ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದ ಜನತೆಗೆ ಮತ್ತೆ ಶಾಕ್‌; ಬಸ್ ಟಿಕೆಟ್ ದರ ಏರಿಕೆ ಸರ್ಕಾರದಿಂದ ಚಿಂತನೆ

ಬೆಲೆ ಏರಿಕೆ ಇಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮತ್ತೆ ಶಾಕ್‌ ಎದುರಾಗಿದೆ. ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆ ಮಾಡುವ ಕುರಿತು ಚರ್ಚೆ ತೀವ್ರಗೊಂಡಿದೆ. ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿದೆ.

ಬಸ್ ಟಿಕೆಟ್ ದರ ಏರಿಕೆ ಸರ್ಕಾರದಿಂದ ಚಿಂತನೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 18, 2026 9:51 AM

ಬೆಂಗಳೂರು: ಬೆಲೆ ಏರಿಕೆ ಇಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮತ್ತೆ ಶಾಕ್‌ ಎದುರಾಗಿದೆ. ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ ಸೇರಿದಂತೆ ರಾಜ್ಯದ (Bus Ticket Price Hike) ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆ ಮಾಡುವ ಕುರಿತು ಚರ್ಚೆ ತೀವ್ರಗೊಂಡಿದೆ. ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿದ್ದು, ಸಮಿತಿ ನೀಡುವ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ದರ ಏರಿಕೆ ಕುರಿತು ಮಾತನಾಡಿರುವ ಸಾರಿಗೆ ಸಚಿವ ಭೈರತಿ ಸುರೇಶ್, ಈಗಾಗಲೇ ಆರು ಬಾರಿ ಡೀಸೆಲ್ ದರ ಹೆಚ್ಚಳವಾಗಿದೆ. ಹೀಗಾಗಿ ಟಿಕೆಟ್ ದರ ಪರಿಷ್ಕರಣೆ ಅನಿವಾರ್ಯವಾಗಬಹುದು ಎಂದು ಹೇಳಿದ್ದಾರೆ. ಡೀಸೆಲ್ ದರ ಏರಿಕೆಯಿಂದ ವಾರಕ್ಕೆ 7ರಿಂದ 8 ಕೋಟಿ ರೂ. ನಷ್ಟವಾಗುತ್ತಿದೆ ಎಂದು ಅವರು ತಿಳಿಸಿದ್ದು, ಈ ಮೂಲಕ ಬೆಲೆ ಏರಿಕೆಯ ಸೂಚನೆಯನ್ನು ನೀಡಿದ್ದಾರೆ. ಟಿಕೆಟ್ ದರ ನಿಗದಿ ಮಾಡುವ ಸಂಬಂಧ ರಾಜ್ಯ ಸರ್ಕಾರ ಸಮಿತಿ ರಚಿಸಿದ್ದು, ನಿವೃತ್ತ ಐಎಎಸ್ ಅಧಿಕಾರಿ ಅತುಲ್ ಕುಮಾರ್ ತಿವಾರಿ ನೇತೃತ್ವದ ಸಮಿತಿ ಈಗಾಗಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ನಿಗಮಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ದರ ಏರಿಕೆ ಕುರಿತು ಶಿಫಾರಸು ಮಾಡುವಂತೆ ಸಮಿತಿಗೆ ಸೂಚಿಸಲಾಗಿದೆ.

ಟಿಕೆಟ್ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ತಮ್ಮದೇ ಆದ ಪ್ರಸ್ತಾವನೆಗಳನ್ನು ಸರ್ಕಾರದ ಮುಂದಿಟ್ಟಿವೆ ಎನ್ನಲಾಗಿದೆ. ಕೆಎಸ್‌ಆರ್‌ಟಿಸಿ ಸುಮಾರು ಶೇ.33ರಷ್ಟು ದರ ಹೆಚ್ಚಳವನ್ನು ಕೋರಿದ್ದರೆ, ಬಿಎಂಟಿಸಿ ಶೇ.44ರಷ್ಟು ಏರಿಕೆಗೆ ಮನವಿ ಮಾಡಿದೆ ಎಂದು ತಿಳಿದುಬಂದಿದೆ. ಆದರೆ ನಿಗಮಗಳ ಬೇಡಿಕೆಯಂತೆ ನೇರವಾಗಿ ದರ ಹೆಚ್ಚಿಸುವ ಬದಲು, ಪ್ರಯಾಣಿಕರ ಮೇಲಿನ ಆರ್ಥಿಕ ಹೊರೆಯನ್ನೂ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

Private Bus fare hike: ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್;‌ ಖಾಸಗಿ ಬಸ್‌ಗಳ ಟಿಕೆಟ್‌ ದರ ಭಾರಿ ಹೆಚ್ಚಳ!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಇಂಧನ ದರದಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಇದರ ನೇರ ಪರಿಣಾಮ ಸರ್ಕಾರಿ ಸಾರಿಗೆ ನಿಗಮಗಳ ಮೇಲೆ ಬೀಳುತ್ತಿದೆ. ಟಿಕೆಟ್ ದರ ಏರಿಕೆ ಕುರಿತು ಪ್ರಯಾಣಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಕಳೆದ ವರ್ಷವಷ್ಟೇ ಟಿಕೆಟ್ ದರ ಏರಿಕೆ ಮಾಡಲಾಗಿದ್ದು, ಮತ್ತೆ ದರ ಹೆಚ್ಚಿಸುವುದು ಸರಿಯಲ್ಲ ಎಂದು ಪ್ರಯಾಣಿಕರು ಆಕ್ಷೇಪಿಸಿದ್ದಾರೆ.