Aeroindia 2025: ಏರ್ ಶೋ ಹಿನ್ನೆಲೆ ಯಲಹಂಕದ 14 ಕಿ.ಮೀ. ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಬಂದ್
Aeroindia 2025: ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿಯಲ್ಲಿ ಏರ್ ಶೋ ಇರುವುದರಿಂದ ಯಲಹಂಕದ 14 ಕಿಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿ ಪಾಲಿಕೆ ಆದೇಶಿಸಿದೆ.
ಬೆಂಗಳೂರು: ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ನಗರದ ಹೊರವಲಯದ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಒಂದು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಿಬಿಎಂಪಿ ನೀಡಿದೆ.
ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿಯಲ್ಲಿ ಏರ್ ಶೋ ಇರುವುದರಿಂದ ಯಲಹಂಕದ 14 ಕಿಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿ ಪಾಲಿಕೆ ಆದೇಶಿಸಿದೆ. ನಿಮಯ ಉಲ್ಲಂಘನೆ ಮಾಡಿದರೆ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಯಲಹಂಕ ವಲಯ ಜಂಟಿ ಆಯುಕ್ತರಿಂದ ಸೂಚನೆ ನೀಡಿದ್ದಾರೆ.
ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಯಲಹಂಕ ವಾಯುನೆಲೆಯ ಸುತ್ತ 13 ಕಿ.ಮೀ ವ್ಯಾಪ್ತಿಯೊಳಗಿನ ಮಾಂಸದ ಅಂಗಡಿಗಳು ಮತ್ತು ಮಾಂಸಾಹಾರಿ ರೆಸ್ಟೋರೆಂಟ್‌ಗಳನ್ನು ಬಂದ್ ಮಾಡುವಂತೆ ಹಾಗೂ ಕ್ರೇನ್ಗಳನ್ನು ಬಳಸದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸೂಚನೆ ನೀಡಿದೆ.
ಯಲಹಂಕ ವಾಯುನೆಲೆಯಲ್ಲಿ ರಿಹರ್ಸಲ್ಗಾಗಿ ವಿಮಾನಗಳು ಹಾರಾಟ ನಡೆಸಲಿವೆ. ಈ ವೇಳೆ ವಿಮಾನಗಳಿಗೆ ಪಕ್ಷಿಗಳು ಡಿಕ್ಕಿ ಹೊಡೆಯುವುದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.
ಈ ಸುದ್ದಿಯನ್ನೂ ಓದಿ | BOB Recruitment 2025: ಬ್ಯಾಂಕ್ ಆಫ್ ಬರೋಡಾದ 1,267 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊದ ಟೈಮ್ ಟೇಬಲ್
ಬೆಂಗಳೂರಿನಲ್ಲಿ ಫೆ.10ರಿಂದ 14ರವರೆಗೆ 'ಏರೋ ಇಂಡಿಯಾ-2025' ವೈಮಾನಿಕ ಪ್ರದರ್ಶನ
ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಯ 'ಏರೋ ಇಂಡಿಯಾ-2025' ಫೆಬ್ರವರಿ 10ರಿಂದ 14ರವರೆಗೆ ನಗರದ ಹೊರವಲಯದ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದೆ. ಈ ಬಾರಿಯ ಏರ್ ಶೋ (Aero India 2025) ‘ಕೋಟಿ ಅವಕಾಶಗಳ ಪಥ’ ಎನ್ನುವ ಧ್ಯೇಯವನ್ನು ಹೊಂದಿದೆ.
ಏರ್ ಶೋನ ಮೊದ ಮೂರು ದಿನಗಳನ್ನು (10-12 ಫೆಬ್ರವರಿ) ವ್ಯಾಪಾರದ ದಿನಗಳಾಗಿ ಗೊತ್ತುಪಡಿಸಲಾಗಿದೆ. ಕೊನೆಯ ಎರಡು ದಿನಗಳು ಅಂದರೆ ಫೆಬ್ರವರಿ 13 ಮತ್ತು 14ರಂದು ಸಾರ್ವಜನಿಕ ದಿನಗಳಾಗಿ ನಿಗದಿಪಡಿಸಲಾಗಿದೆ. ಈ ಸಮಯದಲ್ಲಿ ಪ್ರದರ್ಶನವನ್ನು ವೀಕ್ಷಿಸಲು ಜನರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ದೇಶೀಯ ರಕ್ಷಣಾ ಉತ್ಪಾದನಾ ಸಾಮರ್ಥ್ಯಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರದರ್ಶಿಸುವ ಮೂಲಕ ಮೇಕ್-ಇನ್-ಇಂಡಿಯಾ ಉಪಕ್ರಮಕ್ಕೆ ದೇಶದ ಬದ್ಧತೆಯನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ.
ಆಧುನಿಕ ಏರೋಸ್ಪೇಸ್ ಪ್ಲಾಟ್‌ಫಾರ್ಮ್‌ಗಳು ಮತ್ತು ತಂತ್ರಜ್ಞಾನಗಳ ಸಾಮರ್ಥ್ಯವನ್ನು ಪ್ರದರ್ಶಿಸುವ ಡೈನಾಮಿಕ್ ಏರೋಬ್ಯಾಟಿಕ್ ಪ್ರದರ್ಶನಗಳು ಮತ್ತು ಲೈವ್ ತಂತ್ರಜ್ಞಾನ ಪ್ರದರ್ಶನಗಳು ಏರ್ ಶೋನಲ್ಲಿ ಇರಲಿವೆ.1996 ರಿಂದ ಬೆಂಗಳೂರಿನಲ್ಲಿ ಆಯೋಜಿಸಲಾದ 14 ಯಶಸ್ವಿ ಆವೃತ್ತಿಗಳೊಂದಿಗೆ ಏರೋ ಇಂಡಿಯಾ ಈಗಾಗಲೇ ಜಾಗತಿಕವಾಗಿ ಒಂದು ಪ್ರಮುಖ ಏರೋಸ್ಪೇಸ್ ಪ್ರದರ್ಶನವಾಗಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಆವೃತ್ತಿಯು ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸಿತು. ಏಕೆಂದರೆ ಇದು ಏಳು ಲಕ್ಷಕ್ಕೂ ಹೆಚ್ಚು ಸಂದರ್ಶಕರು, 98 ದೇಶಗಳ ಗಣ್ಯರು ಮತ್ತು ವ್ಯವಹಾರಗಳು, ಹೂಡಿಕೆದಾರರು, ಸ್ಮಾರ್ಟ್-ಅಪ್‌ಗಳು ಮತ್ತು MSME ಗಳು ಸೇರಿದಂತೆ 809 ಪ್ರದರ್ಶಕರನ್ನು ಆಕರ್ಷಿಸಿತ್ತು. ವೈಮಾನಿಕ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರು https://www.aeroindia.gov.in/visitor-registration ನೋಂದಾಯಿಸಿಕೊಳ್ಳಬಹುದಾಗಿದೆ.