ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chalavadi Narayanaswamy: ಶಾಸಕರ ಖರೀದಿ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲು

ಕಾಂಗ್ರೆಸ್ ಪಕ್ಷದ ಯಂಗ್ ಬ್ರಿಗೇಡ್‌ ಸೇವಾದಳ ಅಧ್ಯಕ್ಷ ಜುನೈದ್ ಪಿ.ಕೆ. ನೇತೃತ್ವದಲ್ಲಿ ವಕೀಲರ ತಂಡ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳು ವಂತೆ ಆಗ್ರಹಿಸಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲು

-

Ashok Nayak
Ashok Nayak Nov 25, 2025 11:38 PM

ಬೆಂಗಳೂರು: ಕಾಂಗ್ರೆಸ್ ಶಾಸಕರ ಖರೀದಿ ನಡೆಯುತ್ತಿದೆ ಎಂದು ಆಧಾರ ರಹಿತ ಹೇಳಿಕೆ ನೀಡಿದ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಯಂಗ್ ಬ್ರಿಗೇಡ್‌ ಸೇವಾದಳ ಅಧ್ಯಕ್ಷ ಜುನೈದ್ ಪಿ.ಕೆ. ನೇತೃತ್ವದಲ್ಲಿ ವಕೀಲರ ತಂಡ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Bangalore News: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಒಂದು ಕಿ.ಮೀ ಉದ್ದ ಕನ್ನಡ ಧ್ವಜದ ಮೆರವಣಿಗೆ

ಸೋಮವಾರ(ನ.24) ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ಶಾಸಕರಿಗೆ ತಲಾ 50 ಕೋಟಿ ರೂ. ನಗದು, ಒಂದು ಫ್ಲಾಟ್ ಹಾಗೂ ಫಾರ್ಚೂನರ್ ಕಾರು ಕೊಡಲಾಗುತ್ತಿದೆ ಎಂದು ಹೇಳಿಕೆ ನೀಡಿರುವುದು ಖಂಡನೀಯ ಮಾತ್ರವಲ್ಲದೆ, ಆಧಾರರಹಿತವಾಗಿದೆ ಎಂದು ಜುನೈದ್ ಪಿ.ಕೆ. ಹೇಳಿದ್ದಾರೆ.

ಒಂದು ವೇಳೆ ಈ ರೀತಿಯ ಘಟನೆ ನಡೆದರೆ ಇದು ಭ್ರಷ್ಟಾಚಾರದ ಒಂದು ಭಾಗವಾಗಿದೆ. ಈ ಬಗ್ಗೆ ಪ್ರಚಾರ ಗಿಟ್ಟಿಸಲು ಕಾಂಗ್ರೆಸ್‌ ಶಾಸಕರ ಕುರಿತು ಇಲ್ಲಸಲ್ಲದ ಆರೋಪ ಮಾಡಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಅವರು ಒತ್ತಾಯಿಸಿದ್ದಾರೆ.