ಪಿಇಎಸ್ ವಿವಿಯಲ್ಲಿ ಮಹಿಳಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್; ದೇಶದ ಅಗ್ರ 16 ವಿವಿಗಳ ಕ್ರೀಡಾಪಟುಗಳು ಭಾಗಿ
PES University: ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯ ವತಿಯಿಂದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಹಮ್ಮಿಕೊಳ್ಳಲಾಗಿತ್ತು. ದೇಶದ ಅಗ್ರ 16 ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶ್ರೇಯಾಂಕಿತ ಕ್ರೀಡಾಪಟುಗಳು ಸೇರಿದಂತೆ 90ಕ್ಕೂ ಹೆಚ್ಚು ಮಹಿಳಾ ಆಟಗಾರರು ಭಾಗವಹಿಸಿದ್ದರು.
ಪಿಇಎಸ್ ವಿವಿಯಲ್ಲಿ ಮಹಿಳಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಗಣ್ಯರು ಚಾಲನೆ ನೀಡಿದರು. -
ಬೆಂಗಳೂರು, ಜ.12: ನಗರದ ಪಿಇಎಸ್ ವಿಶ್ವವಿದ್ಯಾಲಯ ವತಿಯಿಂದ (PES University) ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಹಮ್ಮಿಕೊಳ್ಳಲಾಗಿತ್ತು. ದೇಶದ ಅಗ್ರ 16 ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶ್ರೇಯಾಂಕಿತ ಕ್ರೀಡಾಪಟುಗಳು ಸೇರಿದಂತೆ 90ಕ್ಕೂ ಹೆಚ್ಚು ಮಹಿಳಾ ಆಟಗಾರರು ಭಾಗವಹಿಸಿದ್ದರು.
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ. ಜವಾಹರ್ ದೊರೆಸ್ವಾಮಿ ಅವರು ಉದ್ಘಾಟಿಸಿ, ಬಳಿಕ ಮಾತನಾಡಿದರು.
ಭಾರತದಲ್ಲಿ ಮಹಿಳಾ ಬ್ಯಾಡ್ಮಿಂಟನ್‌ಗೆ ನೀಡಿದ ಕೊಡುಗೆಗಾಗಿ ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಮತ್ತು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಭಟ್ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಿ, ಸನ್ಮಾನಿಸಲಾಯಿತು.
ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಜೆ. ಸೂರ್ಯ ಪ್ರಸಾದ್, ವಿಶೇಷ ಅಧಿಕಾರಿ ಪ್ರೊ. ಎಂ.ಎಸ್. ವಿನಯ್, ಎಐಯು ವೀಕ್ಷಕ ಡಾ. ಅಜಿತ್ ಮೋಹನ್ ಕೆ.ಆರ್. ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
Sankranti Shopping 2026: ಎಲ್ಲೆಡೆ ಸಂಕ್ರಾಂತಿಯ ಭರ್ಜರಿ ಶಾಪಿಂಗ್
ಈ ಕಾರ್ಯಕ್ರಮವು ವಿಶ್ವವಿದ್ಯಾಲಯ ಮಟ್ಟದಲ್ಲಿ ಮಹಿಳಾ ಬ್ಯಾಡ್ಮಿಂಟನ್ ಅನ್ನು ಉತ್ತೇಜಿಸುವಲ್ಲಿ ಪ್ರಮುಖ ಮೈಲುಗಲ್ಲನ್ನು ಗುರುತಿಸುತ್ತದೆ ಮತ್ತು ಕ್ರೀಡೆ ಮತ್ತು ಕ್ರೀಡಾಪಟು ಅಭಿವೃದ್ಧಿಯಲ್ಲಿ ಶ್ರೇಷ್ಠತೆಗೆ ಪಿಇಎಸ್ ವಿಶ್ವವಿದ್ಯಾಲಯದ ಬಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪಿಇಎಸ್ ವಿಶ್ವವಿದ್ಯಾಲಯ ತಿಳಿಸಿದೆ.