ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್‌ ಆತ್ಮಹತ್ಯೆ!

ನಟಿ ಕೃಷಿ ತಾಪಂಡ ಅವರ ಆರ್‌ ಆರ್‌ ನಗರದಲ್ಲಿರುವ ಮನೆಯಲ್ಲಿ ಉದ್ಯಮಿ ವೈಶಾಖ್ (Vaishak) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ನಟಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ವೈಶಾಕ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಕೃಷಿ ತಾಪಂಡಗೆ ಕರೆ ಮಾಡಿದ್ದ ವೈಶಾಕ್‌ ನಾನಿನ್ನು ಬದುಕುವುದಿಲ್ಲ, ಸಾಯುತ್ತೇನೆ ಎಂದು ಹೇಳಿದ್ದರು.

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್‌ ಆತ್ಮಹತ್ಯೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 25, 2026 11:29 AM

ಬೆಂಗಳೂರು: ನಟಿ ಕೃಷಿ ತಾಪಂಡ (Krishi Thapanda) ಅವರ ಆರ್‌ ಆರ್‌ ನಗರದಲ್ಲಿರುವ ಮನೆಯಲ್ಲಿ ಉದ್ಯಮಿ ವೈಶಾಖ್ (Vaishak) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ನಟಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ವೈಶಾಕ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಕೃಷಿ ತಾಪಂಡಗೆ ಕರೆ ಮಾಡಿದ್ದ ವೈಶಾಕ್‌ ನಾನಿನ್ನು ಬದುಕುವುದಿಲ್ಲ, ಸಾಯುತ್ತೇನೆ ಎಂದು ಹೇಳಿದ್ದರು. ಬಳಿಕ ನಟಿ ತಕ್ಷಣ ಕುಟುಂಬಕ್ಕೆ ಮಾಹಿತಿ ನೀಡಿದ್ದರು.

ತಡರಾತ್ರಿ ಹನ್ನೆರಡು ಘಂಟೆ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿದೆ. ರಾಜರಾಜೇಶ್ವರಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತ ವೈಶಾಕ್ ಉಪಾಧ್ಯಾಯ ಮೂಲತಃ ಗಿರಿನಗರದ ನಿವಾಸಿ. ನಟಿ ಕೃಷಿ ತಾಪಂಡ ವಾಸವಿದ್ದ ನಿವಾಸದಲ್ಲಿ ವೈಶಾಕ್ ಸಾವಿಗೆ ಶರಣಾಗಿದ್ದಾರೆ. ಇನ್ನು, ನಟಿ ಕಳೆದ ಒಂದು ವಾರದಿಂದ ಅಪಾರ್ಟೆಂಟ್‌ನಲ್ಲಿ ಇರಲಿಲ್ಲ ಎನ್ನಲಾಗಿದೆ.

Shine Tom Chacko: ಡೆಡ್ಲಿ ಆಕ್ಸಿಡೆಂಟ್‌; ಖ್ಯಾತ ನಟ, ಆತನ ತಾಯಿ ಸ್ಥಿತಿ ಗಂಭೀರ, ತಂದೆ ಸ್ಥಳದಲ್ಲಿಯೇ ಸಾವು

ಮೃತ ವೈಶಾಕ್ ಈ ಹಿಂದೆ ಪತ್ನಿ ಜತೆಗೆ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಹೀಗಾಗಿ ಕೃಷಿ ಮನೆಯಲ್ಲಿ ವಾಸಿಸುತ್ತಿದ್ದರು. ಉದ್ಯಮಿ ಅರವಿಂದ್ ರೆಡ್ಡಿ ಅವರಿಗೆ ಜೀವಬೆದರಿಕೆ ಹಾಕಿದ ಗಂಭೀರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಈ ಕುರಿತು ನಗರದ ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನಟಿಯ ಮನೆಯಲ್ಲಿ ವೈಶಾಕ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. . ಆರ್.ಆರ್. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಟಿ ಮತ್ತು ಮೃತನ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.