MLA Munirathna: ಮಹಿಳೆಗೆ ಇಂಜೆಕ್ಷನ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ; ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್
MLA Munirathna: ಶಾಸಕರ ಕಚೇರಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಪರಿಚಿತ ವ್ಯಕ್ತಿಯಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿಸಿದ್ದರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಕೆಲವರು ನನ್ನ ಕೇಸ್ ಇತ್ಯರ್ಥ ಮಾಡಿಕೊಡುವುದಾಗಿ ಆಮಿಷವೊಡ್ಡಿ ನನ್ನನ್ನು ಕಚೇರಿಗೆ ಕರೆಸಿ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.


ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಸ್ ದಾಖಲಾಗಿದೆ. ತನ್ನ ಮೇಲೆ ಸಾಮೈಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಶಾಸಕ ಮುನಿರತ್ನ ಮತ್ತು ಬೆಂಬಲಿಗರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಾಸಕ ಮುನಿರತ್ನ, ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲ್ ಹಾಗೂ ಒಬ್ಬ ಅಪರಿಚಿತನ ವಿರುದ್ಧ ಕೇಸ್ ದಾಖಲಾಗಿದೆ.
2013ರಲ್ಲಿ ಜೆಪಿ ಪಾರ್ಕ್‌ನ ಶಾಸಕರ ಕಚೇರಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಪರಿಚಿತ ವ್ಯಕ್ತಿಯಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿಸಿದ್ದರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಅತ್ಯಾಚಾರಕ್ಕೂ ಮುನ್ನ ನೀಡಿದ ಇಂಜೆಕ್ಷನ್ನಿಂದ ಈಗ ನನಗೆ ಇಡಿಆರ್ ಎಂಬ ಕಾಯಿಲೆ ಬಂದಿದೆ. ಇದರಿಂದ ಮನನೊಂದು ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 376D, 270, 323, 354, 504, 506, 509, 34 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದೂರಿನಲ್ಲಿ ಏನಿದೆ?
'ಈ ಹಿಂದೆ ಬಿಜೆಪಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದೆ. ನನ್ನ ಗಂಡ ಬಿಟ್ಟು ಹೋದ ಬಳಿಕ 2ನೇ ಮದುವೆ ಆಗಿ ಜೀವನ ನಡೆಸುತ್ತಿದ್ದೆ. ವೇಶ್ಯಾವಾಟಿಕೆ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳಿಸಿದ್ದರು. ಬಳಿಕ ಜಾಮೀನು ಪಡೆದು ಹೊರಗೆ ಬಂದಿದ್ದೆ. ಕೆಲವರು ನನ್ನ ಕೇಸ್ ಇತ್ಯರ್ಥ ಮಾಡಿಕೊಡುವುದಾಗಿ ಆಮಿಷವೊಡ್ಡಿ ನನ್ನನ್ನು ಕಚೇರಿಗೆ ಕರೆಸಿ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ | Namma Metro: ನಮ್ಮ ಮೆಟ್ರೋದಲ್ಲಿ ಮಹಿಳೆಯರ ಗುಪ್ತ ಚಿತ್ರೀಕರಣ, ಇನ್‌ಸ್ಟಗ್ರಾಂನಲ್ಲಿ ಅಪ್‌ಲೋಡ್!
ಗೆಳತಿ ಜೊತೆ ಸಲಿಗೆಯ ಅನುಮಾನ, ವ್ಯಕ್ತಿಯ ಪೆಟ್ರೋಲ್ ಸುರಿದು ಸಜೀವ ದಹನ
ಬೆಂಗಳೂರು: ತನ್ನ ಗೆಳತಿಯೊಂದಿಗೆ ಅಕ್ರಮ ಸಂಬಂಧ (illicit relationship) ಹೊಂದಿದ್ದಾನೆಂದು ಅನುಮಾನಗೊಂಡು ವ್ಯಕ್ತಿಯೊಬ್ಬನನ್ನು ಪೆಟ್ರೋಲ್ ಸುರಿದು ಬೆಂಕಿ ಕೊಟ್ಟು ಸಜೀವವಾಗಿ ದಹಿಸಿರುವ (burnt alive) ದಾರುಣ ಘಟನೆಯೊಂದು ಕಡುಬೀಸನಹಳ್ಳಿಯ ಕರಿಯಮ್ಮನ ಅಗ್ರಹಾರದಲ್ಲಿ ಶುಕ್ರವಾರ (Murder case) ನಡೆದಿದೆ. ಮೃತ ವ್ಯಕ್ತಿಯನ್ನು ಇಜುಲ್ ಹಕ್ (25) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಡೆಲಿವರಿ ಏಜೆಂಟ್ ಆಗಿದ್ದ ಮುನಾವರ್ ಅಲಿ (22) ಎಂಬಾತನನ್ನು ಪೊಲೀಸರು ಬಂದನಕ್ಕೊಳಪಡಿಸಿದ್ದಾರೆ.
