ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Ranya Rao Case: ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು; ಒಂದು ವರ್ಷದ ಬಳಿಕ ಜೈಲಿನಿಂದ ಬಿಡುಗಡೆ ಭಾಗ್ಯ

gold smuggling case: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿ, ಕಳೆದೊಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಅವರಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದ್ದು, ಸಂಜೆ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ನಟಿ ರನ್ಯಾರಾವ್‌ಗೆ ಬಿಗ್ ರಿಲೀಫ್; ಕೋರ್ಟ್‌ನಿಂದ ಜಾಮೀನು ಮಂಜೂರು

ನಟಿ ರನ್ಯಾ ರಾವ್. -

Prabhakara R
Prabhakara R Apr 22, 2026 3:45 PM

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ (gold smuggling case) ಜೈಲು ಸೇರಿರುವ ನಟಿ ರನ್ಯಾರಾವ್‌ಗೆ (Ranya Rao Case) ಬಿಗ್ ರಿಲೀಫ್ ಸಿಕ್ಕಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯದಿಂದ ನಟಿಗೆ ಜಾಮೀನು ಮಂಜೂರಾಗಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ ಕಾಯ್ದೆ ಸೆಕ್ಷನ್ 3(1) ಅಡಿ ಬಂಧನದ ಆದೇಶ ಹೊರಡಿಸಿತ್ತು. ಹೀಗಾಗಿ ರನ್ಯಾ ರಾವ್​ಗೆ ಒಂದು ವರ್ಷ ಜಾಮೀನು ಸಿಕ್ಕಿರಲಿಲ್ಲ. ಇದೀಗ ಒಂದು ವರ್ಷ ಜೈಲು ವಾಸದ ಬಳಿಕ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನು ದೊರೆತ ಹಿನ್ನೆಲೆಯಲ್ಲಿ ಇಂದು ಸಂಜೆ, ಜೈಲಿನಿಂದ ರನ್ಯಾರಾವ್ ಬಿಡುಗಡೆಯಾಗಲಿದ್ದಾರೆ.

ಬಂಧನವಾದ ಎರಡೇ ತಿಂಗಳಿಗೆ, ಅಂದರೆ 2025ರ ಮೇ 20 ರಂದೇ ರನ್ಯಾ ರಾವ್ ಅವರಿಗೆ ಆರ್ಥಿಕ ಅಪರಾಧಗಳ ತಡೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಕಳ್ಳಸಾಗಣೆ ತಡೆಗಟ್ಟುವ ನಿಟ್ಟಿನಲ್ಲಿ ಅವರ ವಿರುದ್ಧ ಕಠಿಣವಾದ ಕಾಫಿಪೋಸಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರಿಂದ ಕೋರ್ಟ್‌ನಿಂದ ಬೇಲ್ ಸಿಕ್ಕಿದ್ದರೂ ಅವರು ಜೈಲಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ. ಇದೀಗ ಒಂದು ವರ್ಷದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರನ್ಯಾ ರಾವ್ ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ.

ಏನಿದು ಪ್ರಕರಣ?

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ರನ್ಯಾ ರಾವ್ ಅವರನ್ನು 2025ರ ಮಾರ್ಚ್​ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಬೆಂಗಳೂರು ವಲಯ ಘಟಕದ DRI ಅಧಿಕಾರಿಗಳು ರನ್ಯಾ ರಾವ್‌ರನ್ನು ತಪಾಸಣೆ ಮಾಡಿದಾಗ, ಸುಮಾರು 14.2 ಕೆ.ಜಿ ತೂಕದ ಚಿನ್ನದ ಬಾರ್‌ಗಳನ್ನು ವಶಪಡಿಸಿಕೊಂಡಿದ್ದರು.

ಮಾರ್ಚ್ 4, 2025ರಂದು ರಾವ್ ಅವರನ್ನು ಬಂಧಿಸಿದ್ದ ಅಧಿಕಾರಿಗಳು ಮಾರ್ಚ್ 10ರಂದು ಕಸ್ಟಮ್ಸ್ ಕಾಯ್ದೆ, 1962ರ ಸೆಕ್ಷನ್ 108ರ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಬಳಿಕ ಮಾರ್ಚ್ 12ರಂದು ಅವರ ಸಹಚರ ತರುಣ್ ಕೊಂಡೂರು ರಾಜು ಹೇಳಿಕೆ ದಾಖಲಿಸಲಾಯಿತು. ಈ ಹೇಳಿಕೆಗಳ ಆಧಾರದ ಮೇಲೆ ಜೈನ್ ಅವರನ್ನು ಏಪ್ರಿಲ್ 7ರಂದು ಅಧಿಕಾರಿಗಳು ಬಂಧಿಸಿದ್ದರು.