜೈಲಿನಲ್ಲಿ ಹಾಸಿಗೆ-ಹೊದಿಕೆ ಇತರ ಸೌಲಭ್ಯ ಕಲ್ಪಿಸಲು ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿರುವ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌, ಆದೇಶವನ್ನು ಸೆ.9ಕ್ಕೆ ಕಾಯ್ದಿರಿಸಿದೆ.

ದರ್ಶನ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿ, ಬಳ್ಳಾರಿ ಹಾಗೂ ಬೆಂಗಳೂರಿನ ನಡುವೆ 310 ಕಿ.ಮೀ. ಅಂತರವಿದ್ದು, ಪ್ರತಿ ಬಾರಿ ವಿಚಾರಣೆ ಸಮಯದಲ್ಲಿ ಬಳ್ಳಾರಿಯಿಂದ ಬಂದು ಹೋಗಲು ಸಾಧ್ಯವಿಲ್ಲ. ಆದ್ದರಿಂದ, ದರ್ಶನ್ ಅವರನ್ನು ಬಳ್ಳಾರಿಗೆ ಸ್ಥಳಾಂತರಿಸಬಾರದು ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು, ಜಾಮೀನು ರದ್ದುಪಡಿಸಿರುವ ಆದೇಶದಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಆರೋಪಿಗಳು ಜೈಲಿನಲ್ಲಿ ತೋರಿರುವ ವರ್ತನೆಗಳನ್ನು ಗಮನಿಸಿದೆ. ಹೀಗಿರುವಾಗ, ಆರೋಪಿಗಳನ್ನು ಸ್ಥಳಾಂತರಿಸಲು ಬೇರೆ ಕಾರಣಗಳ ಅಗತ್ಯವಿಲ್ಲ. ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬೇರೆಡೆಗೆ ಸ್ಥಳಾಂತರಿಸಬಹುದು ಎಂದು ನ್ಯಾಯಾಲಯಕ್ಕೆ ವಿವರಿಸಿದರು.

ಈ ಸುದ್ದಿಯನ್ನೂ ಓದಿ | Dharmasthala case: ಧರ್ಮಸ್ಥಳ ಪ್ರಕರಣ; ಮಾಸ್ಕ್‌ ಮ್ಯಾನ್‌ ಮತ್ತೆ 3 ದಿನ ಎಸ್‌ಐಟಿ ಕಸ್ಟಡಿಗೆ

ಧೂಮಪಾನಕ್ಕೆ ಜೈಲು ಕೈಪಿಡಿಯಲ್ಲಿ ಅನುಮತಿ ಇದೆ ಎನ್ನುವುದು ಆರೋಪಿಯ ಪರ ವಕೀಲರ ವಾದವಾಗಿದೆ. ಆದರೆ, ಕೈಪಿಡಿಯ ಅನ್ವಯ ಬೇರೆಡೆಗೆ ಸ್ಥಳಾಂತರ ಮಾಡುತ್ತೇವೆ ಎಂದರೆ ಒಪ್ಪುತ್ತಿಲ್ಲವೇಕೆ ಎಂದು ಎಸ್‌ಪಿಪಿ ಪ್ರಶ್ನಿಸಿದರು.