Anganwadi Workers Protest: 3ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಹೋರಾಟ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ 12 ಸಾವಿರ ರೂ. ನೀಡುವಂತೆ ಅಗ್ರಹಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರು.

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಹೋರಾಟ ಮುಂದುವರಿದಿದೆ (Anganwadi Workers Protest) ಎಂದು ಪ್ರತಿಭನಾನಿರತರು ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸ್ವತಂತ್ರ ಅಂಗನವಾಡಿ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೇಡಿಕೆ ಏನು?
ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ 12 ಸಾವಿರ ರೂ. ನೀಡುವಂತೆ ಅಗ್ರಹಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವೆನ್ನು ಭೇಟಿಯಾಗಿ ಬೇಡಿಕೆ ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಮನವಿ ಸಲ್ಲಿಸಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರಿಂದ ಸೂಕ್ತ ಭರವಸೆ ಸಿಗದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಲಾಗಿದೆ. ಬೇಡಿಕೆ ಈಡೇರುವರೆಗೂ ಇಲ್ಲಿಂದ ಹೋಗೋದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.
ಗೌರವಧನ ಹೆಚ್ಚಳದ ಭರವಸೆ
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಇತ್ತೀಚೆಗೆ ಭರವಸೆ ನೀಡಿದ್ದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿ ಈ ಬಗ್ಗೆ ತಿಳಿಸಿದ್ದರು.
ಗೌರವಧನ ಹೆಚ್ಚಳ, ಮುಂಭಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿ ಈ ಭರವಸೆ ನೀಡಿದ್ದರು.
ಈ ಸುದ್ದಿಯನ್ನೂ ಓದಿ: Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಲಕ್ಷ್ಮೀ ಹೆಬ್ಬಾಳಕರ್ ಭರವಸೆ
ನಮ್ಮ ಅಂಗನವಾಡಿ ಮಾದರಿ
ʼʼನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿ ಎನಿಸಿಕೊಂಡಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದುʼʼ ಎಂದು ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದರು.