Mallikarjun Kharge: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮಿಲಿಂದ ಖರ್ಗೆಯವರು ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.


ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ (Mallikarjun Kharge) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮಿಲಿಂದ ಖರ್ಗೆಯವರು ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ ನಿಂದ ಎಂಬಿಎ ಪದವಿಯನ್ನು ಖರ್ಗೆ ಪುತ್ರ ಮಿಲಿಂದ್ ಖರ್ಗೆ ಪಡೆದಿದ್ದರು. ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಅವರು, ರಾಜಕೀಯದಿಂದ ದೂರವೇ ಉಳಿದಿದ್ದರು. ಅಲ್ಲದೇ ಸಾರ್ವಜನಿಕವಾಗಿಯೂ ಕಾಣಿಸಿಕೊಂಡಿಲ್ಲ.
ಕೆಲ ದಿನಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವಂತ ಮಿಲಿಂದ್ ಖರ್ಗೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯುನಲ್ಲಿ ಇರುವಂತ ಅವರ ಸ್ಥಿತಿ ಈಗ ಗಂಭೀರ ಎಂಬುದಾಗಿ ಹೇಳಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಪ್ರಿಯಾಂಕ್ ಖರ್ಗೆ ಈಗಾಗಲೇ ರಾಜಕೀಯದಲ್ಲಿದ್ದು, ಸಚಿವರಾಗಿದ್ದಾರೆ.
ಈ ಸುದ್ದಿಯನ್ನೂ ಓದಿ: Priyank Kharge: ಪ್ರಿಯಾಂಕ್ ಕಲಬುರ್ಗಿಯ ನಿಜಾಮ ಅಲ್ಲ, ಅವರ ಅನುಯಾಯಿಗಳು ರಜಾಕರೂ ಅಲ್ಲ; ಆರ್.ಅಶೋಕ್ ವಾಗ್ದಾಳಿ
ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ
ಕಲಬುರ್ಗಿಯಲ್ಲಿ ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಲಬುರ್ಗಿಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶ್ರೀದೇವಿ (22) ಎನ್ನುವ ಮಹಿಳೆ ಸಾವನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆಯ ತಾಲೂಕಿನ ನರಿಬೋಳ ಗ್ರಾಮದ ನಿವಾಸಿಯಾಗಿರುವ ಶ್ರೀದೇವಿ ಅವರು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದಾಳೆ ಎಂದು ಶ್ರೀದೇವಿ ಪೋಷಕರು ಆರೋಪಿಸಿದ್ದಾರೆ. ಶ್ರೀದೇವಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಕೆಲವೇ ಕ್ಷಣಗಳಲ್ಲಿ ರಕ್ತದೊತ್ತಡ ಕಡಿಮೆ ಆಗಿತ್ತು. ವೈದ್ಯರು ಬಂದು ತಪಾಸಣೆ ನಡೆಸಿದ್ದರು. ತಪಾಸಣೆಗೆ ಖಾಸಗಿ ಲ್ಯಾಬ್ ಗೆ ಜಿಮ್ಸ್ ವೈದ್ಯರು ಚೀಟಿ ಬರೆದು ಕೊಟ್ಟಿದ್ದರು. ಈ ವೇಳೆ ಶ್ರೀದೇವಿ ಸಂಬಂಧಿಕರಿಂದ 5600 ಪಡೆದ ಖಾಸಗಿ ಲ್ಯಾಬ್ ಸಿಬ್ಬಂದಿ, ಬಳಿಕ ವೈದ್ಯರು ಮತ್ತೆ 5600 ಪಡೆದಿದ್ದಾರೆ. ಫೋನ್ ಪೇ ಮೂಲಕ ವೈದ್ಯರು ಹಾಗೂ ಖಾಸಗಿ ಲ್ಯಾಬ್ ನವರು ಎರಡು ಬಾರಿ ಹಣ ಪಡೆದಿದ್ದಾರೆ ಕಲಬುರ್ಗಿಯಲ್ಲಿ ದೊಡ್ಡ ಆಸ್ಪತ್ರೆ ಇದ್ದರೂ ರಕ್ತ ತಪಾಸಣೆ ಯಂತ್ರವಿಲ್ಲ ಎಂಬ ಆರೋಪ ಕೇಳಿಬಂದಿದೆ.