ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ (sting operation case) ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಉಚ್ಛಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ (Kripa Alva) ಸೇರಿ ಮೂವರಿಗೆ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸೋಮವಾರ ಅರ್ಜಿ ವಿಚಾರಣೆ 66ನೇ ಸೇಷನ್ಸ್ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕೃಪಾ ಆಳ್ವಾ, ವಿನೋದ್ ಕುಮಾರ್, ಪ್ರಶಾಂತ್ ಕುಮಾರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ.
ಅಲ್ಲದೇ, ತನಿಖಾಧಿಕಾರಿಗಳು ನಿಖೆಗೆ ಕರೆದಾಗ ಅರ್ಜಿದಾರರು ಸಹಕರಿಸಬೇಕು. ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಅಥವಾ ಪ್ರಭಾವ ಬೀರುವಂತಿಲ್ಲ ಎಂದು ಷರತ್ತು ವಿಧಿಸಿದೆ.
Rajyotsava Award 2026: ಎಐ, ತಂತ್ರಜ್ಞಾನದ ಭಾಷೆಯಾಗಿ ಕನ್ನಡ ಬಳಕೆಯಾಗಬೇಕು: ಸಿಎಂ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಕೃಪಾ ಆಳ್ವಾ
ಸ್ಟಿಂಗ್ ಆಪರೇಷನ್ ಸಂಚಿನಲ್ಲಿ ಭಾಗಿಯಾಗಿರುವ ಗಂಭೀರ ಆರೋಪ ಕೇಳಿಬರುತ್ತಿದ್ದಂತೆಯೇ ಕೃಪಾ ಆಳ್ವಾ ಅವರಿಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿತ್ತು. ಆದರೆ ನಿಗದಿತ ಅವಧಿಯಲ್ಲಿ ಅವರು ಯಾವುದೇ ಸಮರ್ಪಕ ಉತ್ತರ ನೀಡದ ಕಾರಣ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನಿರ್ದೇಶನದಂತೆ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಇತ್ತೀಚೆಗಷ್ಟೇ ಉಚ್ಛಾಟಿಸಲಾಗಿತ್ತು. ಇದೀಗ ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕಿರುವುದು ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ತಂದುಕೊಟ್ಟಿದೆ.