ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Murder: ಬೆಂಗಳೂರಿನಲ್ಲಿ ಬಾಡಿಗೆ ಹಣ ಕೇಳಿದ್ದಕ್ಕೆ ವಕೀಲನನ್ನು ಗುಂಡಿಕ್ಕಿ ಕೊಂದ ಬಾಡಿಗೆದಾರರು!

Bengaluru advocate shot dead: ಬೆಂಗಳೂರಿನ ವೈಟ್‌ಫೀಲ್ಡ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪಟ್ಟಂದೂರು ಅಗ್ರಹಾರದಲ್ಲಿ ಕೊಲೆ ಪ್ರಕರಣ ನಡೆದಿದೆ. ಸ್ವಿಗ್ಗಿಯಲ್ಲಿ ಡೆಲಿವರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರೆನ್ನಲಾದ ಇಬ್ಬರು ಆರೋಪಿಗಳು, ವಕೀಲರೊಬ್ಬರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಬಾಡಿಗೆ ಬಾಕಿ ಪಾವತಿಸದ ವಿಚಾರವೇ ಘಟನೆಗೆ ಕಾರಣವಾಗಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಬಾಡಿಗೆ ಹಣ ಕೇಳಿದ್ದಕ್ಕೆ ವಕೀಲನನ್ನು ಗುಂಡಿಕ್ಕಿ ಕೊಂದ ಬಾಡಿಗೆದಾರರು!

-

Prabhakara R
Prabhakara R Oct 19, 2026 3:26 PM

ಬೆಂಗಳೂರು: ಬಾಕಿ ಬಾಡಿಗೆ ಹಣ ಪಾವತಿಸುವ ವಿಚಾರವಾಗಿ ಉಂಟಾದ ಜಗಳದಲ್ಲಿಇಬ್ಬರು ಬಾಡಿಗೆದಾರರು 42 ವರ್ಷದ ವಕೀಲರೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ (Bengaluru Murder) ಭಾನುವಾರ ತಡರಾತ್ರಿ ಬೆಂಗಳೂರಿನ ವೈಟ್‌ಫೀಲ್ಡ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪಟ್ಟಂದೂರು ಅಗ್ರಹಾರದಲ್ಲಿ ನಡೆದಿದೆ.

ಮೃತರನ್ನು ಮಂಜುನಾಥ್‌ (42ವ) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ವಕೀಲರಾಗಿದ್ದು, ಬೆಂಗಳೂರಿನಲ್ಲಿ ಮನೆಯನ್ನು ಬಾಡಿಗೆ ಕೊಟ್ಟಿದ್ದರು. ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸ್ವಿಗ್ಗಿಯಲ್ಲಿ ಡೆಲಿವರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರೆನ್ನಲಾದ ಇಬ್ಬರು ಆರೋಪಿಗಳು ಮಂಜುನಾಥ್‌ ಅವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಬಾಡಿಗೆ ಬಾಕಿ ಪಾವತಿಸದ ವಿಚಾರವೇ ಘಟನೆಗೆ ಕಾರಣವಾಗಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ದಾಳಿ ನಡೆಯುವುದಕ್ಕೆ ಸುಮಾರು ಒಂದು ಗಂಟೆ ಮೊದಲು ಮಂಜುನಾಥ್‌ ಮತ್ತು ಇಬ್ಬರು ಬಾಡಿಗೆದಾರರ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಈ ವೇಳೆ ಆರೋಪಿಗಳಲ್ಲೊಬ್ಬ ಬಂದೂಕು ತೆಗೆದು ಮಂಜುನಾಥ್‌ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯ ಬಳಿಕ ಇಬ್ಬರೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ವೈಟ್‌ಫೀಲ್ಡ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿ ಮುನ್ನ ನಡೆದ ಘಟನೆಗಳ ಆಧಾರದಲ್ಲಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಇಬ್ಬರು ಆರೋಪಿಗಳನ್ನು ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.