ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Drugs Mafia: ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಆಫ್ರಿಕನ್ ಪ್ರಜೆ ಬಂಧನ; 4 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

Drugs Mafia: ಆರೋಪಿಗಳು ಇತರ ರಾಜ್ಯಗಳಲ್ಲಿರುವ ತಮ್ಮ ಸಹವರ್ತಿಗಳಿಂದ ಮತ್ತು ಬೆಂಗಳೂರಿನ ಸುತ್ತಮುತ್ತಲಿನ ಸ್ಥಳೀಯ ಕೆಲವು ವ್ಯಕ್ತಿಗಳಿಂದ ಮಾದಕ ವಸ್ತುಗಳನ್ನು ಪಡೆಯುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಬಂಧಿತನಿಂದ ಪೊಲೀಸರು 1.48 ಕೆಜಿ ಬಿಳಿ ಬಣ್ಣದ ಎಂಡಿಎಂಎ ಡ್ರಗ್ಸ್ ಮತ್ತು 1.1 ಕೆಜಿ ಕಂದು ಬಣ್ಣದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಆಫ್ರಿಕನ್ ಪ್ರಜೆ ಬಂಧನ

Profile Prabhakara R May 17, 2025 2:27 PM

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ (Drugs Mafia) ಮಾಡುತ್ತಿದ್ದ ಆರೋಪದಲ್ಲಿ ನಗರದಲ್ಲಿ 40 ವರ್ಷದ ಆಫ್ರಿಕನ್ ಪ್ರಜೆಯ ಬಂಧನವಾಗಿದೆ. ಈ ಬಗ್ಗೆ ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದು, ಡೇನಿಯಲ್ ಅರಿಂಜೆ ಒಕ್ವೋಶಾ ಎಂಬಾತನನ್ನು ಬಂಧಿಸಲಾಗಿದ್ದು, ಆತನಿಂದ 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಅನ್ನು ಸಿಸಿಬಿ ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಆರೋಪಿಯು 2023ರ ಡಿಸೆಂಬರ್​​​ನಲ್ಲಿ ವ್ಯಾಪಾರ ವೀಸಾದ ಮೇಲೆ ಬೆಂಗಳೂರಿಗೆ ಆಗಮಿಸಿ, ಸೋಲದೇವನಹಳ್ಳಿಯಲ್ಲಿ ತನ್ನ ಸ್ನೇಹಿತನೊಂದಿಗೆ ಬಾಡಿಗೆ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಒಕ್ವೋಶಾ ಮನೆ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಡ್ರಗ್ಸ್ ಮಾರಾಟದಲ್ಲಿ ಶಾಮೀಲಾಗಿದ್ದಾನೆ ಎನ್ನಲಾದ ಆತನ ಸ್ನೇಹಿತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಇತರ ರಾಜ್ಯಗಳಲ್ಲಿರುವ ತಮ್ಮ ಸಹವರ್ತಿಗಳಿಂದ ಮತ್ತು ಬೆಂಗಳೂರಿನ ಸುತ್ತಮುತ್ತಲಿನ ಸ್ಥಳೀಯ ಕೆಲವು ವ್ಯಕ್ತಿಗಳಿಂದ ಮಾದಕ ವಸ್ತುಗಳನ್ನು ಪಡೆಯುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಅವರು ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ ವೃತ್ತಿಪರರನ್ನು ಗುರಿಯಾಗಿಸಿಕೊಂಡಿದ್ದರು ಎಂದು ತನಿಖೆ ವೇಳೆ ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತನಿಂದ ಪೊಲೀಸರು 1.48 ಕೆಜಿ ಬಿಳಿ ಬಣ್ಣದ ಎಂಡಿಎಂಎ ಡ್ರಗ್ಸ್ ಮತ್ತು 1.1 ಕೆಜಿ ಕಂದು ಬಣ್ಣದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 4 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Viral News: ಟಾಯ್ಲೆಟ್ ಕಮೋಡ್‌ ಸ್ಫೋಟ; ಯುವಕನ ಸೀತಿ ಗಂಭೀರ; ಏನಿದು ಸುದ್ದಿ...?