MLA Munirathna: ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್
ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ಗಂಭೀರ ಆರೋಪದ ದೂರು ನೀಡಲಾಗಿದೆ.
ಬೆಂಗಳೂರು: ರಾಜರಾಜೇಶ್ವರಿ ನಗರ (Rajarajeshwari Nagar) ಶಾಸಕ ಮುನಿರತ್ನ (MLA Munirathna) ಅವರ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಶಾಸಕ ಮುನಿರತ್ನ ಮೇಲೆ ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ.
ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ (Physical Abuse Case) ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ಮುನಿರತ್ನ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಜೊತೆಗೆ ಮುನಿರತ್ನ ರಾಜಕೀಯ ಜೀವನಕ್ಕೆ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣ (Fake Voter ID Card Case) ಮುಳ್ಳಾಗಿದ್ದು, ಇದೀಗ ಮತ್ತೆ ಮುನ್ನಲೆಗೆ ಬಂದಿದೆ.
ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ಗಂಭೀರ ಆರೋಪದ ದೂರು ನೀಡಲಾಗಿದೆ.
ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ದರೋಡೆ
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಜನನಿಬಿಡ ಪ್ರದೇಶದಲ್ಲೇ ಮಹಿಳೆಯೊಬ್ಬರ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಎರಗಿದ್ದಲ್ಲದೆ, ಆಕೆಯನ್ನು ದರೋಡೆ ಕೂಡ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 11.30ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: Munirathna: ಶಾಸಕ ಮುನಿರತ್ನರಿಂದ ಅತ್ಯಾಚಾರ ಯತ್ನ, ಏಡ್ಸ್ ಹರಡಲು ಯತ್ನ: ಎಸ್‌ಐಟಿ ಚಾರ್ಜ್‌ಶೀಟ್