ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actress Ramya: ನಿಮ್ಮ ಜತೆಗೆ ನಾವು ಸದಾ ನಿಲ್ಲುತ್ತೇವೆ; ರಮ್ಯಾಗೆ ನಟ ಶಿವಣ್ಣ ಬೆಂಬಲ

Actress Ramya: ನಟಿ ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ ಎಂದು ನಟ ಶಿವರಾಜ್‌ ಕುಮಾರ್‌ ತಿಳಿಸಿದ್ದಾರೆ.

ನಿಮ್ಮ ಜತೆಗೆ ನಾವು ಸದಾ ನಿಲ್ಲುತ್ತೇವೆ; ರಮ್ಯಾಗೆ ನಟ ಶಿವಣ್ಣ ಬೆಂಬಲ

Prabhakara R Prabhakara R Jul 29, 2025 2:21 PM

ಬೆಂಗಳೂರು: ರೇಣುಕಾಸ್ವಾಮಿ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು ಎಂದು ಪೋಸ್ಟ್‌ ಮಾಡಿದ್ದ ನಟಿ ರಮ್ಯಾ (Actress Ramya) ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್‌ ಫ್ಯಾನ್ಸ್‌ ಅಸಭ್ಯ ಕಮೆಂಟ್‌ಗಳನ್ನು ಮಾಡಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು ನೀಡಿದ್ದರು. ಇದೀಗ ಈ ವಿಚಾರದಲ್ಲಿ ನಟಿ ರಮ್ಯಾ ಅವರಿಗೆ ನಟ ಶಿವರಾಜ್‌ ಕುಮಾರ್‌ ದಂಪತಿ (Shivaraj Kumar) ಬೆಂಬಲ ಸೂಚಿಸಿದ್ದು, ರಮ್ಯಾ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಶಿವರಾಜ್‌ ಕುಮಾರ್‌ ಅವರು, ನಟಿ ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ.



ಈ ಸುದ್ದಿಯನ್ನೂ ಓದಿ | Actress Ramya: D ಬಾಸ್‌ ಫ್ಯಾನ್ಸ್‌ Vs ರಮ್ಯಾ ಪೋಸ್ಟ್‌ ವಾರ್‌; ʼಪದ್ಮಾವತಿʼಗೆ ರಕ್ಷಿತಾ, ವಿಜಯಲಕ್ಷ್ಮಿ ಟಾಂಗ್‌

ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ನಟ ಶಿವರಾಜ್‌ಕುಮಾ‌ರ್ ಮತ್ತು ಗೀತಾ ಶಿವರಾಜ್‌ಕುಮಾ‌ರ್ ತಿಳಿಸಿದ್ದಾರೆ.