ರಾಜ್ಯದ ಜನರಿಗೆ ಮತ್ತೆ ಶಾಕ್; KSRTC-BMTC ಟಿಕೆಟ್ ದರ ಏರಿಕೆಗೆ ಸರ್ಕಾರದ ಚಿಂತನೆ
ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟು ಹೋಗಿರುವ ಜನತೆಗೆ ಮತ್ತೆ ಶಾಕ್ ಎದುರಾಗಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ ಇಂದು ಎರಡನೇ ಬಾರಿಗೆ ಸಚಿವ ಸಂಪುಟ ಸಭೆ ಮಾಡಿದರು. ಡೀಸೆಲ್ ದರ ಏರಿಕೆ ಹಿನ್ನೆಲೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ KSRTC, BMTC ಸೇರಿದಂತೆ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳು ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾಪಿಸಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟು ಹೋಗಿರುವ ಜನತೆಗೆ ಮತ್ತೆ ಶಾಕ್ ಎದುರಾಗಿದೆ. ಡಿಕೆ ಶಿವಕುಮಾರ್ (CM DK Shivakumar) ಮುಖ್ಯಮಂತ್ರಿ ಆದ ಬಳಿಕ ಇಂದು ಎರಡನೇ ಬಾರಿಗೆ ಸಚಿವ ಸಂಪುಟ ಸಭೆ (Karnataka Government) ಮಾಡಿದರು. , ಡೀಸೆಲ್ ದರ ಏರಿಕೆ ಹಿನ್ನೆಲೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ KSRTC, BMTC ಸೇರಿದಂತೆ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳು ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾಪಿಸಿದೆ. ಅಲ್ಲದೇ ಇಂದು ನಡೆದ ಕ್ಯಾಬಿನೇಟ್ ಸಭೆಯಲ್ಲಿ ಸಹ ಈ ಬಗ್ಗೆ ಸರ್ಕಾರ ಎಷ್ಟು ಏರಿಕೆ ಮಾಡಬೇಕು ಎನ್ನುವ ಬಗ್ಗೆ ಚಿಂತನೆ ನಡೆಸಿದೆ.
ಚಿವ ಸಂಪುಟದ ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ʼಡೀಸೆಲ್ ಬೆಲೆ ಹೆಚ್ಚಳವಾಗಿದೆ. ಡಿಪೋದ ಬೆಲೆಗೂ, ಖಾಸಗೀಯಾಗಿ ಸಿಗುವ ಡಿಸೆಲ್ ಗೂ ಅಜಗಾಂತರ ವ್ಯತ್ಯಾಸವಿದೆ. ಡೀಸೆಲ್ ದರ ನೋಡಿದ್ರೆ ಗಾಬರಿಯಾಗುತ್ತೆದೆ. ಹೀಗಾಗಿ ಬೆಲೆ ಏರಿಕೆ ಬಗ್ಗೆ ವರದಿ ಕೊಡುವಂತೆ ಹೇಳಿದ್ದೇನೆ. ವರದಿ ನೋಡಿಕೊಂಡು ಜನರಿಗೂ ಹೊರೆಯಾಗದಂತೆ ದರ ಏರಿಕೆ ನೋಡುತ್ತೇವೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿಗಳೇ ಸಾರ್ವಜನಿಕ ಸಾರಿಗೆಗಳನ್ನು ಬಳಸಿ ಇಂಧನ ಉಳಿಸಿ ಎಂದು ಮಾರ್ಗದರ್ಶನ ನೀಡಿದ್ದಾರೆ. ಇದರ ಬಗ್ಗೆ ಜನರ ಹಿತ ದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನ ಮಾಡಲಾಗುವುದು. ಖಾಸಗಿಯವರು ಡಿಪೋಗಳ ಬದಲಾಗಿ ಸಾರ್ವಜನಿಕರಿಗೆ ಇರುವ ಬಂಕುಗಳಲ್ಲಿ ಡಿಸೇಲ್ ಖರೀದಿ ಮಾಡುತ್ತಿದ್ದಾರೆ. ಇದರ ಬಗ್ಗೆ ವರದಿ ಕೇಳಿದ್ದೇನೆ ಎಂದರು. 4235 ಕೋಟಿ ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ 400 ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 220 ಸೇರಿ ಒಟ್ಟು 620 ಹೊಸ ಬಸ್ಸುಗಳ ಖರೀದಿಗೆ ಅನುಮತಿ ದೊರಕಿದೆ. ಸಂಪುಟ ಸಭೆ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅದೇ ರೀತಿ ಎಲ್ಲ ಸಾರಿಗೆ ನಿಗಮಗಳ ಅಡಿ 10 ನಗರಗಳ 11 ಕಡೆ ಎಲೆಕ್ನಿಕ್ ಬಸ್ಗಳ ಡಿಪೋಗಳನ್ನು ತೆರೆಯಲು 112 ಕೋಟಿ ವೆಚ್ಚ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ‘ಪ್ರಿಯದರ್ಶಿನಿ’ ಯೋಜನೆಗೆ ಅದ್ಧೂರಿ ಚಾಲನೆ
ಬೆಂಗಳೂರು ನಗರದ ವೈದ್ಯಕೀಯ ಕಾಲೇಜಿನಲ್ಲಿ ಉಪಕರಣ ಖರೀದಿಗೆ 60 ಕೋಟಿ ರೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬಳ್ಳಾರಿಯ ಸಂಡೂರಿನಲ್ಲಿ 30 ಕೋಟಿ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. 235 ಕೋಟಿ ರೂ ವೆಚ್ಚದಲ್ಲಿ 620 ಬಸ್ ಖರೀದಿಗೆ ಆಡಳಿತಾತ್ಮಕ ಅನುಮೋದನೆಯನ್ನು ಇಂದಿನ ಕ್ಯಾಬಿನೇಟ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಇದರ ಜೊತೆಗೆ ರೈತರಿಗೆ ಹಳ್ಳಿಗಳಲ್ಲಿ ರೇಷ್ಮೆ ಮನೆಗಳಿಗೆ ವಿದ್ಯುತ್ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ. ಹೈನುಗಾರಿಕೆ ಮಾಡುವವರಿಗೆ ಹಸುಗಳನ್ನು ಕಟ್ಟುವ ಕೊಟ್ಟಿಗೆಗಳಿಗೂ ವಿದ್ಯುತ್ ವಿನಾಯಿತಿ ಘೋಷಿಸಲಾಗಿದೆ ಎಂದು ಸಿಎಂ ತಿಳಿಸಿದರು.