ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actress Ramya: ನಟಿ ರಮ್ಯಾಗೆ ಖಾಸಗಿ ಅಂಗದ ಫೋಟೊ, ವಿಡಿಯೊ ಕಳುಹಿಸಿದ್ದ ದರ್ಶನ್‌ ಅಭಿಮಾನಿ!

Actress Ramya: ನಟಿ ರಮ್ಯಾಗೆ ಆರೋಪಿ ರಾಜೇಶ್ ಅತಿ ಹೆಚ್ಚು ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ. ಆರೋಪಿ ರಾಜೇಶ್ ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿಯಾಗಿದ್ದಾನೆ. ಖಾಸಗಿ ಅಂಗದ ಫೋಟೊ ಕಳುಹಿಸಿ ರಮ್ಯಾಗೆ ಹಿಂಸೆ ನೀಡಿದ್ದ ಎನ್ನಲಾಗಿದೆ.

ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು, ಮತ್ತಿಬ್ಬರು ಆರೋಪಿಗಳನ್ನು ಬಂಧಿದಿದ್ಧಾರೆ. ಬಂಧಿತರಲ್ಲಿ ಒಬ್ಬ ಒಬ್ಬ ದರ್ಶನ್ ಫ್ಯಾನ್, ಮತ್ತೊಬ್ಬ ನಟ ಧನ್ವೀರ್ ಫ್ಯಾನ್ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಇನ್ನು ಬಂಧಿತ ಆರೋಪಿಯು ನಟಿ ರಮ್ಯಾಗೆ ತನ್ನ ಖಾಸಗಿ ಭಾಗದ ಅಂಗಗಳ ಫೋಟೊ, ವಿಡಿಯೊ ಕಳುಹಿಸಿದ್ದ ಎನ್ನಲಾಗಿದೆ.

ಹೌದು, ನಟಿ ರಮ್ಯಾಗೆ ಆರೋಪಿ ರಾಜೇಶ್ ಅತಿ ಹೆಚ್ಚು ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ. ಆರೋಪಿ ರಾಜೇಶ್ ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿಯಾಗಿದ್ದಾನೆ. ಖಾಸಗಿ ಅಂಗದ ಫೋಟೊ ಕಳುಹಿಸಿ ರಮ್ಯಾಗೆ ಹಿಂಸೆ ನೀಡಿದ್ದ. ಸದ್ಯ ಪೊಲೀಸರು ಮೊಬೈಲ್ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಡಿ ಬಾಸ್‌ ಅಭಿಮಾನಿಗಳು ಅಶ್ಲೀಲ ಮೆಸೇಜ್‌ ಕಳುಹಿಸಿದಾಗ ಪ್ರತಿಕ್ರಿಯಿಸಿದ್ದ ನಟಿ ರಮ್ಯಾ, ರೇಣುಕಾಸ್ವಾಮಿ ಅವರ ಮೆಸೇಜ್‌ಗಳಿಗೂ ಡಿ ಬಾಸ್ ಅಭಿಮಾನಿಗಳ ಸಂದೇಶಕ್ಕೂ ವ್ಯತ್ಯಾಸವಿಲ್ಲ. ಸ್ತ್ರೀದ್ವೇಷದ ಮನಸ್ಥಿತಿಯೊಂದಿಗೆ ಈ ರೀತಿಯ ಟ್ರೋಲ್‌ಗಳಿಂದಾಗಿಯೇ ಮಹಿಳೆಯರು ಮತ್ತು ಯುವತಿಯರು ಕಿರುಕುಳ, ಅತ್ಯಾಚಾರ ಮತ್ತು ಕೊಲೆಗೆ ಒಳಗಾಗುತ್ತಾರೆ ಎಂದು ನಟಿ ರಮ್ಯಾ ಪೋಸ್ಟ್‌ ಮಾಡಿದ್ದರು.

ನಂತರ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟಾರೆ ಐವರು ಕಿಡಿಗೇಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ತೀರ್ಪಿಗೆ ಸಂಬಂಧಿಸಿ ರಮ್ಯಾ ಪೋಸ್ಟ್‌ ಮಾಡಿದ್ದರು. ನ್ಯಾಯ ಸಿಗುವ ಭರವಸೆ ಮೂಡುತ್ತಿದೆ ಎಂದು ಬರೆದಿದ್ದರು. ಇದರಿಂದ ರೊಚ್ಚಿಗೆದ್ದ ಕೆಲವರು ಡಿ ಬಾಸ್‌ ಅಭಿಮಾನಿಗಳ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಸಂದೇಶಗಳ ಮೂಲಕ ದಾಳಿ ನಡೆಸಿದ್ದರು.

43 ಇನ್ಸ್ಟಾಗ್ರಾಂ ಅಕೌಂಟ್ ಬೆನ್ನತ್ತಿರುವ ಸಿಸಿಬಿ ಪೊಲೀಸರು, ನಟಿ ರಮ್ಯಾ ಬಳಿ ಅಶ್ಲೀಲ ಮೆಸೇಜ್ ಅಕೌಂಟ್‌ಗಳ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಪೇಜ್‌ಗಳಿಂದ ಅಶ್ಲೀಲ ಮೆಸೇಜ್‌ಗಳು ಬಂದಿದ್ದವು? ಯಾವ ನಂಬರ್‌ಗಳಿಂದ ಬೆದರಿಕೆ ಕರೆ ಬಂದಿತ್ತು ಇತ್ಯಾದಿ ಎಲ್ಲದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿದ್ದಾರೆ.

ಈ ಸುದ್ದಿಯನ್ನೂ ಓದಿ | Actress Ramya: ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ; ಕಾನೂನು ಎಲ್ಲರಿಗೂ ಒಂದೇ ಎಂದ ನಟಿ ರಮ್ಯಾ