ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಳೆ ಕೊರತೆ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್‌; ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ಕಾವೇರಿ ನೀರು ಹರಿಸಲು ಆದೇಶ

ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಶಾಕ್‌ ಎದುರಾಗಿದೆ. ತಮಿಳುನಾಡಿಗ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸಕ್ ನೀರು ಹರಿಸುವಂತ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಕಾವೇರಿ ನದಿ (Cauvery River) ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಶಾಕ್‌ ಎದುರಾಗಿದೆ. ತಮಿಳುನಾಡಿಗೆ (Tamil Nadu) ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸಕ್ ನೀರು ಹರಿಸುವಂತ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ. ಸಮಿತಿಯ ಈ ಹೊಸ ನಿರ್ದೇಶನದಿಂದಾಗಿ ರಾಜ್ಯವು ಮುಂದಿನ 15 ದಿನಗಳಲ್ಲಿ ತಮಿಳುನಾಡಿಗೆ ಒಟ್ಟು 4.56 ಟಿಎಂಸಿ ನೀರನ್ನು ಹರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿನ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣ ಹಾಗೂ ಒಳಹರಿವನ್ನು ಪರಾಮರ್ಶಿಸಲು ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ತಮಿಳುನಾಡಿಗೆ ಹರಿದು ಹೋಗಲಿದೆ. ರಾಜ್ಯದ ಜಲಾಶಯಗಳಲ್ಲಿ ಈಗಾಗಲೇ ಕುಡಿಯುವ ನೀರು ಮತ್ತು ಕೃಷಿಗೆ ನೀರಿನ ಅಭಾವವಿರುವಾಗ, ಈ ಪ್ರಮಾಣದ ನೀರನ್ನು ಹೊರಗೆ ಬಿಡುವುದು ಜಲಾಶಯಗಳ ಸಂಗ್ರಹದ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಈ ಶಫಾರಸನ್ನು ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಮ್‌) ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹಾಗೂ ಕಾನೂನು ತಜ್ಞರು ಮತ್ತು ಜಲಸಂಪನ್ಮೂಲ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸರ್ಕಾರ ತುರ್ತು ಸಮಾಲೋಚನೆ ನಡೆಸಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

Cauvery Water Dispute: ಕರ್ನಾಟಕಕ್ಕೆ ತಾತ್ಕಾಲಿಕ ರಿಲೀಫ್; ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಯಥಾಸ್ಥಿತಿಗೆ CWMA ಸೂಚನೆ

ಸಿಡಬ್ಲ್ಯೂಆರ್‌ಸಿ ಶಿಫಾರಸ್ಸು ಅನ್ನು 'ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಪ್ರಶ್ನೆ ಮಾಡಬಹುದು. ಆದಾಗ್ಯೂ ನಿರ್ವಹಣಾ ಪ್ರಾಧಿಕಾರದ ನಿರ್ಧಾರ ಅಂತಿಮವಾಗಿರುತ್ತದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೂಡ ನೀರು ಹರಿಸಿ ಎಂದರೆ ಕರ್ನಾಟಕ ನೀರು ಬಿಡಲೇಬೇಕಿದೆ ಎಂದು ವರದಿಯಾಗಿದೆ.

Vishakha Bhat Heggar

View all posts by this author