ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Namma Metro: ಮೆಟ್ರೋ ಹಳಿಗೆ ಹಾರಿದ ಮತ್ತೊಬ್ಬ ಪ್ರಯಾಣಿಕ; ರೈಲಿನಡಿ ಸಿಲುಕಿ ಒದ್ದಾಟ

Self Harming: ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಆ.11ರಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಟ್ರೈನ್​ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಟ್ರ್ಯಾಕಿಗೆ ಜಿಗಿದಿದ್ದ. ಇದೀಗ ಮತ್ತೊಬ್ಬ ಪ್ರಯಾಣಿಕ, ಇದೇ ನಿಲ್ದಾಣದಲ್ಲಿ ಆತ್ಮಹತ್ಯೆ ಯತ್ನಿಸಿರುವುದು ಕಂಡುಬಂದಿದೆ.

ಬೆಂಗಳೂರು: ರಾಜಧಾನಿಯ ಮೆಟ್ರೋ ಸ್ಟೇಷನ್‌ಗಳಲ್ಲಿ (Namma Metro) ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇತ್ತೀಚೆಗೆ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದ ಬೆನ್ನಲ್ಲೇ ಇದೀಗ ಅಂತಹುದೇ ಮತ್ತೊಂದು ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲೇ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹಸಿರು ಮಾರ್ಗದಲ್ಲಿ ಮಾದಾವರದಿಂದ ರೇಷ್ಮೆ ಸಂಸ್ಥೆ ಕಡೆಗೆ ಸಾಗುತ್ತಿದ್ದ ಹಳಿಗೆ ಪ್ರಯಾಣಿಕ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ, ಪ್ರಯಾಣಿಕನನ್ನು ರಕ್ಷಣೆ ಮಾಡಿದ್ದಾರೆ. ರೈಲಿನಡಿ ಸಿಲುಕಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಹಸಿರು ಮಾರ್ಗದಲ್ಲಿ ಸುಮಾರು 20 ನಿಮಿಷ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.

ಆ.11ರಂದು ಕೂಡ ಇದೇ ರೀತಿ ಮೆಜೆಸ್ಟಿಕ್ ನಮ್ಮ ಮೆಟ್ರೋ (Namma Metro) ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಟ್ರೈನ್​ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಟ್ರ್ಯಾಕಿಗೆ ಜಿಗಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮೆಟ್ರೋದಲ್ಲಿ ಬಿಗಿ ಭದ್ರತೆ ಇದ್ದರೂ ಇಂತಹ ಘಟನೆಗಳು ಸಂಭವಿಸುತ್ತಲೇ ಇದೆ. ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆಗಳು ಈ ಹಿಂದೆಯೂ ದಾಖಲಾಗಿದೆ. ಹೀಗಾಗಿ ಬಿಎಂಆರ್​ಸಿಎಲ್​ ಮತ್ತಷ್ಟು ಭದ್ರತೆ ಹೆಚ್ಚಿಸಿದೆ.

ಈ ಸುದ್ದಿಯನ್ನೂ ಓದಿ | Self Harming: ಗೆಳತಿಯನ್ನು ಲಾಡ್ಜ್‌ಗೆ ಕರೆದೊಯ್ದ ಪ್ರಿಯಕರ: ನೊಂದ ವಿವಾಹಿತೆ, ಎರಡು ಮಕ್ಕಳ ತಾಯಿ ಆತ್ಮಹತ್ಯೆ

ಇನ್ನು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಮೆಟ್ರೊ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಸ್ಕ್ರೀನ್‌ ಡೋರ್‌ಗಳನ್ನು ಅಳವಡಿಸಬೇಕು ಎಂಬ ಒತ್ತಾಯ ಈ ಹಿಂದಿನಿಂದಲೂ ಕೇಳಿಬರುತ್ತಿದೆ. ಇದಕ್ಕಾಗಿ ಬಿಎಂಆರ್‌ಸಿಎಲ್‌ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸುತ್ತಿದ್ದಾರೆ.

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಪುತ್ರಿಯನ್ನು ಮಚ್ಚಿನಿಂದ ಕೊಲೆ (Murder case) ಮಾಡಿ ತಾಯಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Self harming) ಮಾಡಿಕೊಂಡಿದ್ದಳೆ. ಘಟನೆ ಶಿವಮೊಗ್ಗದಲ್ಲಿ (Shivamogga news) ನಡೆದಿದೆ. ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದಾಗ ಈ ಮಹಿಳೆಯ ಪತಿ ಡ್ಯೂಟಿಗೆ ತೆರಳಿದ್ದರು.

36 ವರ್ಷದ ಶ್ರುತಿ ಕೃತ್ಯ ಎಸಗಿದಾಕೆ. ಪುತ್ರಿ ಪೂರ್ವಿಕಳನ್ನು (11) ಮಚ್ಚಿನಿಂದ ಕೊಚ್ಚಿ ಕೊಂದ ಬಳಿಕ ಶ್ರುತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಜಿಲ್ಲಾ ಆಸ್ಪತ್ರೆ ಕ್ವಾರ್ಟರ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಪತಿ ರಾಮಣ್ಣ ಕೆಲಸಕ್ಕೆ ತೆರಳಿದ್ದಾಗ ಪುತ್ರಿಯನ್ನು ಕೊಂದು ಶ್ರುತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡ್ಯೂಟಿ ಮುಗಿಸಿ ರಾಮಣ್ಣ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಶ್ರುತಿ ಮಾನಸಿಕ ಅಸ್ವಸ್ಥಳಾಗಿ ಕೃತ್ಯ ಎಸಗಿದ್ದಾಳೆ ಎಂದು ತರ್ಕಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.