Aeroindia 2025: ಬೆಂಗಳೂರು ಏರ್‌ಪೋರ್ಟ್ ವಾಯುಯಾನ ಪ್ರದೇಶ ಮುಚ್ಚುವ ಸಮಯ ಪರಿಷ್ಕರಣೆ
Aeroindia 2025: ಏರ್ ಶೋ ಹಿನ್ನೆಲೆಯಲ್ಲಿ ಫೆಬ್ರವರಿ 5 ರಿಂದ ಫೆಬ್ರವರಿ 14, 2025 ರವರೆಗೆ ಕೆಲವು ಗಂಟೆಗಳ ಅವಧಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡುತ್ತದೆ. ಹೀಗಾಗಿ ವಿಮಾನಗಲ ಹಾರಾಟದಲ್ಲಿ ವ್ಯತ್ಯಯವಾಗಲಿದೆ. ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025-ವೈಮಾನಿಕ ಪ್ರದರ್ಶನದ (Aeroindia 2025) ನಿಮಿತ್ತ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru Airport) ವಾಯುಯಾನ ಪ್ರದೇಶ ಫೆಬ್ರವರಿ 5 ರಿಂದ ಫೆಬ್ರವರಿ 14, 2025 ರವರೆಗೆ ಕೆಲವು ಗಂಟೆಗಳ ಅವಧಿಗೆ ಮುಚ್ಚಲ್ಪಡುತ್ತದೆ ಎಂದು ತಿಳಿಸಲಾಗಿತ್ತು. ಆದರೆ, ಇದೀಗ ವಾಯುಯಾನ ಪ್ರದೇಶ ಮುಚ್ಚಲ್ಪಡುವ ಸಮಯದಲ್ಲಿ ಪರಿಷ್ಕರಣೆಯಾಗಿದ್ದು, ಈ ಮುನ್ನ ನಿಗದಿಯಾಗಿದ್ದ ಅವಧಿಯನ್ನು ಕಡಿತಗೊಳಿಸಲಾಗಿದೆ. ಹೀಗಾಗಿ ವಾಣಿಜ್ಯ ವಿಮಾನ ಕಾರ್ಯಾಚರಣೆಯಲ್ಲಿ ಉಂಟಾಗುವ ವ್ಯತ್ಯಯವೂ ಕಡಿಮೆಯಾಗಲಿದೆ.
ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಈ ಅವಧಿಯಲ್ಲಿ ಸಂಚಾರ ನಿಯಮ ಜಾರಿ ಸಂಸ್ಥೆಗಳು ನೀಡುವ ಸಲಹೆಗಳನ್ನು ಪ್ರಯಾಣಿಕರು ಪಾಲಿಸಬೇಕಿದೆ. ಜತೆಗೆ, ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವ ಎಲ್ಲ ಪ್ರಯಾಣಿಕರು ವಿಮಾನ ವೇಳಾಪಟ್ಟಿಯ ನವೀಕೃತ ಮಾಹಿತಿಗೆ ಅನುಸಾರವಾಗಿ ತಮ್ಮ ಆಗಮನ ಮತ್ತು ನಿರ್ಗಮನವನ್ನು ಯೋಜಿಸಲು ನಾವು ವಿನಂತಿ ಮಾಡುತ್ತೇವೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.
ವಿಮಾನ ಹಾರಾಟದಲ್ಲಿ ವ್ಯತ್ಯಯ
ಏರೋ ಇಂಡಿಯಾ 2025 ಹಿನ್ನೆಲೆಯಲ್ಲಿ ಫೆಬ್ರವರಿ 5 ರಿಂದ ಫೆಬ್ರವರಿ 14 ರವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದೆ. ಹೀಗಾಗಿ ಈ ಕೆಳಕಂಡ ದಿನಗಳಲ್ಲಿ ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ.
ಫೆಬ್ರವರಿ 5: ಬೆಳಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3 ರಿಂದ 4.30ರವರೆಗೆ
ಫೆಬ್ರವರಿ 6: ಬೆಳಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3 ರಿಂದ 4.30ರವರೆಗೆ
ಫೆಬ್ರವರಿ 7: ಬೆಳಗ್ಗೆ 9 ರಿಂದ ಮಧ್ಯಾಹ್ನ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ 4.30ರವರೆಗೆ
ಫೆಬ್ರವರಿ 8: ಬೆಳಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3 ರಿಂದ 4.30ರವರೆಗೆ
ಫೆಬ್ರವರಿ 9: ಬೆಳಗ್ಗೆ 9 ರಿಂದ ಮಧ್ಯಾಹ್ನ 11ರವರೆಗೆ
ಫೆಬ್ರವರಿ 10: ಬೆಳಗ್ಗೆ 9 ರಿಂದ ಮಧ್ಯಾಹ್ನ 11.30ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 3.30ರವರೆಗೆ
ಫೆ. 11 ಮತ್ತು 12: : ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2.30
ಫೆ. 13 ರಿಂದ 14: ಬೆಳಗ್ಗೆ 9.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 5ರವರೆಗೆ
ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025-ವೈಮಾನಿಕ ಪ್ರದರ್ಶನದ ನಿಮಿತ್ತ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಫೆಬ್ರವರಿ 5 ರಿಂದ ಫೆಬ್ರವರಿ 14, 2025 ರವರೆಗೆ ಕೆಲವು ಗಂಟೆಗಳ ಅವಧಿಗೆ ಮುಚ್ಚಲ್ಪಡುತ್ತದೆ ಎಂದು ತಿಳಿಸಲಾಗಿತ್ತು. ಆದರೆ, ಇದೀಗ ವಾಯುಯಾನ ಪ್ರದೇಶ ಮುಚ್ಚಲ್ಪಡುವ ಸಮಯದಲ್ಲಿ… pic.twitter.com/1Tv796HcpS
— ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (@blrairport_kn) February 1, 2025