ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fraud case: ಚಿನ್ನ ಖರೀದಿಸಿ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

Fraud case: ಐಶ್ವರ್ಯ ಗೌಡ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಮನೆ, ಬೆಂಗಳೂರಿನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಚಿನ್ನ ಖರೀದಿಸಿ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

Profile Prabhakara R Apr 24, 2025 9:49 PM

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರ ಹೆಸರು ಹೇಳಿ ಚಿನ್ನ ಖರೀದಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಐಶ್ವರ್ಯ ಗೌಡ ಅವರ ಬೆಂಗಳೂರು, ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಇ.ಡಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ಪರಿಶೀಲಿಸಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ ಐಶ್ವರ್ಯ ಗೌಡ ಅವರನ್ನು ಇಡಿ ವಶಕ್ಕೆ ಪಡೆದಿದೆ. ಐಶ್ವರ್ಯ ಗೌಡ ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ಬೆಂಗಳೂರಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಅವರ ಮನೆ ಹಾಗೂ ಐಶ್ವರ್ಯ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಮತ್ತು ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.

ಇಬ್ಬರು ಸಿಆರ್​​ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಹಲವು ದಾಖಲೆಗಳ ಶೋಧ ಮಾಡಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗಾಗಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.

ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜ್ಯುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಕೊಲೆ ಬೆದರಿಕೆ ಇಮೇಲ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM DK Shivakumar) ಅವರನ್ನು ಕೊಲೆ ಮಾಡುವುದಾಗಿ ಕಿಡಿಗೇಡಿಗಳ್ಯಾರೋ ಇ-ಮೇಲ್ ಮೂಲಕ ಸಂದೇಶ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಧಾ‌ ರಜಪೂತ್‌ ಹೆಸರಿನ ಇ-ಮೇಲ್‌ನಿಂದ ಈ ಬೆದರಿಕೆ ಸಂದೇಶ ಬಂದಿದೆ ಎಂಬುದು ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ" ಇ-ಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಇ-ಮೇಲ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಬೆದರಿಕೆ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ | ಜೀನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ದೂರು; ಆರೋಪ ನಿರಾಕರಿಸಿದ ದಿಲೀಪ್‌ ಕುಮಾರ್

'ರಾಮಪುರದ ಪ್ರಭಾಕರ್‌ಗೆ 11 ಕೋಟಿ ಸಾಲ ಕೊಟ್ಟಿದ್ದೇನೆ. ಆದರೆ, ಆತ ಈವರೆಗೂ ಸಾಲ ವಾಪಸ್‌ ಕೊಟ್ಟಿಲ್ಲ. ಆದಷ್ಟು ಬೇಗ ಪ್ರಭಾಕರ್‌ಗೆ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಅಡಗಿಸಿಟ್ಟಿದ್ದಾನೆ. ಪ್ರಭಾಕರ್‌ಗೆ ಇಬ್ಬರು ಮಕ್ಕಳು ಇದ್ದಾರೆ. ಇತ್ತೀಚೆಗೆ ಒಬ್ಬ ಮಗನನ್ನು ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ, ಪ್ರಭಾಕರ್‌ನನ್ನು ಕೊಲೆ ಮಾಡುತ್ತೇನೆ' ಎಂದು ಅದೇ ಇ-ಮೇಲ್‌ನಲ್ಲಿ ಉಲ್ಲೇಖಿಸಿದ್ದಾನೆ.