ಮೃತ ಇಜುಲ್ ಹಕ್ ಹಾಗೂ ಆರೋಪಿ ಅಲಿ ಇಬ್ಬರೂ ಅಸ್ಸಾಂ ಮೂಲದವರಾಗಿದ್ದಾರೆ. ಮೃತ ವ್ಯಕ್ತಿ ವಿವಾಹಿತನಾಗಿದ್ದು, 6 ತಿಂಗಳ ಹೆಣ್ಣು ಮಗುವಿದೆ. ಪತ್ನಿ ಹಾಗೂ ಮಗು ಅಸ್ಸಾಂನಲ್ಲೇ ವಾಸವಿದ್ದು, ಒಂದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ. ಸಲಾವುದ್ದೀನ್ ಎಂಬವರ ಶೆಡ್‌ನಲ್ಲಿ ವಾಸವಿದ್ದ ಎಂದು ತಿಳಿದುಬಂದಿದೆ.
ಆರೋಪಿ ಅಲಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯೊಂದಿಗೆ ಹಕ್ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಿಸಿದ್ದಾನೆ. ಇದರಂತೆ ಕಳೆದ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ಹಕ್ ಅವರ ಇಬ್ಬರು ಸ್ನೇಹಿತರಾದ ಶಹನೂರ್ ರೆಹಮಾನ್ ಮತ್ತು ಫರೀದುಲ್ ಇಸ್ಲಾಂ ಬೆಂಬಲಕ್ಕೆ ಬಂದಿದ್ದು, ಈ ವೇಳೆ ಆರೋಪಿ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿ, ಹೋಗಿದ್ದಾನೆ.
ಈ ನಡುವೆ ಶುಕ್ರವಾರ ಬೆಳಗಿನ ಜಾವ 3.30 ರಿಂದ 4.30 ರ ಸುಮಾರಿಗೆ ಶೆಡ್ ಬಳಿ ಬಂದಿರುವ ಆರೋಪಿ, ಗಾಢನಿದ್ರೆಗೆ ಜಾರಿದ್ದ ಇಜುಲ್ ಹಕ್, ಶಹನೂರ್ ರೆಹಮಾನ್ ಮತ್ತು ಫರೀದುಲ್ ಇಸ್ಲಾಂ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಘಟನೆ ವೇಳೆ ಹಕ್ ಅವರ ಸೋದರ ಮಾವ ರಶೀದುಲ್ ಹಕ್ ಶೆಡ್‌ನಿಂದ ದೂರದಲ್ಲಿ ಮಲಗಿದ್ದು, ಮೂವರ ಕೂಗಾಟ ಕೇಳಿ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಇಜುಲ್ ಹಕ್ ಸಾವನ್ನಪ್ಪಿದ್ದು, ಮತ್ತಿಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟಗಾಯಗಳ ವಾರ್ಡ್‌ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: Crime News: ಮಹಿಳೆಯ ಪ್ರೇಮಿಯಿಂದಲೇ ಆಕೆಯ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕೊಲೆ
ಗಾಯಗೊಂಡಿರುವ ಇಬ್ಬರ ಪೈಕಿ ಶಹನೂರ್ ಆನ್‌ಲೈನ್ ಡೆಲಿವರಿ ಬಾಯ್ ಆಗಿದ್ದು, ನಾಲ್ಕು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ ಎಂದು ತಿಳಿದುಬಂದಿದೆ. ಇನ್ನು ಫರಿದುಲ್ ಕಳೆದ ಒಂದು ವರ್ಷದಿಂದ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ. ಘಟನೆ ಸಂಬಂಧ ಮಾರತಹಳ್ಳಿ ಪೊಲೀಸರು ಆರೋಪಿ ವಿರುದ್ಧ ಕೊಲೆ (ಬಿಎನ್‌ಎಸ್ 103) ಮತ್ತು ಕೊಲೆಯತ್ನ (ಬಿಎನ್‌ಎಸ್ 109) ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ಮುಂದುವರೆದಿದೆ.