#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Actor Darshan: ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದತಿಗೆ ಸುಪ್ರೀಂ ನಕಾರ; ಪ್ರತಿವಾದಿಗಳಿಗೆ ನೋಟಿಸ್‌

Actor Darshan: ‌ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

Actor Darshan: ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದತಿಗೆ ಸುಪ್ರೀಂ ನಕಾರ; ಪ್ರತಿವಾದಿಗಳಿಗೆ ನೋಟಿಸ್‌

Profile Prabhakara R Jan 24, 2025 1:58 PM

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿಗಳಾದ ನಟ ದರ್ಶನ್‌ (Actor Darshan), ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದತಿ ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದ್ದು, ಇದೇ ವೇಳೆ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ.

ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠವು ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರು, ರೇಣುಕಾಸ್ವಾಮಿ ಕೊಲೆಯು ಆಘಾತಕಾರಿ ಪ್ರಕರಣವಾಗಿದ್ದು, ಹೈಕೋರ್ಟ್‌ ಇಡೀ ಪ್ರಕರಣವನ್ನು ಮರೆಮಾಚಲು ಪ್ರಯತ್ನಿಸಿದೆ. ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಪ್ರಕರಣದಲ್ಲಿನ ಸಹ ಆರೋಪಿಗಳು ಹೈಕೋರ್ಟ್‌ನ ತೀರ್ಮಾನಗಳನ್ನು ಆಧಾರವಾಗಿಸಿಕೊಂಡು ಜಾಮೀನು ಪಡೆಯಲು ಅನುಮತಿಸಬಾರದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಹೈಕೋರ್ಟ್‌ ಆದೇಶದಲ್ಲಿ ದಾಖಲಿಸಿರುವ ತೀರ್ಮಾನಗಳನ್ನು ಬಳಕೆ ಮಾಡಿಕೊಂಡು ಇತರೆ ಆರೋಪಿಗಳು ಜಾಮೀನು ಪಡೆಯಲು ಅನುಮತಿಸಬಾರದು ಎಂದು ರಾಜ್ಯ ಸರ್ಕಾರ ಕೋರಿದೆ. ರಾಜ್ಯ ಸರ್ಕಾರವು ಜಾಮೀನು ರದ್ದತಿ ಕೋರುತ್ತಿರುವುದರಿಂದ ಆಕ್ಷೇಪಾರ್ಹವಾದ ಆದೇಶಕ್ಕೆ ತಡೆ ನೀಡುವುದು ಸೂಕ್ತವಲ್ಲ. ಪ್ರಾಸಿಕ್ಯೂಷನ್‌ ಹಿತಾಸಕ್ತಿ ರಕ್ಷಿಸುವ ನಿಟ್ಟಿನಲ್ಲಿ ಪ್ರಕರಣದಲ್ಲಿ ಬೇರೆ ಯಾವುದೇ ಆರೋಪಿ ಜಾಮೀನು ಕೋರಿದರೆ ಸಕ್ಷಮ ನ್ಯಾಯಾಲಯವು ಹೈಕೋರ್ಟ್‌ನ ಆಕ್ಷೇಪಾರ್ಹ ಆದೇಶವನ್ನು ಆಧರಿಸಬಾರದು. ಪ್ರಕರಣದಲ್ಲಿನ ಬೇರೆ ಯಾವುದೇ ಆರೋಪಿಯು ಭವಿಷ್ಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದರೆ ಅದನ್ನು ಮೆರಿಟ್‌ ಮೇಲೆ ನಿರ್ಧರಿಸಬೇಕು ಎಂದು ಆದೇಶಿಸಿ, ವಿಚಾರಣೆ ಮುಂದೂಡಿತು.

2024ರ ಡಿಸೆಂಬರ್‌ 13ರಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠವು ಆರೋಪಿಗಳಾಗಿರುವ ಪವಿತ್ರಾ ಗೌಡ (ಎ 1), ದರ್ಶನ್‌ (ಎ 2) ಜಗದೀಶ್‌ ಜಗ್ಗ ಅಲಿಯಾಸ್‌ ಜಗ್ಗ (ಎ 6), ಅನುಕುಮಾರ್‌ ಅಲಿಯಾಸ್‌ ಅನು (ಎ 7), ಆರ್‌ ನಾಗರಾಜು (ಎ 11), ಎಂ ಲಕ್ಷ್ಮಣ್‌ (ಎ 12), ಪ್ರದೋಶ್‌ ಎಸ್‌. ರಾವ್‌ (ಎ 14) ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್‌, ಪವಿತ್ರ ಗೌಡ ಸೇರಿ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ, ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ನಡೆಯಿತು.

ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ, ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

ಈ ಸುದ್ದಿಯನ್ನೂ ಓದಿ | Cabinet Meeting: ಅರಮನೆ ಮೈದಾನ ಭೂಸ್ವಾಧೀನ ವಿವಾದ ಕುರಿತು ಇಂದು ತುರ್ತು ಸಂಪುಟ ಸಭೆ