ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse Case: ಬೆಂಗಳೂರು ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ, ವಂಚನೆ ಆರೋಪ; ಮುಸ್ಲಿಂ ಮಹಿಳೆ ದೂರು

Bengaluru News: ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ದುರ್ಬಳಕೆ ಮಾಡಿದ್ದಾರೆ. ಅಲ್ಲದೇ ಖಾಸಗಿ ಫೋಟೊ, ವಿಡಿಯೊ ಇಟ್ಟುಕೊಂಡಿದ್ದು, ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಡಿ.ಜೆ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಮುಸ್ಲಿಂ ಮಹಿಳೆಯರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, ಅ.22: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ವಂಚನೆ (Physical Abuse Case) ಮಾಡಿದ್ದಾರೆ ಎಂದು ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ಸುನೀಲ್ ವಿರುದ್ಧ ಮುಸ್ಲಿಂ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ, ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು, ಖಾಸಗಿ ಫೋಟೊ, ವಿಡಿಯೋ ಇಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ನ್ಯಾಯಕ್ಕಾಗಿ ಪೊಲೀಸ್‌ ಮೇಲಧಿಕಾರಿಗಳ ಮೊರೆ ಹೋಗಿದ್ದಾರೆ.

ಡಿ.ಜೆ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ಅವರು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ದುರ್ಬಳಕೆ ಮಾಡಿದ್ದಾರೆ. ಮನೆ‌ ಕೊಡಿಸುವೆ, ಬ್ಯೂಟಿ ಪಾರ್ಲರ್ ತೆರೆಯಲು ನೆರವಾಗುವೆ ಎಂದು ಹೇಳಿ ತಮ್ಮ ಮನೆ ಹಾಗೂ ಹೋಟೆಲ್‌ಗೆ​ ಕರೆಸಿ ಅತ್ಯಾಚಾರವೆಸಗಿದ್ದಾರೆ. ಪ್ರತಿ ಬಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ. ಅಲ್ಲದೇ ಖಾಸಗಿ ಫೋಟೊ, ವಿಡಿಯೋ ಇಟ್ಟುಕೊಂಡಿದ್ದು, ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇನ್ನು ಇನ್ಸ್​ಪೆಕ್ಟರ್ ಸುನೀಲ್ ಹಾಗೂ ಸಂತ್ರಸ್ತೆಯ ನಡುವಿನ ವಾಟ್ಸಪ್ ಚಾಟಿಂಗ್ ಬಯಲಿಗೆ ಬಂದಿದ್ದು, ಇದರಲ್ಲಿ ಇಬ್ಬರೂ ಅನ್ಯೋನ್ಯವಾಗಿ ಚಿನ್ನು... ಮುದ್ದು... ಎಂದು ಮೆಸೇಜ್ ಮಾಡಿಕೊಂಡಿದ್ದಾರೆ. ಅಲ್ಲದೇ ವಿಡಿಯೋ ಹಾಗೂ ವಾಯ್ಸ್ ಕಾಲ್ ಮಾಡಿದ್ದಾರೆ. ಸದ್ಯ ಸಂತ್ರಸ್ತೆ ಮಹಿಳೆ, ಡಿಜಿ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Police Firing: ಗೋಪೂಜೆ ದಿನವೇ ಅಕ್ರಮ ಗೋ ಸಾಗಾಟಗಾರನ ಕಾಲಿಗೆ ಗುಂಡು

ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಮೂವರಿಂದ ಅತ್ಯಾಚಾರ

ಬೆಂಗಳೂರು: ಬೆಂಗಳೂರು (Bengaluru Crime News) ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (Physical Abuse) ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿ ಮೂವರು ಪುಂಡರು ಆಕೆಯ ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ (Harassment) ಎಸಗಿದ್ದಾರೆ. ಮಹಿಳೆ ವಾಸವಿದ್ದ ಬಾಡಿಗೆ ಮನೆಯಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು ಅಪರಾಧ ಎಸಗುವ ಮುನ್ನ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಯುವಕರು ಪ್ರಕರಣದ ನಂತರ ನಾಪತ್ತೆಯಾಗಿದ್ದಾರೆ. ಅವರನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆಗೂ ಹಾಗೂ ಈ ಯುವಕರಿಗೂ ಮೊದಲೇ ಪರಿಚಯವಿತ್ತೇ ಎನ್ನುವುದಿನ್ನೂ ದೃಢಪಟ್ಟಿಲ್ಲ.ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.